ರಾಮನಗರ: ರಾಜ್ಯದಲ್ಲಿ ದಿನೇ ದಿನೇ ಕಾವೇರಿ ಹೋರಾಟಗಳು ಹೆಚ್ಚಾಗುತ್ತಿದ್ದು, ಇಂದು ವಿವಿಧ ಸಂಘಟನೆಗಳು ರಾಮನಗರ ಬಂದ್‌ಗೆ ಕರೆ ನೀಡಿವೆ. ಜಿಲ್ಲೆಯಲ್ಲಿ ಈಗಾಗಲೇ ಬಂದ್ ಆರಂಭವಾಗಿದ್ದು, ರೈತರು ಹಾಗೂ ಕನ್ನಡಪರ ಹೋರಾಟಗಾರರು ಪ್ರತಿಭಟನೆ ಆರಂಭಿಸಿದ್ದಾರೆ
ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಜಿಲ್ಲಾ ಕರ್ನಾಟಕ ಜನಪರ ವೇದಿಕೆ ರಾಮನಗರದಲ್ಲಿ ಬೆಳ್ಳಂಬೆಳಗ್ಗೆಯೇ ಪ್ರತಿಭಟನೆ ಆರಂಭಿಸಿದ್ದಾರೆ. ನಗರದ ಐಜೂರು ವೃತ್ತದಲ್ಲಿ ಪ್ರತಿಭಟನೆ ಆರಂಭಗೊಂಡಿದ್ದು, ತಮಿಳುನಾಡು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ.
ಬಾಯಿ ಬಡಿದುಕೊಂಡು ಸ್ಟಾಲಿನ್ ಸತ್ತೋದ ಎಂದು ಆಕ್ರಂದನ ಮಾಡಿದ ಪ್ರತಿಭಟನಾಕಾರರು ತಮಿಳುನಾಡು ವಿರುದ್ಧ ರಾಮನಗರದಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ.