• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಧಿಕಾರಿಗಳು ದಕ್ಷತೆಯಿಂದ ಕೆಲಸ ಮಾಡಿ ಜನರ ನಿರೀಕ್ಷೆಗೆ ಸ್ಪಂದಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
September 12, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳ ಜೊತೆ ಸಭೆ

Share on WhatsAppShare on FacebookShare on Telegram

ತಾಲ್ಲೂಕು ಮಟ್ಟದಲ್ಲಿ ಸಚಿವರು, ಶಾಸಕರನ್ನು ಆಹ್ವಾನಿಸಿ, ಜನ ಸಂಪರ್ಕ ಸಭೆಗಳನ್ನು ವಾರಕ್ಕೊಮ್ಮೆ ನಡೆಸಿ ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಿದರು.

ADVERTISEMENT

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಂಗಳವಾರ (ಸೆಪ್ಟೆಂಬರ್ 11) ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಅವರು ಮಾತನಾಡಿದರು.

ನಾಡಿನ ಜನತೆ ಸಣ್ಣ ಪುಟ್ಟ ಸಮಸ್ಯೆಗಳಿಗೂ ನನ್ನ ಬಳಿಗೆ ಬರುತ್ತಾರೆ ಎಂದರೆ ನೀವುಗಳು ಇದ್ದು ಏನು ಪ್ರಯೋಜನ ಎಂದು ಜಿಲ್ಲಾಧಿಕಾರಿಗಳಿಗೆ ಪ್ರಶ್ನಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳ ಜೊತೆ ಸಭೆ

ಮುಖ್ಯಮಂತ್ರಿಯಾದ ಬಳಿಕ ನಾನು ಹಲವಾರು ಜಿಲ್ಲೆಗಳಿಗೆ ಭೇಟಿ ನೀಡಿದ್ದೆ. ಆ ವೇಳೆ ಜನ ಸಾಮಾನ್ಯರು ನೂರಾರು ರೀತಿಯ ಮನವಿಗಳನ್ನು ನನಗೆ ನೀಡುತ್ತಿದ್ದಾರೆ. ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಬಗೆಹರಿಸಬೇಕಾದ ಸಮಸ್ಯೆಗಳನ್ನು ಹೊತ್ತುಕೊಂಡು ಜನ ನನ್ನ ಬಳಿ ಬರುತ್ತಿದ್ದಾರೆ. ನೀವು ಸ್ಥಳೀಯವಾಗಿ ಜನ ಸಂಪರ್ಕ ಸಭೆ ನಡೆಸಿ ಸ್ಪಂದಿಸಿ ಸ್ಥಳದಲ್ಲೇ ಪರಿಹಾರ ಕೊಟ್ಟಿದ್ದರೆ ಹೀಗೆ ಆಗುತ್ತಿರಲಿಲ್ಲ. ಕೆಲವೊಂದು ಸಮಸ್ಯೆಗಳಿಗೆ ವಾರದ ಕಾಲ ಮಿತಿಯಲ್ಲಿ ಪರಿಹಾರ ಒದಗಿಸಿ ಕೊಡಿ. ಕೆಲಸ ಆಗಿದೆಯಾ , ಇಲ್ಲವಾ ಎನ್ನುವುದನ್ನು ಮರು ಪರೀಕ್ಷಿಸಿ. ಆಗ ಸ್ಥಳೀಯ ಸಮಸ್ಯೆಗಳಿಗಾಗಿ ಜನತೆ ಬಸ್ ಚಾರ್ಜ್ ಖರ್ಚು ಮಾಡಿಕೊಂಡು ನನ್ನ ತನಕ ಬರುವ ಅಗತ್ಯವೇ ಬೀಳುವುದಿಲ್ಲ ಎಂದು ತಿಳಿಸಿದರು.

ಕೇವಲ ಬದಲಾವಣೆಗಾಗಿ ನಾಡಿನ ಜನತೆ ಸರ್ಕಾರವನ್ನು ಬದಲಾಯಿಸಿಲ್ಲ. ಬಹಳ ನಿರೀಕ್ಷೆಗಳನ್ನು ಇಟ್ಟುಕೊಂಡು ಹಿಂದಿನ ಸರ್ಕಾರವನ್ನು ಬದಲಾಯಿಸಿ ನಮ್ಮನ್ನು ಅಧಿಕಾರಕ್ಕೆ ತಂದಿದ್ದಾರೆ. ಅಭಿವೃದ್ಧಿಯ ಆಶೋತ್ತರಗಳನ್ನು ಇಟ್ಟುಕೊಂಡ ಜನರ ನಿರೀಕ್ಷೆಗಳಿಗೆ ತಕ್ಕಂತೆ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಶಾಸಕರು, ಮಂತ್ರಿಗಳು, ಅಧಿಕಾರಿಗಳು ಜನ ಸೇವಕರು. ಈ ಸಾಮಾನ್ಯ ತಿಳಿವಳಿಕೆ ಪ್ರತಿಯೊಬ್ಬರಲ್ಲೂ ಇರಬೇಕು. ನಾವ್ಯಾರು ರಾಜರುಗಳಲ್ಲ. ನ್ಯಾಯ ವಿಳಂಬ ಸರ್ಕಾರ ಸುತಾರಾಂ ಸಹಿಸಲ್ಲ. ತಹಸೀಲ್ದಾರ್, ಉಪವಿಭಾಗಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಬರುವ ಅರ್ಜಿಗಳು 5 ವರ್ಷಕ್ಕೂ ಹೆಚ್ಚು ಅವಧಿಗೆ ಬಾಕಿ ಉಳಿದಿರುವುದನ್ನು ಗಮನಿಸಲಾಗಿದೆ. 5 ವರ್ಷವಾದರೂ ಪ್ರಕರಣ ಇತ್ಯರ್ಥಪಡಿಸದೆ ಇದ್ದರೆ, ನೀವು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಅರ್ಥ. Justice delayed is justice denied – ವಿಳಂಬ ಜಾಸ್ತಿಯಾದಷ್ಟು ಭ್ರಷ್ಟಾಚಾರಕ್ಕೆ ಅವಕಾಶವಾಗುತ್ತದೆ. ವಿಳಂಬವೂ ಭ್ರಷ್ಟಾಚಾರವೇ. ವಿಳಂಬ ಮಾಡಿದರೆ ತಹಸೀಲ್ದಾರರು ಒಂದು ಅರ್ಜಿಯನ್ನು ಸ್ವೀಕರಿಸಿದರೆ, ಮೂರು ತಿಂಗಳಲ್ಲಿ ಇತ್ಯರ್ಥವಾಗಬೇಕು. ಉಪವಿಭಾಗಾಧಿಕಾರಿಗಳ ಬಳಿ ಬರುವ ಮನವಿಗಳ ಇತ್ಯರ್ಥಕ್ಕೆ ಬಹಳ ವಿಳಂಬ ಮಾಡ್ತಾರೆ. ಇದನ್ನು ಕನಿಷ್ಠ ಆರು ತಿಂಗಳಲ್ಲಿ ಹಾಗೂ ಜಿಲ್ಲಾಧಿಕಾರಿಗಳು ಒಂದು ವರ್ಷದಲ್ಲಿ ಇತ್ಯರ್ಥ ಮಾಡಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳು ಅನಗತ್ಯವಾಗಿ ಪ್ರಕರಣ ಮುಂದೂಡುವುದು, ಕಕ್ಷಿದಾರರನ್ನು ಕಾಯಿಸುವುದು, ವಾದ-ವಿವಾದಗಳನ್ನು ಆಲಿಸಿದ ನಂತರ ತೀರ್ಪು ಬರೆಯಲು ವಿಳಂಬ ಮಾಡುವುದು ತರವಲ್ಲ. ಪ್ರಕರಣ ಇತ್ಯರ್ಥಗೊಳಿಸಲು ವಿಳಂಬ ಮಾಡಿದರೆ ನಮ್ಮ ಸರ್ಕಾರ ಸಹಿಸಲ್ಲ. ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಸಂಪುಟದ ಇತರ ಸದಸ್ಯರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Tags: CM SiddaramaiahDistrict Commissionersಜಿಲ್ಲಾಧಿಕಾರಿಗಳುಮುಖ್ಯಮಂತ್ರಿ ಸಿದ್ದರಾಮಯ್ಯ
Previous Post

ಗೃಹಲಕ್ಷ್ಮಿ ಯೋಜನೆ ನೋಂದಣಿ ಪ್ರಕ್ರಿಯೆ ಸ್ಥಗಿತವಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ

Next Post

ಮನುಷ್ಯತ್ವ ಇಲ್ಲದವರು ಸಾರ್ವಜನಿಕ ಸೇವೆಗೆ ಬರಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ
ಕರ್ನಾಟಕ

ಮಧ್ಯಾಹ್ನ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಡಿಕೆಶಿ ಮುಂದಿನ ಸಿಎಂ ಬಹುತೇಕ ಖಚಿತ?

by ಪ್ರತಿಧ್ವನಿ
May 28, 2026
0

ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಬೆಳಿಗ್ಗೆ ತಮ್ಮ ಅಧಿಕೃತ ನಿವಾಸದಲ್ಲಿ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ರಾಜ್ಯಸಭೆ ಸ್ಥಾನಕ್ಕೆ ಸಿದ್ದರಾಮಯ್ಯ ನಿರಾಸಕ್ತಿ? ರಾಜ್ಯ ರಾಜಕೀಯದಲ್ಲೇ ಮುಂದುವರಿಯಲು ಸಿಎಂ ಮನಸ್ಸು!

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

May 28, 2026
ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

May 28, 2026
ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

May 28, 2026
Next Post
ಮುಖ್ಯಮಂತ್ರಿ ಸಿದ್ದರಾಮಯ್ಯ

ಮನುಷ್ಯತ್ವ ಇಲ್ಲದವರು ಸಾರ್ವಜನಿಕ ಸೇವೆಗೆ ಬರಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada