• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಎಂ ಸೀಟಿನಲ್ಲಿ ಕೂತರೂ ಸಿದ್ದ ಸುಳ್ಳುಗಳಿಗೆ ಕಮ್ಮಿಯೇನು ಇಲ್ಲ: ಸಿದ್ದರಾಮಯ್ಯ ವಿರುದ್ಧ ಹೆಚ್​ಡಿಕೆ ವಾಗ್ದಾಳಿ

Any Mind by Any Mind
September 30, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸಿಎಂ ಸೀಟಿನಲ್ಲಿ ಕೂತರೂ ಸಿದ್ದ ಸುಳ್ಳುಗಳಿಗೆ ಕಮ್ಮಿಯೇನು ಇಲ್ಲ: ಸಿದ್ದರಾಮಯ್ಯ ವಿರುದ್ಧ ಹೆಚ್​ಡಿಕೆ  ವಾಗ್ದಾಳಿ
Share on WhatsAppShare on FacebookShare on Telegram

ಬೆಂಗಳೂರು ಸೆ.30: ಬಿಜೆಪಿ (BJP) ಜೊತೆ ಜೆಡಿಎಸ್ (JDS) ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು “ಜೆಡಿಎಸ್ ಇನ್ಮುಂದೆ ಜಾತ್ಯಾತೀತ ಎಂದು ಹೇಳಿಕೊಳ್ಳಬಾರದು” ಎಂದು ವಾಗ್ದಾಳಿ ಮಾಡಿದ್ದರು. ಈ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್​​ಡಿ ಕುಮಾರಸ್ವಾಮಿ (HD Kumarswamy) ಅವರು ಸರಣಿ ಟ್ವೀಟ್​​ ಮಾಡಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಅವರ ಬೆನ್ನು ಅವರಿಗೆ ಕಾಣುವುದಿಲ್ಲ. ನಾಲಿಗೆಗೂ ಮೂಳೆ ಇರುವುದಿಲ್ಲ. ಸಿಎಂ ಸೀಟಿನಲ್ಲಿ ಕೂತರೂ ‘ಸಿದ್ದಸುಳ್ಳು’ಗಳಿಗೆ ಕೊರತೆಯೇನೂ ಇಲ್ಲ” ಎಂದು ಟಾಂಗ್ ಕೊಟ್ಟರು.​​​

ADVERTISEMENT

“ಜಾತ್ಯತೀತ ‘ ಎನ್ನುವ ಟ್ಯಾಗ್ ಲೈನ್ ಇಟ್ಟುಕೊಂಡು ಜಾತಿ ಸಭೆಗಳನ್ನು ಮಾಡಿ ಕುಕ್ಕರ್, ಇಸ್ತ್ರೀ ಪೆಟ್ಟಿಗೆ ಹಂಚುವುದು ಜಾತ್ಯತೀತವೇ? ಅಹಿಂದ ಎಂದು ಹೇಳಿಕೊಂಡು ಧರ್ಮಕ್ಕೊಂದು ಸಮಾವೇಶ, ಜಾತಿಗೊಂದು ಸಭೆ ನಡೆಸುವುದು ಜಾತ್ಯತೀತವೇ? ಸ್ವಲ್ಪ ಹೇಳುವಿರಾ ಸಿದ್ದರಾಮಯ್ಯನವರೇ?” ಎಂದು ಪ್ರಶ್ನಿಸಿದ್ದಾರೆ. “ಕೋಮುವಾದಿ ಎಂದು ಬಿಜೆಪಿಯನ್ನು ಹೀಗಳೆಯುತ್ತಾ ಆ ಪದದಿಂದಲೇ ರಾಜಕೀಯ ಲಾಭ ಗಿಟ್ಟಿಸಿಕೊಳ್ಳುವ ಡೋಂಗಿ ಸಮಾಜವಾದಿ ನೀವು. ನಿಮ್ಮ ಅಡ್ಜಸ್ಟ್​​​ಮೆಂಟ್ ರಾಜಕಾರಣ ಜಗತ್ಪ್ರಸಿದ್ಧಿ. I.N.D.I.A ಎಂಬ ಮೈತ್ರಿಕೂಟದಲ್ಲಿ ಅದೇ ಬಿಜೆಪಿಯ ಬಿ ಟೀಂಗಳನ್ನು ಇಟ್ಟುಕೊಂಡು, ಅವುಗಳ ಬಾಲಂಗೋಚಿ ಆಗಿರುವ ಕಾಂಗ್ರೆಸ್​ ಪಕ್ಷ ಜಾತ್ಯತೀತವೇ? ಉತ್ತರಿಸಿ ಮುಖ್ಯಮಂತ್ರಿಗಳೇ?” ಎಂದು ಸವಾಲು ಹಾಕಿದ್ದಾರೆ.

“ಸ್ಟಾಲಿನ್, ಮಮತಾ ಬ್ಯಾನರ್ಜಿ, ಫಾರೂಕ್ ಅಬ್ದುಲ್ಲಾ, ನಿತೀಶ್ ಕುಮಾರ್, ಹೇಮಂತ್ ಸೊರೇನ್, ವೈಕೋ, ಮೆಹಬೂಬಾ ಮುಫ್ತಿ, ಅಖೈರಿಗೆ ಶಿವಸೇನೆಯ ಉದ್ಧವ್ ಠಾಕ್ರೆ. ಇವರೆಲ್ಲರೂ ಬಿಜೆಪಿ ಪಡಸಾಲೆಯಲ್ಲಿ ಪೊಗದಸ್ತಾಗಿ ಅಧಿಕಾರದ ಭೋಜನ ಉಂಡವರಲ್ಲವೇ? ಅವರ ಪಕ್ಕ ಕುರ್ಚಿ ಹಾಕಿಕೊಂಡು ಕೂರಲು ನಿಮಗೆ ನಾಚಿಕೆ ಆಗುವುದಿಲ್ಲವೇ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“2006ರಲ್ಲಿ ಬಿಜೆಪಿ ಜತೆ ಸರಕಾರ ರಚಿಸಿದ ಏಕೈಕ ಕಾರಣಕ್ಕೆ ಬಿಜೆಪಿ ಬಿ ಟೀಂ ಎಂದು ಜೆಡಿಎಸ್​ಗೆ ಮುದ್ರೆ ಹಾಕಿದಿರಿ. 2018ರಲ್ಲಿ ಅದೇ ಬಿ ಟೀಂ ಜತೆ ಸರಕಾರ ರಚಿಸಲು ಮಾನ್ಯ ದೇವೇಗೌಡರ ಮನೆಗೆ ಬಂದು ಸಾಲಾಗಿ ಕೈಕಟ್ಟಿ ನಿಂತುಕೊಂಡಿರಿ ಮರೆತಿರಾ ಛದ್ಮವೇಷಧಾರಿ?? ಪಾಪ.. ನಿಮಗೆ ಕೋಮುವಾದ, ಜಾತ್ಯತೀತ ಸಿದ್ಧಾಂತದ ಕನಸು ಈಗ ಬಿದ್ದಿದೆ. ನಿಮ್ಮ ರಾಜಕೀಯ ಬದುಕಿಗಾಗಿ ಜಾತಿಜಾತಿಗಳನ್ನು ಒಡೆದು ಬೆಂಕಿ ಇಟ್ಟು ಆ ಕೆನ್ನಾಲಗೆಯಲ್ಲೇ ಚಳಿ ಕಾಯಿಸಿಕೊಳ್ಳುವುದಷ್ಟೇ ನಿಮಗೆ ಗೊತ್ತು” ಎಂದು ವಾಗ್ದಾಳಿ ಮಾಡಿದರು.

“ಜಾತ್ಯತೀತ ಎನ್ನುವುದು ನಾಲಿಗೆ ಮೇಲಿನ ಮಾತಲ್ಲ, ಹೃದಯದ ಆಳದಲ್ಲಿರುವ ನಿಷ್ಠೆ. ಸ್ವಾರ್ಥ ರಾಜಕಾರಣವನ್ನೇ ಹಾಸಿಹೊದ್ದು, ಅಧಿಕಾರ ದಾಹವೇ ಹಾಸುಹೊಕ್ಕಾಗಿರುವ ನಿಮಗೆ ಜಾತ್ಯತೀತತೆ ಕೇವಲ ಭಾಷಣದ ಸರಕಷ್ಟೇ. ಜಾತ್ಯತೀತತೆ ಕುರಿತು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್​​ ಡಿ ದೇವೇಗೌಡ ಅವರು ಹಾಗೂ ನಾನು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೇವೆ, ಅದೂ ಜನರಿಗೆ? ನಮ್ಮ ಬದ್ಧತೆ, ಅಚಲತೆ, ಜಾತ್ಯತೀತತೆಯನ್ನು ಪ್ರಶ್ನಿಸುವ ಯೋಗ್ಯತೆ ನಿಮಗೆ ಖಂಡಿತಾ ಇಲ್ಲ. ಈ ಗುಣಗಳು ನಿಮಗೆ ಅನ್ವಯ ಆಗುವುದೂ ಇಲ್ಲ. ಏನಂತೀರಿ?” ಎಂದು ಹ್ಯಷ್​​ಟ್ಯಾಗ್​​ ಛದ್ಮವೇಷಧಾರಿ ಎಂದು ಟ್ವೀಟ್​ ಮಾಡಿದ್ದಾರೆ.

Tags: #hdkumaraswamy#jds#kumaraswamy#siddaramaiahಎಚ್ ಡಿ ಕುಮಾರಸ್ವಾಮಿ
Previous Post

ನಾರಿಶಕ್ತಿ’ಗೆ ರಾಷ್ಟ್ರಪತಿಗಳ ಅಂಕಿತ.. ಚುನಾವಣೆ ಗಿಮಿಕ್ಕಾ..? ಇಚ್ಛಾಶಕ್ತಿನಾ..?

Next Post

ನಿಜಗುಣಾನಂದ ಸ್ವಾಮೀಜಿ ಸೇರಿದಂತೆ 3 ಸಚಿವರಿಗೆ ಜೀವ ಬೆದರಿಕೆ; ಪತ್ರದಲ್ಲಿ ಏನಿತ್ತು ಗೊತ್ತಾ..?

Related Posts

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?
Top Story

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

by ಪ್ರತಿಧ್ವನಿ
May 25, 2026
0

ಬೆಂಗಳೂರು : ಗ್ಯಾರಂಟಿ ಬಲದ ಮೇಲೆ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರ ಇದೀಗ ಯೋಜನೆಯ ಫಲಾನುಭವಿಗಳಿಗೆ ಶಾಕ್‌ ನೀಡಲು ಮುಂದಾಗಿದೆ. ಪಂಚ ಗ್ಯಾರಂಟಿಗಳಿಂದ ರಾಜ್ಯದ ಬೊಕ್ಕಸ...

Read moreDetails
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

May 25, 2026
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
Next Post
ನಿಜಗುಣಾನಂದ ಸ್ವಾಮೀಜಿ ಸೇರಿದಂತೆ 3 ಸಚಿವರಿಗೆ ಜೀವ ಬೆದರಿಕೆ; ಪತ್ರದಲ್ಲಿ ಏನಿತ್ತು ಗೊತ್ತಾ..?

ನಿಜಗುಣಾನಂದ ಸ್ವಾಮೀಜಿ ಸೇರಿದಂತೆ 3 ಸಚಿವರಿಗೆ ಜೀವ ಬೆದರಿಕೆ; ಪತ್ರದಲ್ಲಿ ಏನಿತ್ತು ಗೊತ್ತಾ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada