• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ : ಬಸವರಾಜ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
September 8, 2023
in Top Story, ಕರ್ನಾಟಕ
0
ಬಸವರಾಜ ಬೊಮ್ಮಾಯಿ

ರಾಜ್ಯ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳನ್ನು ವಿರೋಧಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ

Share on WhatsAppShare on FacebookShare on Telegram

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಗ್ಯಾರೆಂಟಿಗಳ ಹೆಸರಲ್ಲಿ ದೊಡ್ಡ ಮೋಸ ಹಾಗೂ ವರ್ಗಾವಣೆ ದಂಧೆಯಲ್ಲಿ ಅಧಿಕಾರಿಗಳ ಹರಾಜು ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ADVERTISEMENT

ರಾಜ್ಯ ಸರ್ಕಾರದ ವೈಫಲ್ಯಗಳ ವಿರೋಧಿಸಿ ರಾಜ್ಯ ಬಿಜೆಪಿ ವತಿಯಿಂದ ಫ್ರೀಡಂ ಪಾರ್ಕ್ ನಲ್ಲಿ ಶುಕ್ರವಾರ (ಸೆಪ್ಟೆಂಬರ್ 8) ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮ ಸರ್ವೋಚ್ಚ ನಾಯಕ ಯಡಿಯೂರಪ್ಪ ಅವರ ನೇತರತ್ವದಲ್ಲಿ ಸರ್ಕಾರದ ವಿರುದ್ದ ರಣಕಹಳೆ ಊದಿದ್ದೇವೆ. ಇದನ್ನು ಮುಂದಿನ ಒಂದುವರ್ಷ ರಾಜ್ಯದ ಎಲ್ಲ ಮನೆಗಳಿಗೆ ತಲುಪಿಸಿ ಮತ್ತೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಹೋರಾಟ ಆರಂಭಿಸಿದ್ದೇವೆ ಎಂದರು.

ಬಸವರಾಜ ಬೊಮ್ಮಾಯಿ
ಗ್ಯಾರಂಟಿಗಳನ್ನು ವಿರೋಧಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನವರು, ಗ್ಯಾರೆಂಟಿಗಳ ಹೆಸರಿನಲ್ಲಿ ಸಹಿ ಮಾಡಿ ಕೊಟ್ಟರು, ಅದರೆ, ಈಗ ಯಾವುದೂ ಸಮರ್ಪಕ ಜಾರಿಮಾಡಿಲ್ಲ. ಹತ್ತು ಕೆಜಿ ಅಕ್ಕಿ ಕೊಡುವುದಾಗಿ ಹೇಳಿದ್ದರು. ಇವರು ಕೊಡುತ್ತಿರುವ ಐದು ಕೆಜಿ ಅಕ್ಕಿ ನರೇಂದ್ರ ಮೋದಿಯವರು ಕೊಡುತ್ತಿದ್ದಾರೆ. ಅಕ್ಕಿ ಬದಲು ಹಣ ಕೊಡುತ್ತೇವೆ ಅಂತ ಹೇಳಿ, ಗ್ರಾಮೀಣ ಮಹಿಳೆಯ ಅರ್ಧ ದಿನದ ಕೂಲಿಯಷ್ಟು ಹಣ ಕೊಡುತ್ತಿಲ್ಲ. ಅನ್ನ ಭಾಗ್ಯದಲ್ಲಿ ದ್ರೋಹ ಮಾಡಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.

ನವೆಂಬರ್ ಗೆ ರಾಜ್ಯ ಕತ್ತಲೆ

ರಾಜ್ಯದಲ್ಲಿ 200 ಯುನಿಟ್ ಫ್ರೀ ಕರೆಂಟ್ ಕೊಡುವುದಾಗಿ ಹೇಳಿ ಈಗ ರಾಜ್ಯದಲ್ಲಿ ಕರೆಂಟ್ ಸಿಗದ ಪರಿಸ್ಥಿತಿ ನಿರ್ಮಾಣ ಆಗಿದೆ. ಝಿರೊ ಕರೆಂಟ್ ಝಿರೊ ಬಿಲ್ ಯೋಜನೆ ಜಾರಿಗೆ ಬರುತ್ತದೆ. ವಿದ್ಯುತ್ ಉತ್ಪಾದನೆ ಕಡಿಮೆಯಾಗಿದೆ. ನವೆಂಬರ್ ನಿಂದ ರಾಜ್ಯದಲ್ಲಿ ಕತ್ತಲೆ ಆವರಿಸುತ್ತದೆ ಎಂದರು.

ಅಧಿಕಾರಿಗಳ ಹರಾಜು

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮೂರು ತಿಂಗಳಲ್ಲಿ ಭ್ರಷ್ಟಾಚಾರ ಜೋರಾಗಿದೆ. ಅಧಿಕಾರಿಗಳ ಹುದ್ದೆ ಹರಾಜು ಆಗುತ್ತಿವೆ. ವಿಧಾನಸೌಧ, ಕುಮಾರಕೃಪಾದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಅಂತ ಕಾಂಗ್ರೆಸ್ ನಾಯಕರೇ ಹೇಳುತ್ತಿದ್ದಾರೆ. ಬೆಂಗಳೂರಿನ ಹೊರ ವಲಯದ ಅಧಿಕಾರಿ ವರ್ಗಾವಣೆಗೆ 8 ಕೊಟ್ಟವನು ಬಿಟ್ಟು ಹೋದ ಮೇಲೆ ಅದೇ ಹುದ್ದೆಗೆ 13 ಕೋಟಿಗೆ ಹರಾಜಾಗಿದೆ ಎಂದು ಆರೋಪಿಸಿದರು.

ಬಿಜೆಪಿ ಕಾರ್ಯಕರ್ತರನ್ನು ಸಣ್ಣ ಪುಟ್ಟ ವಿಷಯಗಳಿಗೆ ಬಂಧನ ಮಾಡುತ್ತಿದ್ದಾರೆ. ಹಾಸನದ ಕಾರ್ಯಕರ್ತರನ್ನು ಬೆಂಗಳೂರಿಗೆ ತಂದು ವಿಚಾರಣೆ ನಡೆಸುತ್ತಿದ್ದಾರೆ. ಪೊಲಿಸ್ ಅಧಿಕಾರಿಗಳು ಕಾನೂನು ಪ್ರಕಾರ ಕೆಲಸ ಮಾಡಬೇಕು. ಮೂರು ತಿಂಗಳಲ್ಲಿ 172 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂತ್ರಿಗಳು ರೈತರು ಐದು ಲಕ್ಷ ಪರಿಹಾರಕ್ಕಾಗಿ ಸಾಯುತ್ತಾರೆ ಎಂದು ಹೇಳಿದ್ದಾರೆ. ಯಾರಾದರೂ ರೈತರು ಹಣಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರಾ ? ಯಡಿಯೂರಪ್ಪ ಅವರ ಕಾಲದಲ್ಲಿ ರೈತರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರಾಜ್ಯದ ರೈತರಿಗೆ ನಾಲ್ಕು ಸಾವಿರ ರೂ ಕೊಡುವುದನ್ನು ನಿಲ್ಲಿಸಿದ್ದಾರೆ. ನಾನು ಜಾರಿಗೆ ತಂದಿದ್ದ ರೈತ ವಿದ್ಯಾನಿಧಿ ಯೋಜನೆ ರದ್ದುಪಡಿಸಿದ್ದಾರೆ ಎಂದರು

ಸಿಎಂ ಸಿದ್ದರಾಮಯ್ಯ ಬಿಜೆಪಿಯವರು ನೀಚರು ಅಂತ ಹೇಳುತ್ತಾರೆ. ನೀವು ಒಂದು ಅಗಳು ಅಕ್ಕಿಯನ್ನು ನೀಡಿಲ್ಲ. ಜನರಿಗೆ ಅಕ್ಕಿ ಕೊಡುತ್ತಿರುವ ಮೋದಿಯವರು ನೀಚರಾ? ಒಂದು ಕಾಳು ಅಕ್ಕಿ ಕೊಡದ ನಿವು ನೀಚರಾ ಅಂತ ರಾಜ್ಯದ ಜನರು ಲೋಕಸಭೆ ಚುನಾವಣೆಯಲ್ಲಿ ಉತ್ತರ ಕೊಡುತ್ತಾರೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ. ಸದಾನಂದಗೌಡ , ಮಾಜಿ ಸಚಿವರಾದ ಆರ್ ಅಶೋಕ್, ಗೋಪಾಲಯ್ಯ, ಮುನಿರತ್ನ, ಬೈರತಿ ಬಸವರಾಜ, ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಮಾಜಿ ಸಚಿವರು ಶಾಸಕರು ಹಾಜರಿದ್ದರು.

Tags: Basavaraj BommaiCongress GovernmentGarenteesTransfer Scamಕಾಂಗ್ರೆಸ್‌ ಸರ್ಕಾರಗ್ಯಾರಂಟಿಗಳುಬಸವರಾಜ ಬೊಮ್ಮಾಯಿವರ್ಗಾವಣೆ ದಂಧೆ
Previous Post

ಬಿಜೆಪಿ-ಜೆಡಿಎಸ್ ಮೈತ್ರಿಗೆ ಅಮಿತ್ ಶಾ ಗ್ರೀನ್‌ ಸಿಗ್ನಲ್‌: 4 ಲೋಕಸಭಾ ಕ್ಷೇತ್ರಗಳಲ್ಲಿ ‘ತೆನೆ’ ಪಕ್ಷ ಸ್ಪರ್ಧೆ: ಬಿ.ಎಸ್‌ ಯಡಿಯೂರಪ್ಪ

Next Post

ಹೃದಯಾಘಾತದಿಂದ ಮೈಸೂರಿನಲ್ಲಿ ವ್ಯಂಗ್ಯಚಿತ್ರಕಾರ ಅಜಿತ್ ನಿನನ್ ನಿಧನ..!

Related Posts

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 
Top Story

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

by ಪ್ರತಿಧ್ವನಿ
April 16, 2026
0

ಬಹುಕೋಟಿ ರೂಪಾಯಿ ಸಾಲ ವಂಚನೆ ಪ್ರಕರಣದಲ್ಲಿ  ಇಡಿ ಮಹತ್ವದ ಕ್ರಮ ಕೈಗೊಂಡಿದ್ದು, ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ ಐದು ದಿನಗಳ ಕಸ್ಟಡಿಯನ್ನು ನ್ಯಾಯಾಲಯ ಮಂಜೂರು ಮಾಡಿದೆ.ಈ...

Read moreDetails
114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

April 16, 2026
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
Next Post
ಹೃದಯಾಘಾತದಿಂದ ಮೈಸೂರಿನಲ್ಲಿ ವ್ಯಂಗ್ಯಚಿತ್ರಕಾರ ಅಜಿತ್ ನಿನನ್ ನಿಧನ..!

ಹೃದಯಾಘಾತದಿಂದ ಮೈಸೂರಿನಲ್ಲಿ ವ್ಯಂಗ್ಯಚಿತ್ರಕಾರ ಅಜಿತ್ ನಿನನ್ ನಿಧನ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada