• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಂಕಷ್ಟ ಕಾಲದಲ್ಲಿ ಕಾವೇರಿ ನೀರು ಹರಿಸುವ ಹೊಸ ಸೂತ್ರಕ್ಕೆ ಅಗ್ರಹ: ಡಿಸಿಎಂ ಡಿ.ಕೆ.ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
September 29, 2023
in Top Story, ಇದೀಗ, ಕರ್ನಾಟಕ
0
ಸಂಕಷ್ಟ ಕಾಲದಲ್ಲಿ ಕಾವೇರಿ ನೀರು ಹರಿಸುವ ಹೊಸ ಸೂತ್ರಕ್ಕೆ ಅಗ್ರಹ: ಡಿಸಿಎಂ ಡಿ.ಕೆ.ಶಿವಕುಮಾರ್
Share on WhatsAppShare on FacebookShare on Telegram

ಮಳೆ ಇಲ್ಲದ ಸಂಕಷ್ಟದ ಕಾಲದಲ್ಲಿ ನೀರು ಹರಿಸುವ ಹೊಸ ಸೂತ್ರ ರೂಪಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಗೆ ಆಗ್ರಹ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರಿಗೆ ಶುಕ್ರವಾರ ಬೆಳಿಗ್ಗೆ ಪ್ರತಿಕ್ರಿಯೆ ನೀಡಿದ ಅವರು “ಇಂದು ನಡೆಯುವ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರ ಸಭೆಯ ನಂತರ ಸಂಕಷ್ಟ ಸೂತ್ರದ ರೂಪುರೇಷೆ ಹೇಗಿರಬೇಕು ಎಂದು ತೀರ್ಮಾನ ಮಾಡಲಾಗುತ್ತದೆ ಎಂದು ತಿಳಿಸಿದರು. ಸಂಕಷ್ಟ ಸೂತ್ರ ಆಗ್ರಹ ಮಾಡುವ ಮೊದಲು ನಮಗೆ ಅದರ ಬಗ್ಗೆ ಸ್ಪಷ್ಟತೆ ಇರಬೇಕು. ಅದಕ್ಕೆ ನಾವು ಮೊದಲು ಒಂದು ಸೂತ್ರದ ಬಗ್ಗೆ ಚರ್ಚೆ ಮಾಡುತ್ತೇವೆ. ಆದಕ್ಕಾಗಿ ಇಂದು ಸಂಜೆ (ಶುಕ್ರವಾರ) ಸಭೆ ಕರೆಯಲಾಗಿದೆ.

ADVERTISEMENT

ರಾಜ್ಯದ ಹಿತವನ್ನು ಸುಪ್ರೀಂಕೋರ್ಟಿನಲ್ಲಿ ಕಾಪಾಡಿದಂತಹ ಹಿರಿಯ ನ್ಯಾಯವಾದಿಗಳು, ಅಡ್ವೋಕೇಟ್ ಜನರಲ್ ಹಾಗೂ ಹಿರಿಯ ನೀರಾವರಿ ತಜ್ಞರ ಜೊತೆ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಚರ್ಚೆ ನಡೆಸುತ್ತೇವೆ ಎಂದರು. ಇಂದು ನಡೆಯುವ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಗೆ ಆನ್‌ಲೈನ್ ಮೂಲಕ ಭಾಗವಹಿಸದೆ ಖುದ್ದಾಗಿ ಭಾಗವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು. ನೀರಿನ ಬಿಡುಗಡೆ ಬಗ್ಗೆ ವಿರೋಧ ಪಕ್ಷದವರು, ಬೇರೆಯವರು ಏನೇನೋ ಹೇಳುತ್ತಾರೆ. ನನಗೆ ಅವರಿಗಿಂತ, ಬೇರೆಯವರಿಗಿಂತ ಹೆಚ್ಚು ಜವಾಬ್ದಾರಿ ಇದೆ. ಬಾಯಿಗೆ ಬಂದಂತೆ ಮಾತನಾಡುವ ಜಾಯಮಾನ ನನ್ನದಲ್ಲ, ನಾನು ಸಹ ರೈತ ಎಂದು ತಿರುಗೇಟು ನೀಡಿದರು. ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಬಂದ್ ನಿರ್ವಹಣೆ ಮಾಡಿದ್ದೇವೆ

ಕರ್ನಾಟಕ ಬಂದ್ ಮಾಡುವುದು ಅವಶ್ಯಕತೆ ಇರಲಿಲ್ಲ. ಪ್ರತಿಭಟನೆ ಮಾಡಲು ಯಾರಿಗೂ ನಾವು ಅಡ್ಡಿ ಮಾಡುವುದಿಲ್ಲ ಎಂದು ಹೇಳಿದ್ದೆವು, ಅದರಂತೆ ಬಂದ್ ವೇಳೆಯಲ್ಲಿ ಸಾವರ್ಜನಿಕರಿಗೆ ತೊಂದರೆಯಾಗದಂತೆ ರಕ್ಷಣೆ ಕೊಟ್ಟಿದ್ದೇವೆ. ಸಾರಿಗೆ, ದಿನನಿತ್ಯ ಬಳಕೆಯ ವಸ್ತುಗಳ ಲಭ್ಯತೆಗೆ ತೊಂದರೆ ಆಗದಂತೆ ನೋಡಿಕೊಂಡಿದ್ದೇವೆ ಎಂದು ತಿಳಿಸಿದರು.

Tags: #dkshivakumarCongress Party
Previous Post

CWMA ಶಾಕ್‌ ಕೊಟ್ಟ ಬೆನ್ನಲ್ಲೇ ಹಿರಿಯ ನಿವೃತ್ತ ನ್ಯಾಯಮೂರ್ತಿಗಳೊಂದಿಗೆ ಸಿಎಂ ಸುದೀರ್ಘ ಚರ್ಚೆ..!

Next Post

ಕಾವೇರಿ ಹೋರಾಟ: ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಹಕ್ಕೊತ್ತಾಯಗಳನ್ನು ಸಲ್ಲಿಸಿದ ಎಎಪಿ

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
Next Post
ಕಾವೇರಿ ಹೋರಾಟ: ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಹಕ್ಕೊತ್ತಾಯಗಳನ್ನು ಸಲ್ಲಿಸಿದ ಎಎಪಿ

ಕಾವೇರಿ ಹೋರಾಟ: ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಹಕ್ಕೊತ್ತಾಯಗಳನ್ನು ಸಲ್ಲಿಸಿದ ಎಎಪಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!