ನವದೆಹಲಿ: ಸುಪ್ರೀಂ ಕೋರ್ಟ್ ನಲ್ಲಿ ಇಂದು ಶುಕ್ರವಾರ ನಮ್ಮ ಪರವಾಗಿ ಆದೇಶ ಬರಬಹುದು ಎಂಬ ನಿರೀಕ್ಷೆಯಲ್ಲಿದ್ದ ಕರ್ನಾಟಕಕ್ಕೆ ನಿರಾಸೆಯಾಗಿದೆ. ಕಾವೇರಿ ಜಲ ಹಂಚಿಕೆ ವಿವಾದ ಕೇಸಿನಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಮಂಡಿಸಿದ ಕರ್ನಾಟಕದ ವಾದ ಫಲ ಕೊಟ್ಟಿಲ್ಲ. ತೀರ್ಪು ತಮಿಳು ನಾಡು ಪರವಾಗಿದೆ.
ಮುಂದಿನ 15 ದಿನಗಳ ಕಾಲ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳು ನಾಡಿಗೆ ಬಿಡಬೇಕೆಂದು ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಬಿ ಆರ್ ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ಆದೇಶ ನೀಡಿದೆ. ಈ ಮೂಲಕ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWMA) ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ(CWRC)ಯ ಆದೇಶವನ್ನು ಯಥಾವತ್ತಾಗಿ ಜಾರಿಗೆ ತರಬೇಕೆಂದು ಸೂಚಿಸಿದೆ.