ಬೆಂಗಳೂರು: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ಬೆಂಗಳೂರಿನಲ್ಲಿ ನಡೆದ INDI ಮೈತ್ರಿಕೂಟದ ಸಭೆ ನಂತರ ಸ್ಟಾಲಿನ್ ಜತೆಗೆ ಕಾವೇರಿ ಡೀಲ್ ಕುದುರಿಸಲಾಗಿತ್ತು ಎಂದು ಗಂಭೀರ ಆರೋಪ ಮಾಡಿದೆ. ಇಷ್ಟು ಮಾತ್ರವಲ್ಲದೆ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು ಮೂದಲಿಸಿದೆ.
ಈ ವಿಚಾರವಾಗಿ ಎಕ್ಸ್ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಸರಣಿ ಪೋಸ್ಟ್ ಗಳನ್ನು ಮಾಡಿರುವ ರಾಜ್ಯ ಬಿಜೆಪಿ ಕಾವೇರಿ ನೀರಿನ ವಿಚಾರದಲ್ಲಿ ಸಿದ್ದರಾಮಯ್ಯ ಅವರ ಸರ್ಕಾರ ಕನ್ನಡಿಗರ ಕಣ್ಣಿಗೆ ಮಂಕುಬೂದಿ ಎರಚಲು ನಡೆಸಿದ ಷಡ್ಯಂತ್ರಗಳು ಎಂದು ಆರೋಪ ಪಟ್ಟಿ ಮಾಡಿದೆ.






