ಶಿವಮೊಗ್ಗ: ಜಿಲ್ಲಾ ಕೇಂದ್ರ ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 24 ಪ್ರಕರಣಗಳು ದಾಖಲಾಗಿದ್ದು, 60 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ರಾಗಿ ಗುಡ್ಡ ಪ್ರದೇಶದಲ್ಲಿ ಭಾನುವಾರ ನಡೆದ ಕಲ್ಲು ತೂರಾಟದ ನಂತರ ಉದ್ವಿಗ್ನತೆ ಉಂಟಾದ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಪರಿಸ್ಥಿತಿ ಈಗ ಶಾಂತಿಯುತವಾಗಿದೆ ಮತ್ತು ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
“ರಾಗಿ ಗುಡ್ಡದಲ್ಲಿನ ಘಟನೆಗೆ ಸಂಬಂಧಿಸಿದಂತೆ 24 ಎಫ್ಐಆರ್ ದಾಖಲಿಸಿದ್ದು, 60 ಜನರನ್ನು ಬಂಧಿಸಿ ಬಂಧಿಸಿದ್ದೇವೆ. ಈಗ ಪರಿಸ್ಥಿತಿ ಶಾಂತವಾಗಿದ್ದು, ಇದು ನಗರದ ಇತರೆಡೆ ಯಾವುದೇ ಪರಿಣಾಮ ಬೀರಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಸುದ್ದಿಗಾರರಿಗೆ ತಿಳಿಸಿದರು.