ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಬಿ.ವಿ ಕಕ್ಕಿಲ್ಲಾಯ ಪ್ರತಿಷ್ಠಾನ ಆಯೋಜಿಸಿರುವ ಶಂಸುಲ್ ಇಸ್ಲಾಂ ಅವರ ಉಪಾನ್ಯಾಸ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸಿ ಎಬಿವಿಪಿ ಕಾರ್ಯಕರ್ತರು ಶನಿವಾರ (ಸೆಪ್ಟೆಂಬರ್ 9) ಪ್ರತಿಭಟನೆ ನಡೆಸುತ್ತಿದ್ದಾರೆ.
ಮೊದಲ ಸ್ವಾತಂತ್ರ್ಯ ಸಂಗ್ರಾಮ 1857- ಜಂಟಿ ಬಲಿದಾನಗಳು, ಜಂಟಿ ವಾರಸುದಾರಿಕೆ ಕುರಿತು ದೆಹಲಿ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಶಂಸುಲ್ ಅವರ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ.
ಶಂಸುಲ್ ಇಸ್ಲಾಂ ಅವರಂತಹ ವಿವಾದಾತ್ಮಕ ವ್ಯಕ್ತಿಗಳನ್ನು ಕಾರ್ಯಕ್ರಮಕ್ಕೆ ಕರೆಸಿ ಕಾಲೇಜಿನಲ್ಲಿ ಸಂಘರ್ಷ ವಾತಾವರಣ ಸೃಷ್ಠಿಸಲಾಗುತ್ತಿದೆ ಎಂದು ಎಬಿವಿಪಿ ಕಾರ್ಯಕರ್ತರು ಆರೋಪಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಕಾಲೇಜು ವಿದ್ಯಾರ್ಥಿಗಳನ್ನು ಹೊರತು ಪಡಿಸಿ ಪ್ರತಿಭಟನೆಗೆ ಬಂದು ವಿರೋಧಿ ಘೋಷಣೆ ಕೂಗಿದ 10ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದರು.
ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಉಪನ್ಯಾಸ ಕಾರ್ಯಕ್ರಮ ಆರಂಭವಾಗಿದ್ದು, ಕಾಲೇಜಿನ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.