ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಇಂದು ಬೆಂಗಳೂರು ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬೆಳಗ್ಗೆ ಆರು ಗಂಟೆಯಿಂದಲೂ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು, ವ್ಯಾಪಾರ ವಹಿವಾಟು ಬಹುತೇಕ ಸ್ಥಗಿತಗೊಂಡಿದೆ.
ಶಾಪಿಂಗ್ ಮಾಲ್ ಗಳು ಕ್ಲೋಸ್ ಆಗಿದ್ದು, ಅವುಗಳ ಮುಂದೆ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.ವಾಹನಗಳ ದಟ್ಟಣೆಯಿಂದ ತುಂಬಿರುತ್ತಿದ್ದ ರಸ್ತೆಗಳು ಬಣಗುಡುತ್ತಿವೆ, ಸದಾ ಗಿಜಿಗುಡುತ್ತಿದ್ದ ಏರಿಯಾಗಳು ಖಾಲಿ, ಖಾಲಿ ಹೊಡೆಯುತ್ತಿವೆ.
ಬಿಎಂಟಿಸಿ ಹಾಗೂ ಕೆಎಸ್ ಆರ್ ಟಿಸಿ ಬಸ್ ಗಳ ಸಂಚಾರವಿದ್ದರೂ ಪ್ರಯಾಣಿಕರಿಲ್ಲದೆ ಜನದಟ್ಟಣೆ ಪ್ರದೇಶಗಳಾದ ಮೆಜೆಸ್ಟಿಕ್, ಕೆ ಆರ್ ಮಾರ್ಕೆಟ್ ಮತ್ತಿತರ ಕಡೆಗಳಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ತೀರಾ ವಿರಳವಾಗಿದೆ. ಬಂದ್ ನಿಂದಾಗಿ ರಾಜ್ಯದಲ್ಲಿ ಜನದಟ್ಟಣೆಯ ಬಸ್ ನಿಲ್ದಾಣಗಳಲ್ಲಿ ಒಂ