• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ತಮ್ಮ ಸರ್ಕಾರ ತೆಗೆದವರನ್ನೇ ತಬ್ಬಿಕೊಳ್ಳುವ ದುಸ್ಥಿತಿಗೆ ಕುಮಾರಸ್ವಾಮಿ ಇಳಿದಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
September 15, 2023
in ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಗುತ್ತಿಗೆದಾರರ ಬಳಿ ಲಂಚಕ್ಕೆ ಬೇಡಿಕೆ ಇಟ್ಟರಾ ಡಿಸಿಎಂ ಡಿ.ಕೆ ಶಿವಕುಮಾರ್​..?
Share on WhatsAppShare on FacebookShare on Telegram

“ತಮ್ಮ ಸರ್ಕಾರ ಉರುಳಿಸಿದವರನ್ನೇ ಜೊತೆಯಲ್ಲೇ ಕೂರಿಸಿಕೊಂಡು ಈಗಿನ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುವ ಹಾಗೂ ಅವರನ್ನು ತಬ್ಬಿಕೊಳ್ಳುವ ದುಸ್ಥಿತಿಗೆ ಕುಮಾರಸ್ವಾಮಿ ಅವರು ಇಳಿದಿದ್ದಾರೆ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ADVERTISEMENT

“ಬಿಜೆಪಿ ಮತ್ತು ಜೆಡಿಎಸ್ ನವರು ಮೈತ್ರಿ ಆದರೂ ಮಾಡಿಕೊಳ್ಳಲಿ, ಏನನ್ನಾದರೂ ಜೋಡಿಸಿಕೊಳ್ಳಲಿ, ಅದು ನಮಗೆ ಸಂಬಂಧಪಟ್ಟಿದ್ದಲ್ಲ. ನಾನು ಅನೇಕ ಜೆಡಿಎಸ್ ನಾಯಕರು ಮತ್ತು ಕಾರ್ಯಕರ್ತರನ್ನು ಮೈತ್ರಿ ಬಗ್ಗೆ ಕೇಳಿದೆ. ಅದಕ್ಕೆ ಅವರುಗಳು “ನಮ್ಮ ಸರ್ಕಾರ ಬೀಳಿಸಿದವರ ಹತ್ತಿರವೇ ಕುಮಾರಸ್ವಾಮಿ ಅವರಿಗೆ ಮತ್ತೆ ಏಕೆ ನೆಂಟಸ್ತನ? ಹಾಗಾದರೆ ಪಕ್ಷದ ನೀತಿ ಏನು? ನಾವು ಕಾರ್ಯಕರ್ತರಿಗೆ ಏನು ಹೇಳುವುದು ಎಂದು ಕೇಳುತ್ತಿದ್ದಾರೆ, ನಮಗೆ ಉತ್ತರ ನೀಡಲು ಆಗುತ್ತಿಲ್ಲ” ಎಂದು ಹೇಳುತ್ತಿದ್ದಾರೆ. ವಿರೋಧ ಪಕ್ಷಗಳಿಗೆ ನಾವು ಉತ್ತರ ಕೊಡುವುದಿಲ್ಲ, ಅವರಿಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉತ್ತರ ಕೊಡುತ್ತಾರೆ.

ಡಿ.ಕೆ ಶಿವಕುಮಾರ್‌

ಚುನಾವಣೆ ಮುಗಿದು 110 ದಿನಗಳಾದರೂ ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡದ ದುಸ್ಥಿತಿಗೆ ಬಿಜೆಪಿ ಪಕ್ಷ ಬಂದಿದೆ. ಅವರವರ ಅನುಕೂಲಕ್ಕೆ ಬಿಜೆಪಿ- ಜೆಡಿಎಸ್ ರಾಜಕಾರಣ ಮಾಡುತ್ತಿವೆ. ಯಾರ ವಯಸ್ಸೂ ಕಡಿಮೆಯಾಗುವುದಿಲ್ಲ, ದೊಡ್ಡ- ದೊಡ್ಡ ನಾಯಕರು ಮೇಲೆಯೇ ಕುಳಿತಿರುತ್ತಾರೆ. ಕಾರ್ಯಕರ್ತರು ಹಾಗೂ ಮುಖಂಡರುಗಳು ನೆಲದಲ್ಲೇ ಕುಳಿತಿರುತ್ತಾರೆ.

ಈ ಭಾರತ್ ಜೋಡೋ ಸಭಾಂಗಣದಲ್ಲಿ ಎಲ್ಲಾ ಮನಸ್ಸುಗಳು ಒಂದಾಗುತ್ತಿವೆ. ನಿಮ್ಮ ಸ್ವಾಭಿಮಾನಕ್ಕೆ ಧಕ್ಕೆ ಬರದಂತೆ ಕಾಂಗ್ರೆಸ್ ಪಕ್ಷ ನಿಮ್ಮನ್ನು ನಡೆಸಿಕೊಳ್ಳುತ್ತದೆ. ತಾಳ್ಮೆಯಿಂದ ಇದ್ದರೆ ನಿಮಗೂ ಒಂದಲ್ಲ ಒಂದು ದಿನ ಸೂಕ್ತ ಸ್ಥಾನಮಾನ ದೊರೆಯುತ್ತದೆ. ಸಾಕಷ್ಟು ಸಮಿತಿಗಳು, ನಿಗಮ ಮಂಡಲಿಗಳು ಇದ್ದಾವೆ, ಅವಸರ ಬೇಡ.

2028 ರಲ್ಲಿ ಪದ್ಮನಾಭನಗರ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆಯ್ಕೆಯಾಗುತ್ತಾರೆ ಎನ್ನುವ ಭರವಸೆಗೆ ಶುಕ್ರವಾರದ ಶುಭದಿನ ಪೀಠಿಕೆಯಾಗಿದೆ. ವಿವಿಧ ಪಕ್ಷಗಳ ನಾಯಕರು ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ವಿಶ್ವ ಪ್ರಜಾಪ್ರಭುತ್ವ ದಿನ ಸಾಕ್ಷಿಯಾಗಿದೆ. ಇಂತಹ ಪವಿತ್ರವಾದ ದಿನದಂದು ಸಂವಿಧಾನದ ಪೀಠಿಕೆ ಓದಿ ನಾನು ಮತ್ತು ರಾಮಲಿಂಗಾರೆಡ್ಡಿ ಅವರು ಈ ಶುಭ ಕಾರ್ಯಕ್ಕೆ ಬಂದಿದ್ದೇವೆ.

ಡಿ.ಕೆ.ಶಿವಕುಮಾರ್‌
ಡಿ.ಕೆ.ಶಿವಕುಮಾರ್‌

ಸಂಘಟನೆ ಮಾಡುವುದು, ಪಕ್ಷ ಕಟ್ಟುವುದು ಅತ್ಯಂತ ಕಷ್ಟದ ಕೆಲಸ ಎಂಬುದು ನನಗೆ ಅರಿವಿಗೆ ಬಂದಿದೆ. ಇಂದು ಪಕ್ಷ ಸೇರಿದವರು ಬೆಂಗಳೂರಿನಲ್ಲಿ ಹಾಗೂ ಪದ್ಮನಾಭನಗರದಲ್ಲಿ ದೊಡ್ಡ ಸಂಘಟನ ಶಕ್ತಿಗಳು. ಸೂಕ್ತ ಸಮಯದಲ್ಲಿ ಕಾಂಗ್ರೆಸ್ ಪಕ್ಷ ಸೇರಿರುವ ನಿಮ್ಮ ನಿರ್ಧಾರ ಸರಿಯಾಗಿದೆ. ಇದು ಭಾಗ್ಯ, ಇದು ಭಾಗ್ಯ ಇದು ಭಾಗ್ಯವಯ್ಯ ಪದುಮನಾಭನ ಪಾದ ಭಜನೆ ಪರಮಸುಖವಯ್ಯಾ ಎನ್ನುವ ಪುರಂದರದಾಸರ ಕೀರ್ತನೆಯಂತೆ ಪದ್ಮನಾಭನಗರದ ನಾಯಕರನ್ನು ಅಪ್ಪಿಕೊಳ್ಳುವ ಭಾಗ್ಯ ಸಿಕ್ಕಿದ್ದು ನಮ್ಮ ಪುಣ್ಯ.

ರಾಮಲಿಂಗಾರೆಡ್ಡಿ ಅವರು ಹಾಗೂ ನಾವು ಪದ್ಮನಾಭನಗರದ ನಾಯಕರ ಜೊತೆಗಿದ್ದೇವೆ. ಪಕ್ಷದ ಹಳಬರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಬೇಕು, ಪದ್ಮನಾಭನಗರದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲದೇ ಇರಬಹುದು ಆದರೆ ಕಾರ್ಯಕರ್ತರು ಪಕ್ಷದ ಭಾವುಟ ಹಿಡಿದಿದ್ದಾರೆ “ಹೆಣ, ಪಲ್ಲಕ್ಕಿ ಹೊತ್ತಿದ್ದಾರೆ” ಅವರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ.

ಕಾಂಗ್ರೆಸ್ ಪಕ್ಷ ಸೇರುವವರನ್ನು ತಡೆದರು, ಅಡ್ಡಿಪಡಿಸಿದರು. ಈಗ ಬಿಜೆಪಿಗೆ ಕಾರ್ಯಕರ್ತರು ನೆನಪಾಗುತ್ತಿದ್ದಾರೆ. ಅಶೋಕಣ್ಣನಿಗೆ ಅನೇಕ ಕ್ಷೇತ್ರಗಳು ಇದ್ದವು ಅಲ್ಲೆ ಎಲ್ಲಾದರೂ ನಿಲ್ಲಬಹುದಿತ್ತು, ಯಾಕೋ ಇಲ್ಲೇ ಬಂದು ನಿಂತು ನಿಷ್ಟಾವಂತ ಕಾರ್ಯಕರ್ತರ ಬೆಳವಣಿಗೆಗೆ ಅಡ್ಡಿಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಏನಾಗುತ್ತದೆ ನೋಡೋಣ. ಕನಕಪುರದಿಂದ ಬಂದು ನೆಲೆ ನಿಂತಿರುವ 35 ಸಾವಿರ ಮತದಾರರು ಕ್ಷೇತ್ರದಲ್ಲಿ ಇದ್ದಾರೆ. ನಾವೆಲ್ಲಾ ಒಟ್ಟಿಗೆ ಸೇರೋಣ, ಚರ್ಚೆ ಮಾಡೋಣ, ಕೆಲಸ ಮಾಡೋಣ.

ಗ್ಯಾರಂಟಿಗಳು ಬಿಜೆಪಿಗೆ ಏಟು ಕೊಟ್ಟಿದೆ. ನೆನ್ನೆ ರಾಜಸ್ಥಾನದಲ್ಲಿ ಅನೇಕ ರಾಜ್ಯಗಳ ನಾಯಕರುಗಳು ಹೇಳುತ್ತಿದ್ದರು ಡಿ.ಕೆ ಅವರೇ ನೀವು ಕರ್ನಾಟಕದಲ್ಲಿ ಕೊಟ್ಟ ಗ್ಯಾರಂಟಿ ಏಟು ಬಿಜೆಪಿ ಮುಟ್ಟಿ ನೋಡಿಕೊಳ್ಳುವಂತೆ ಮಾಡಿದೆ. ಗ್ಯಾರಂಟಿ ಯೋಜನೆಗಳಿಂದ ದೇಶ ದಿವಾಳಿಯಾಗುತ್ತದೆ ಎಂದು ಪ್ರಧಾನಿಗಳು ಹೇಳುತ್ತಾ ಇದ್ದರು, ಈಗ ಬಿಜೆಪಿ ಆಡಳಿತವಿರುವ ರಾಜ್ಯಗಳು ಕರ್ನಾಟಕ ಮಾದರಿಯನ್ನು ಅನುಕರಿಸುತ್ತಿವೆ ಎಂದರು.

ಇಡೀ ದೇಶದಲ್ಲಿ ಯಾರೂ ಸಹ ನಮ್ಮಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಆಗುವುದಿಲ್ಲ, ಮಹಿಳೆಯರ ಸಬಲೀಕರಣಕ್ಕೆ ದೊಡ್ಡ ಹೆಜ್ಜೆ ಇದಾಗಿದೆ. ಲೋಕಸಭೆ ಆದ ಮೇಲೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುವುದು ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನಾವು ಅಧಿಕಾರದಲ್ಲಿ ಇರುವ ತನಕ ಈ ಯೋಜನೆಗಳನ್ನು ನಿಲ್ಲಿಸುವುದಿಲ್ಲ.
ನಾನು ಯಾರಿಗೂ ಹೆದರಿಕೊಳ್ಳುವುದಿಲ್ಲ, ಕೆಲವೊಂದಷ್ಟು ಜನರಿಗೆ ಉತ್ತರಕೊಡುವ ಕೆಲಸ ಬಾಕಿ ಇದೆ, ಸಮಯ ಬಂದಾಗ ನೀಡುತ್ತೇನೆ.”

Tags: BJPCMSiddaramaiahCongress PartyDKShivakumar
Previous Post

ಇಲಾಖೆಯ ಯೋಜನೆಗಳ ಅನುಷ್ಠಾನಕ್ಕೆ ಸೂಚನೆ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್‌

Next Post

ಕಾನೂನು ಸುವ್ಯವಸ್ಥೆ ಸರಿಯಾಗಿದ್ದರೆ ಮಾತ್ರ ಆ ರಾಜ್ಯ ಅಭಿವೃದ್ಧಿಯಾಗುತ್ತದೆ ; ಮುಖ್ಯಮಂತ್ರಿ‌ ಸಿದ್ದರಾಮಯ್ಯ

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
Next Post
ಕಾನೂನು ಸುವ್ಯವಸ್ಥೆ ಸರಿಯಾಗಿದ್ದರೆ ಮಾತ್ರ ಆ ರಾಜ್ಯ ಅಭಿವೃದ್ಧಿಯಾಗುತ್ತದೆ ; ಮುಖ್ಯಮಂತ್ರಿ‌ ಸಿದ್ದರಾಮಯ್ಯ

ಕಾನೂನು ಸುವ್ಯವಸ್ಥೆ ಸರಿಯಾಗಿದ್ದರೆ ಮಾತ್ರ ಆ ರಾಜ್ಯ ಅಭಿವೃದ್ಧಿಯಾಗುತ್ತದೆ ; ಮುಖ್ಯಮಂತ್ರಿ‌ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada