• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಿದ್ದರಾಮಯ್ಯನನ್ನು ಕೆಣಕಿ ಬೆಪ್ಪಾದ ಎಂಎಲ್​ಸಿ ಹರಿಪ್ರಸಾದ್​..! ರಾಹುಲ್​ ಗಾಂಧಿ ಗರಂ..

ಕೃಷ್ಣ ಮಣಿ by ಕೃಷ್ಣ ಮಣಿ
September 13, 2023
in ಕರ್ನಾಟಕ, ರಾಜಕೀಯ
0
ಬಿಜೆಪಿ 100 ಕೋಟಿ ಡೋಸ್ ಕೊಟ್ಟಿದ್ದೇವೆ ಎಂದು ಸಂಭ್ರವಿಸುವ ಬದಲು, ದೇಶದ ಜನರಲ್ಲಿ ಕ್ಷಮೆ ಕೋರಲಿ: ಬಿ.ಕೆ ಹರಿಪ್ರಸಾದ್
Share on WhatsAppShare on FacebookShare on Telegram

ರಾಜ್ಯದಲ್ಲಿ ಹರಿಪ್ರಸಾದ್​ ಜನನಾಯಕನಲ್ಲ. ಆದರೂ ಸದಾಕಾಲ ಅಧಿಕಾರ ಅನುಭವಿಸುವುದರಲ್ಲಿ ಎತ್ತಿದ ಕೈ ಎಂದೇ ಹೇಳಬಹುದು. ಯಾವುದೇ ಒಂದೇ ಒಂದು ಚುನಾವಣೆಯಲ್ಲು ಗೆಲ್ಲುವುದಕ್ಕೆ ಸಾಧ್ಯವಾಗಿಲ್ಲ. ಅಥವಾ ಯಾರೊಬ್ಬರನ್ನು ಗೆಲ್ಲಿಸಿಕೊಂಡು ಬರುವಂತಹ ಸಾಮರ್ಥ್ಯವೂ ಇಲ್ಲ. ಆದರೂ ಹೈಕಮಾಂಡ್​ ಅಂಗಳದಲ್ಲಿ ಸದಾಕಾಲ ಕಾಣಿಸಿಕೊಂಡು, ತನಗೆ ಬೇಕಾದ ಹುದ್ದೆಗಳನ್ನು ಪಡೆದುಕೊಳ್ಳುವುದು. ತನಗೆ ಬೇಕಾದವರಿಗೆ ಟಿಕೆಟ್​ ಕೊಡಿಸುವ ಕೆಲಸ ಮಾಡುವುದು ಹರಿಪ್ರಸಾದ್​ಗೆ ಮೂರ್ನಾಲ್ಕು ದಶಕಗಳಿಂದ ಹೇಳಿ ಮಾಡಿಸಿದ ಕೆಲಸ. ಇದೀಗ ರಾಜ್ಯದಲ್ಲಿ ಎಂಎಲ್​ಸಿ ಆಗಿದ್ದು, ಸಚಿವ ಸ್ಥಾನ ಸಿಗಲಿಲ್ಲ ಎನ್ನುವ ಕಾರಣಕ್ಕೆ ಸಮಾನಮನಸ್ಕ ವೇದಿಕೆ ಎಂದು ಹೆಸರಿಟ್ಟು ಸ್ವತಃ ಕಾಂಗ್ರೆಸ್​ ಪಕ್ಷ ಹಾಗು ಸಿದ್ದರಾಮಯ್ಯ ವಿರುದ್ಧ ಹರಿಹಾಯುವುದಕ್ಕೆ ವೇದಿಕೆ ಮಾಡಿಕೊಂಡಿದ್ದು ಹೈಕಮಾಂಡ್​ ಕೆಂಗಣ್ಣಿಗೆ ಗುರಿಯಾಗಿದೆ.

ADVERTISEMENT

10 ದಿನದಲ್ಲಿ ಉತ್ತರಿಸುವಂತೆ ಬಿ.ಕೆ.ಹರಿಪ್ರಸಾದ್‌ಗೆ ನೋಟಿಸ್‌!

ಕಾಂಗ್ರೆಸ್​ MLC ಬಿ.ಕೆ ಹರಿಪ್ರಸಾದ್​ಗೆ AICC ಶೋಕಾಸ್ ನೊಟೀಸ್ ಜಾರಿ ಮಾಡಿದೆ. ಮುಂದಿನ 10 ದಿನಗಳ ಒಳಗೆ ಉತ್ತರ ನೀಡುವಂತೆ ನೋಟಿಸ್​ನಲ್ಲಿ ತಿಳಿಸಲಾಗಿದೆ. ಕಾಂಗ್ರೆಸ್​​ ಪಕ್ಷದ ಶಿಸ್ತು ಉಲ್ಲಂಘನೆ ಮಾಡಲಾಗಿದೆ ಎಂದು ನೋಟಿಸ್​ ನೀಡಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಪದೇ ಪದೇ ಮಾತನಾಡುತ್ತಿರುವುದಕ್ಕೆ ಕಾರಣ ಕೇಳಲಾಗಿದೆ. ಸೆಪ್ಟೆಂಬರ್​ 9ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದಿದ್ದ ಸಮಾನ ಮನಸ್ಕರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ಮಾಡಿದ್ದರಿಂದ ನೊಟೀಸ್​ ಜಾರಿ ಮಾಡಲಾಗಿದೆ. ಬಿಜೆಪಿ ಸೇರಿದಂತೆ ಇತರೆ ಪಕ್ಷಗಳ ನಾಯಕರ ಜೊತೆ ವೇದಿಕೆ ಹಂಚಿಕೊಂಡಿದ್ದಕ್ಕೂ ಪ್ರಶ್ನೆ ಮಾಡಲಾಗಿದೆ. ಇಂತಹ ಹೇಳಿಕೆಗಳಿಂದ OBC ಹಾಗು SC ಸಮುದಾಯದ ಮೇಲೆ ಪ್ರತಿಕೂಲ ಪ್ರಭಾವ ಬೀರಲಿದೆ. ಹಿರಿಯ ನಾಯಕರಾಗಿದ್ದುಕೊಂಡು ಹೇಳಿಕೆಗಳ ಬಗ್ಗೆ ಜಾಗೃತರಾಗಿರಬೇಕು. ಪಕ್ಷಕ್ಕೆ ಡ್ಯಾಮೇಜ್​ ಆಗುವ ಹೇಳಿಕೆ ಸರಿಯಲ್ಲ ಎಂದು ಸಲಹೆ ಕೂಡ ನೀಡಲಾಗಿದೆ.

ಹೈಕಮಾಂಡ್​ ಅಂಗಳದಲ್ಲಿ ಪ್ರಭಾವ ಕಡಿಮೆ ಆಯ್ತಾ..?

ರಾಹುಲ್‌ ಗಾಂಧಿ
ರಾಹುಲ್‌ ಗಾಂಧಿ

ಕಾಂಗ್ರೆಸ್​ ಹೈಕಮಾಂಡ್​ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ನಾಯಕ ಅನ್ನೋ ರೀತಿ ಪ್ರತಿಕ್ರಿಯೆ ನೀಡುತ್ತಿದ್ದ ಹರಿಪ್ರಸಾದ್​​ ವಿರುದ್ಧ ಹೈಕಮಾಂಡ್​ ಕೂಡ ಕೆಂಡಾಮಂಡಲ ಆಗಿದೆ ಎನ್ನಲಾಗಿದೆ. ಸಿದ್ದರಾಮಯ್ಯ ವಿರುದ್ಧ ಪರೋಕ್ಷ ನಿಂದನೆಗೆ ಹೈಕಮಾಂಡ್​ ಕೆಂಡಾಮಂಡಲವಾಗಿದ್ದು, ರಾಹುಲ್​ಗಾಂಧಿ ಹಾಗು ಮಲ್ಲಿಕಾರ್ಜುನ ಖರ್ಗೆ ಅವರ ಸೂಚನೆ ಮೇರೆಗೇ ನೋಟಿಸ್​ ಜಾರಿಯಾಗಿದೆ ಎನ್ನಲಾಗಿದೆ. ಹರಿಪ್ರಸಾದ್​ ಭಾಷಣದ ಸಂಪೂರ್ಣ ವಿಡಿಯೋ ಭಾಷಾಂತರ ಮಾಡಿ ಹೈಕಮಾಂಡ್​ಗೆ ಕಳುಹಿಸಿದ್ದು, ಲೋಕಸಭೆ ಚುನಾವಣೆ ಹಿನ್ನಲೆ ಡ್ಯಾಮೇಜ್​ ಕಂಟ್ರೋಲ್​ಗೆ ಹೈಕಮಾಂಡ್​ ಯತ್ನ ಮಾಡಿದೆ. ಒಂದು ವೇಳೆ ಸಿಎಂ ಸಿದ್ದರಾಮಯ್ಯ ವರ್ಚಸ್ಸಿಗೆ ಧಕ್ಕೆಯಾದ್ರೆ ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರಲಿದೆ ಎನ್ನುವ ಕಾರಣಕ್ಕೆ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ.

ಸಿದ್ದರಾಮಯ್ಯ ಬಣ ತಿರುಗಿ ಬಿದ್ದಾಗಲೂ ವ್ಯಂಗ್ಯ ಮಾಡಿದ್ದ ಹರಿಪ್ರಸಾದ್​..!

ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಅವರ ಹೆಸರು ಹೇಳದೆ ಟೀಕಿಸಿದ್ದ ಹರಿಪ್ರಸಾದ್​ ಮಾತಿಗೆ ಸಿದ್ದರಾಮಯ್ಯ ನುಣುಚಿಕೊಳ್ಳುವ ಹೇಳಿಕೆ ನೀಡಿದ್ದರು. ನನ್ನ ಹೆಸರು ಹೇಳಿದ್ದಾರಾ..? ಎಂದು ಪ್ರಶ್ನೆ ಮಾಡುವ ಮೂಲಕ ಜನರಲ್​ ಸ್ಟೇಟ್​ಮೆಂಟ್​ಗೆ ನಾನು ಉತ್ತರ ಕೊಡಲ್ಲ ಎಂದಿದ್ದರು. ಆದರೆ ಸಿದ್ದರಾಮಯ್ಯ ಬಣ ಮಾತ್ರ ತಿರುಗಿ ಬಿದ್ದಿತ್ತು. ಹರಿಪ್ರಸಾದ್​ ಹೇಳಿಕೆಯನ್ನು ಖಂಡಿಸಿದ್ದು ಮಾತ್ರವಲ್ಲದೆ, ಹೈಕಮಾಂಡ್​ ಈ ಬಗ್ಗೆ ಕ್ರಮ ತೆಗೆದುಕೊಳ್ಳಲಿದೆ ಎನ್ನುವ ಆಶಯ ಕೂಡ ವ್ಯಕ್ತವಾಗಿತ್ತು. ಇಷ್ಟೆಲ್ಲಾ ಆದ ಬಲಿಕವೂ ದೂರು ನೀಡುವುದಾದರೆ ನೀಡಲಿ ಎನ್ನುವ ಮೂಲಕ ನಾನು ಡೋಂಟ್​ಕೇರ್​ ಮಾಸ್ಟರ್​ ಎನ್ನುವಂತೆ ಪ್ರತಿಕ್ರಿಯೆ ನೀಡಿದ್ದರು. ಇದೀಗ AICC ಖುದ್ದು ನೋಟಿಸ್​ ನೀಡಿದ್ದು, ಇದೀಗ ಹರಿಪ್ರಸಾದ್​ ಉತ್ತರ ಏನು ಅನ್ನೋದು ಯಕ್ಷಪ್ರಶ್ನೆ ಆಗಿದೆ. ಆದರೆ ಸಿಎಂ ಸಿದ್ದರಾಮಯ್ಯ ಮಾತ್ರ ನೋಟಿಸ್​ ಕೊಟ್ಟಿದ್ದಾರಾ..? ನನಗೆ ಆ ಬಗ್ಗೆ ಏನೂ ಗೊತ್ತಿಲ್ಲ ಎನ್ನುವ ಮೂಲಕ ಅಂತರ ಕಾಯ್ದುಕೊಂಡಿದ್ದಾರೆ.

ಕೃಷ್ಣಮಣಿ

Tags: AICCBJPBK HariprasadcmsiddaramiahCongress PartyKPCCRahul Gandhi
Previous Post

ತಮಿಳುನಾಡಿಗೆ ಕಾವೇರಿ ನೀರು.. ಕರ್ನಾಟಕ ಕಂಗಾಲು.. ಹೊಸ ದಾರಿ ಹುಡುಕಿದ ಸರ್ಕಾರ..

Next Post

 ಸರ್ಕಾರಿ ಯೋಜನೆ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಕಾನೂನು ಸಮರಕ್ಕೆ ಸಿದ್ಧ ಎಂದ ಸುಧೀರ್‌ ಚೌಧರಿ

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ರಾಜಕೀಯ

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 26, 2026
0

ಬೆಂಗಳೂರು, ಏ.26: ರಾಜಕೀಯ ವಿಚಾರಗಳನ್ನು ಇನ್ನು ಮುಂದೆ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. “ಯಾವಾಗ ಏನು ಆಗಬೇಕೋ ಅದು ಆಗುತ್ತದೆ....

Read moreDetails
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
Next Post
 ಸರ್ಕಾರಿ ಯೋಜನೆ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಕಾನೂನು ಸಮರಕ್ಕೆ ಸಿದ್ಧ ಎಂದ ಸುಧೀರ್‌ ಚೌಧರಿ

 ಸರ್ಕಾರಿ ಯೋಜನೆ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಕಾನೂನು ಸಮರಕ್ಕೆ ಸಿದ್ಧ ಎಂದ ಸುಧೀರ್‌ ಚೌಧರಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada