• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭಿನ್ನಮತ ಶಮನಕ್ಕೆ ನಿಖಿಲ್ ಕುಮಾರಸ್ವಾಮಿ ಪ್ರಯತ್ನ: ಅತೃಪ್ತ ಶಾಸಕರ ಮನವೊಲಿಕೆ

Any Mind by Any Mind
September 29, 2023
in Top Story, ಕರ್ನಾಟಕ
0
ಭಿನ್ನಮತ ಶಮನಕ್ಕೆ ನಿಖಿಲ್ ಕುಮಾರಸ್ವಾಮಿ ಪ್ರಯತ್ನ: ಅತೃಪ್ತ ಶಾಸಕರ ಮನವೊಲಿಕೆ
Share on WhatsAppShare on FacebookShare on Telegram

ಬೆಂಗಳೂರು: ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಪಕ್ಷದೊಳಗೆ ಅಸಮಾಧಾನ ಭುಗಿಲೆದ್ದಿದೆ. ಈ ಬೆನ್ನಲ್ಲೇ, ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಪಕ್ಷದ ಗುರುಮಿಠಕಲ್ ಶಾಸಕ ಶರಣಗೌಡ ಪಾಟೀಲ್ ಕಂದಕೂರ ಅವರ ಮನವೊಲಿಸುವಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.

ADVERTISEMENT

ನಿಖಿಲ್ ಗುರುವಾರ ಬೆಂಗಳೂರಿನಲ್ಲಿ ಶಾಸಕರನ್ನು ಭೇಟಿ ಮಾಡಿ ಬಿಜೆಪಿಯೊಂದಿಗಿನ ಮೈತ್ರಿಯ ಅಗತ್ಯವನ್ನು ವಿವರಿಸಿದರು. ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್, ‘ಅವರು ಕೆಲವು ವಿಷಯಗಳ ಬಗ್ಗೆ ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಅದನ್ನು ಪಕ್ಷದ ಹಿರಿಯ ನಾಯಕರ ಗಮನಕ್ಕೆ ತಂದಿದ್ದೇನೆ’ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಶರಣಗೌಡ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದರು. ‘ಕುಮಾರಸ್ವಾಮಿ ಅವರು ಕೂಡ ಶರಣಗೌಡ ಅವರೊಂದಿಗೆ ಮಾತನಾಡಿದ್ದಾರೆ ಮತ್ತು ಚರ್ಚಿಸಿದ್ದಾರೆ. ಇದೀಗ ಪರಿಸ್ಥಿತಿ ತಿಳಿಯಾಗಿದೆ. ಈ ಹಂತದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಏಕೆ ಮುಖ್ಯ ಎಂದು ನಾವು ಅವರಿಗೆ ಅರ್ಥಮಾಡಿಸಿದ್ದೇವೆ ಮತ್ತು ಅವರು ಸಹ ಒಪ್ಪಿಕೊಂಡಿದ್ದಾರೆ’ ಎಂದು ನಿಖಿಲ್ ಹೇಳಿದರು. ಬಿಜೆಪಿಯೊಂದಿಗಿನ ಜೆಡಿಎಸ್ ಮೈತ್ರಿ ಕುರಿತು ಮನವರಿಕೆಯಾಗಿದ್ದಕ್ಕಿಂತ ಹೆಚ್ಚಾಗಿ ತಾವು ಪಕ್ಷದ ಹಿರಿಯ ನಾಯಕರ ಮಾತಿಗೆ ಮಣಿದಿದ್ದೇನೆ ಎಂದು ಶರಣಗೌಡ ಸಭೆಯ ಬಳಿಕ ಹೇಳಿದರು.

‘ನಾವು ಎಲ್ಲಾ ವಿಷಯಗಳ ಬಗ್ಗೆ ಚರ್ಚಿಸಿದ್ದೇವೆ. ಪಕ್ಷದ ಹಿರಿಯ ನಾಯಕರು ನನ್ನ ಅಭಿಪ್ರಾಯವನ್ನು ಗೌರವಿಸಿ ಯುವ ಘಟಕದ ಅಧ್ಯಕ್ಷರನ್ನು ಕಳುಹಿಸಿದ್ದಾರೆ. ನನ್ನ ಕಳವಳವನ್ನು ಅವರೊಂದಿಗೆ ಹಂಚಿಕೊಂಡಿದ್ದೇನೆ’ ಎಂದೂ ಅವರು ಹೇಳಿದರು. ಬಿಜೆಪಿ-ಜೆಡಿಎಸ್ ಮೈತ್ರಿ ಬಹಿರಂಗವಾದ ಬೆನ್ನಲ್ಲೇ, ಶರಣಗೌಡ ಅವರು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ಹೇಳುವ ಮೂಲಕ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಪಕ್ಷದ ಹಿರಿಯ ನಾಯಕರು ನಿಖಿಲ್‌ಗೆ ಶಾಸಕರ ಮನವೊಲಿಸುವ ಜವಾಬ್ದಾರಿಯನ್ನು ಹಸ್ತಾಂತರಿಸಿದ್ದಾರೆ.

Tags: BangaloreBJPJDSnikilkumarswamy
Previous Post

ಬೆಂಗಳೂರು ಸೇರಿದಂತೆ ಹತ್ತಾರು ಜಿಲ್ಲೆಗಳಲ್ಲಿ ಕರ್ನಾಟಕ ಬಂದ್‌ಗೆ ಬೆಂಬಲ

Next Post

ಕೃಷ್ಣರಾಜ ಸಾಗರ ಣೆಕಟ್ಟೆಗೆ ಮುತ್ತಿಗೆ ಹಾಕಲಾಗುವುದು: ವಾಟಾಳ್‌ ನಾಗರಾಜ್‌

Related Posts

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?
Top Story

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

by ಪ್ರತಿಧ್ವನಿ
May 23, 2026
0

ಬೆಂಗಳೂರು : ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳಿಗೆ ಸೆಡ್ಡು ಹೊಡೆದು ಸಾಮಾಜಿಕ ಜಾಲತಾಣದಲ್ಲಿ ಧೂಳೆಬ್ಬಿಸಿರುವ ಕಾಕ್ರೋಚ್‌ ಜನತಾ ಪಾರ್ಟಿಯ ಇನ್‌ಸ್ಟಾಗ್ರಾಂ ಖಾತೆಯನ್ನು ಹ್ಯಾಕ್‌ ಮಾಡಲಾಗಿದೆ. ಕಳೆದ...

Read moreDetails
“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

May 23, 2026
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

May 23, 2026
ಎಬೋಲಾ ವೈರಸ್ ಎಚ್ಚರಿಕೆ: ಕರ್ನಾಟಕದಲ್ಲಿ ಹೈ ಅಲರ್ಟ್‌! ಈ‌ ನಿಯಮ‌ ಕಡ್ಡಾಯ 

ಎಬೋಲಾ ವೈರಸ್ ಎಚ್ಚರಿಕೆ: ಕರ್ನಾಟಕದಲ್ಲಿ ಹೈ ಅಲರ್ಟ್‌! ಈ‌ ನಿಯಮ‌ ಕಡ್ಡಾಯ 

May 23, 2026
ರೈಲು ಮಿಸ್ ಆದರೆ ಅದೇ ಟಿಕೆಟ್‌ನಲ್ಲಿ ಬೇರೆ ರೈಲು ಹತ್ತಬಹುದಾ? ಇಲ್ಲಿದೆ ರೈಲ್ವೆಯ ಸ್ಪಷ್ಟ ನಿಯಮ

ರೈಲು ಮಿಸ್ ಆದರೆ ಅದೇ ಟಿಕೆಟ್‌ನಲ್ಲಿ ಬೇರೆ ರೈಲು ಹತ್ತಬಹುದಾ? ಇಲ್ಲಿದೆ ರೈಲ್ವೆಯ ಸ್ಪಷ್ಟ ನಿಯಮ

May 23, 2026
Next Post
ಕೃಷ್ಣರಾಜ ಸಾಗರ ಣೆಕಟ್ಟೆಗೆ ಮುತ್ತಿಗೆ ಹಾಕಲಾಗುವುದು: ವಾಟಾಳ್‌ ನಾಗರಾಜ್‌

ಕೃಷ್ಣರಾಜ ಸಾಗರ ಣೆಕಟ್ಟೆಗೆ ಮುತ್ತಿಗೆ ಹಾಕಲಾಗುವುದು: ವಾಟಾಳ್‌ ನಾಗರಾಜ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!