• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಎಲ್ಲರೊಂದಿಗೆ ಎಲ್ಲರ ವಿಕಾಸ, ವಿಶ್ವಾಸ ಹಾಗೂ ಪ್ರಯತ್ನದಿಂದ ಜಗತ್ತಿನ ಏಳಿಗೆ: ಪ್ರಧಾನಿ ಮೋದಿ

ಪ್ರತಿಧ್ವನಿ by ಪ್ರತಿಧ್ವನಿ
September 9, 2023
in Top Story, ಇದೀಗ, ದೇಶ, ರಾಜಕೀಯ
0
ಪ್ರಧಾನಿ ಮೋದಿ

ಜಿ 20 ಶೃಂಗಸಭೆಯಲಿ ಪ್ರಧಾನಿ ಮೋದಿ ಮಾತು

Share on WhatsAppShare on FacebookShare on Telegram

“ಭವಿಷ್ಯದ ಪೀಳಿಗೆಗೆ ಸುಂದರ ಜಗತ್ತನ್ನು ನೀಡುವ ಹೊಣೆಗಾರಿಕೆ ವರ್ತಮಾನದಲ್ಲಿರುವವರ ಮೇಲಿದೆ. ಅದನ್ನು ಸಾಕಾರಗೊಳಿಸಲು ಎಲ್ಲರೊಂದಿಗೆ ಎಲ್ಲರ ಏಳಿಗೆ, ಎಲ್ಲರ ವಿಶ್ವಾಸ ಮತ್ತು ಪ್ರತಿಯೊಬ್ಬರ ಪ್ರಯತ್ನದಿಂದ (ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್, ಸಬ್ ಕಾ ಪ್ರಯಾಸ್) ಸಾಧ್ಯವಾಗಲಿದೆ” ಎಂದು ಪ್ರಧಾನಿ ಮೋದಿ ಹೇಳಿದರು.

ADVERTISEMENT

ದೆಹಲಿಯಲ್ಲಿ ಶನಿವಾರ (ಸೆಪ್ಟೆಂಬರ್‌ 9) ಆರಂಭವಾಗಿರುವ ಜಿ 20 ಶೃಂಗಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಮಾನವರ ಕಲ್ಯಾಣ ಹಾಗೂ ಸುಖವು ಸದಾ ಖಾತ್ರಿಯಾಗಿರಬೇಕು’ ಎಂದು ಎರಡೂವರೆ ಸಾವಿರ ವರ್ಷಗಳ ಹಿಂದೆಯೇ ಭಾರತ ಇಡೀ ಜಗತ್ತಿಗೆ ಸಾರಿದೆ. ಈ ಸಾಲುಗಳನ್ನು ನೆನಪಿಸಿಕೊಳ್ಳುತ್ತ, 21ನೇ ಶತಮಾನದಲ್ಲಿ ಇಡೀ ಜಗತ್ತಿಗೆ ಹೊಸ ಆಯಾಮ ನೀಡುವ ಮಹತ್ವಪೂರ್ಣ ಸಮಯವನ್ನು ಸದ್ಬಳಕೆ ಮಾಡಿಕೊಳ್ಳೋಣ” ಎಂದು ಹೇಳಿದರು.

ಕಳೆದ ಹಲವು ವರ್ಷಗಳಿಂದ ಜಗತ್ತನ್ನು ಕಾಡುತ್ತಿರುವ ಸಮಸ್ಯೆಗಳಿಗೆ ಹೊಸ ಆಯಾಮದ ಮಾರ್ಗೋಪಾಯಗಳನ್ನು ಕಂಡುಕೊಳ್ಳಬೇಕಿದೆ. ಮಾನವತೆಯನ್ನು ಕೇಂದ್ರೀಕರಿಸಿಕೊಂಡು ಹೊಸ ದಿಕ್ಕಿನೆಡೆಗೆ ಸಾಗಬೇಕಾಗಿದೆ ಎಂದು ಪ್ರಧಾನಿ ಮೋದಿ ವಿಶ್ವ ನಾಯಕರಿಗೆ ಹೇಳಿದರು.

“ಕೋವಿಡ್ ನಂತರದಲ್ಲಿ ದೊಡ್ಡ ರೀತಿಯ ಸಂಕಷ್ಟ ಇಡೀ ಜಗತ್ತನ್ನು ಕಾಡುತ್ತಿದೆ. ಕೋವಿಡ್ ಹಿಮ್ಮೆಟ್ಟಿಸುವುದು ಸಾಧ್ಯವಾಗಲಿದೆಯಾದರೆ, ನಾವು ಈಗ ಎದುರಿಸುತ್ತಿರುವ ಸಂಕಷ್ಟಗಳನ್ನೂ ನಿವಾರಿಸಲು ಸಾಧ್ಯವಿದೆ ಎಂಬ ವಿಶ್ವಾಸವನ್ನು ಹೊಂದಬೇಕಾಗಿದೆ. ಆದರೆ ನಡೆಯುತ್ತಿರುವ ಯುದ್ಧಗಳು ಜಗತ್ತಿನಲ್ಲಿ ವಿಶ್ವಾಸದ ಕೊರತೆಯನ್ನು ಸೂಚಿಸುತ್ತಿವೆ” ಎಂದು ರಷ್ಯಾ-ಉಕ್ರೇನ್ ನಡುವಿನ ಯುದ್ಧ ಕುರಿತು ಪರೋಕ್ಷವಾಗಿ ಹೇಳಿದರು.

“ಜಗತ್ತಿನಲ್ಲಿ ದೇಶಗಳ ನಡುವೆ ಆರ್ಥಿಕ ಅಸಮಾನತೆ ಇದೆ. ಉತ್ತರ ಹಾಗೂ ದಕ್ಷಿಣ ಎಂಬ ವಿಭಜನೆ ಇದೆ. ಪೂರ್ವ ಹಾಗೂ ಪಶ್ಚಿಮಗಳೂ ದೂರ ಎಂಬ ಭಾವನೆ. ಇವೆಲ್ಲವನ್ನೂ ಉತ್ತಮ ಸಂಬಂಧಗಳ ಮೂಲಕ ಹತ್ತಿರವಾಗಿಸಲು ಸಾಧ್ಯವಿದೆ. ಅಹಾರ, ತೈಲದ ಅಭಾವ, ಭಯೋತ್ಪಾದನೆ ಮತ್ತು ಸೈಬರ್ ಸುರಕ್ಷತೆ, ಆರೋಗ್ಯ, ಇಂಧನ, ನೀರಿನ ಭದ್ರತೆ ಹೀಗೆ ಭವಿಷ್ಯದ ಪೀಳಿಗೆಗಳಿಗೆ ಇವೆಲ್ಲವೂ ಸಿಗಬೇಕಾದಲ್ಲಿ ನಾವೆಲ್ಲರೂ ಒಗ್ಗಟ್ಟಿನಲ್ಲಿ ಸಾಗಬೇಕಿದೆ” ಎಂದು ತಿಳಿಸಿದರು.

ಭಾರತದಲ್ಲಿ ಜಿ 20 ಶೃಂಗಸಭೆ ಆಯೋಜನೆಗೊಂಡಿರುವುದರಿಂದ ದೇಶದ ಒಳಗೆ ಹಾಗೂ ದೇಶದ ಹೊರಗೆ ಎಲ್ಲರನ್ನೂ ಒಳಗೊಳ್ಳುವ ಪ್ರಕ್ರಿಯೆ ನಡೆದಿದೆ. ಇಡೀ ದೇಶದ 140 ಕೋಟಿ ಜನ ಇದರಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಪಾಲ್ಗೊಂಡಿದ್ದಾರೆ. ದೇಶದ 70ಕ್ಕೂ ಹೆಚ್ಚು ನಗರಗಳಲ್ಲಿ 200ಕ್ಕೂ ಅಧಿಕ ಸಮಾವೇಶಗಳು ನಡೆದಿವೆ ಎಂದು ಪ್ರಧಾನಿ ಮೋದಿ ವಿವರಿಸಿದರು.

ಇದೇ ಸಂದರ್ಭದಲ್ಲಿ ಆಫ್ರಿಕಾದ ಒಕ್ಕೂಟಕ್ಕೆ ಜಿ 20ರ ಸ್ಥಾಯಿ ಸದಸ್ಯತ್ವ ನೀಡಬೇಕು ಎಂಬ ಪ್ರಸ್ತಾಪವನ್ನು ಪ್ರಧಾನಿ ಮೋದಿ ಮುಂದಿಟ್ಟರು. ವಿಶ್ವ ನಾಯಕರ ಒಪ್ಪಿಗೆಯಂತೆ ಆಫ್ರಿಕಾದ ಒಕ್ಕೂಟದ ಪ್ರತಿನಿಧಿಯನ್ನು ಸಭೆಗೆ ಆಹ್ವಾನಿಸಿದರು. ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಒಕ್ಕೂಟದ ಪ್ರತಿನಿಧಿಯನ್ನು ಕರೆತಂದರೆ, ಪ್ರಧಾನಿ ಮೋದಿ ಅವರನ್ನು ಆಲಂಗಿಸಿ, ಬೆನ್ನು ತಟ್ಟಿ ನಿಗದಿತ ಆಸನದಲ್ಲಿ ಕೂರಿಸಿದರು.

ಮಾತು ಆರಂಭಕ್ಕೂ ಮೊದಲು, ಮೊರಾಕೊದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಜಿ 20 ರಾಷ್ಟ್ರಗಳ ಪರವಾಗಿ ಅಧ್ಯಕ್ಷತೆ ವಹಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸಾಂತ್ವನ ಹೇಳಿದರು. ಮೊರಾಕೊ ಜನರ ನೆರವಿಗೆ ಎಲ್ಲಾ ರಾಷ್ಟ್ರಗಳು ಸದಾ ಸಿದ್ಧ. ಇಡೀ ವಿಶ್ವವೇ ಮೊರಾಕೊ ಜತೆಗಿದೆ ಎಂದು ಹೇಳಿದರು.

ಜಿ 20 ಶೃಂಗಸಭೆಗೆ ಬಂದಿರುವ ಮುಖಂಡರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಕೊನಾರ್ಕ್ನ ಕಲ್ಲಿನ ಚಕ್ರದ ಪ್ರತಿಕೃತಿ ಇರುವ ಗೋಡೆಯ ಬಳಿ ಸ್ವಾಗತಿಸಿದರು. ಜತೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಕೂರುವ ಆಸನಕ್ಕೆ ‘ಭಾರತ್’ ಎಂದು ಬರೆದಿರುವುದು ಗಮನ ಸೆಳೆಯಿತು.

Tags: G 20 SummitNew DelhiPM ModiPM Narendra Modiಜಿ 20 ಶೃಂಗಸಭೆದೆಹಲಿಪ್ರಧಾನಿ ನರೇಂದ್ರ ಮೋದಿಪ್ರಧಾನಿ ಮೋದಿ
Previous Post

ಜಿ 20 ಶೃಂಗಸಭೆ | ಆಫ್ರಿಕನ್ ಒಕ್ಕೂಟ ಅಧಿಕೃತ ಸೇರ್ಪಡೆ ; ಪ್ರಧಾನಿ ಮೋದಿ ಘೋಷಣೆ

Next Post

ಜಿ 20 ಶೃಂಗಸಭೆ | ಇಂಡಿಯಾ ಬದಲಿಗೆ ʼಭಾರತ್ʼ ಹೆಸರಿನ ನಾಮಫಲಕ ಪ್ರದರ್ಶನ

Related Posts

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
0

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ಇಂದು ಲೋಕಸಭೆಯಲ್ಲಿ 2026–27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದು, ಮಧ್ಯಮ ವರ್ಗದ ತೆರಿಗೆದಾರರನ್ನು ಗಮನದಲ್ಲಿಟ್ಟುಕೊಂಡು ಆದಾಯ...

Read moreDetails
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
Next Post
ಜಿ 20 ಶೃಂಗಸಭೆ

ಜಿ 20 ಶೃಂಗಸಭೆ | ಇಂಡಿಯಾ ಬದಲಿಗೆ ʼಭಾರತ್ʼ ಹೆಸರಿನ ನಾಮಫಲಕ ಪ್ರದರ್ಶನ

Please login to join discussion

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!