ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಐಟಿ ದಾಳಿಯಾಗಿದೆ. 15ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ನಗರದ ವಿಜಯನಗರ, ಬಿಟಿಎಂ ಲೇಔಟ್, ಹುಳಿಮಾವು, ಸದಾಶಿವನಗರ, ಸ್ಯಾಂಕಿ ಟ್ಯಾಂಕ್, ಪ್ರಶಾಂತ ನಗರ ಸೇರಿದಂತೆ ಹಲವೆಡೆ ದಾಳಿ. ಚೆನ್ನೈ, ದೆಹಲಿಯಿಂದ ರಾತ್ರೋರಾತ್ರಿ ಬೆಂಗಳೂರಿಗೆ ಬಂದ ಐಟಿ ಅಧಿಕಾರಿಗಳು ಇಂದು ಬೆಳಗ್ಗೆ 6 ಗಂಟೆಗೆ ದಾಳಿ ಮಾಡಿದ್ದು, ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಡಾ.ಸಂಧ್ಯಾ ಪಾಟೀಲ್ ಮನೆ, ವಿಜಯನಗರದಲ್ಲಿರಯವ ಕ್ಲಿನಿಕ್, ಪ್ರಶಾಂತ ನಗರದಲ್ಲಿರುವ ಮನೆ ಮೇಲೂ ದಾಳ ಮಾಡಿ ಸಂಧ್ಯಾರನ್ನು ಅಧಿಕಾರಿಗಳು ಕರೆದುಕೊಂಡು ಹೋಗಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಶಾಂತಿನಗರದ ಉದ್ಯಮಿ ನವೀನ್ ಮನೆ ಮೇಲೂ ಐಟಿ ರೇಡ್. ಆಗಿದ್ದು, ತೆರಿಗೆ ವಂಚನೆ ಆರೋಪ ಹಿನ್ನೆಲೆ 8 ಅಧಿಕಾರಿಗಳಿಂದ ನವೀನ್ ನಿವಾಸದಲ್ಲಿ ಪರಿಶೀಲನೆ ಮಾಡುತ್ತಿದ್ದಾರೆ.
ಯಾಕಾಗಿ ದಾಳಿ ಮಾಡಲಾಗಿದೆ, ಎಷ್ಟು ತೆರಿಗೆ ವಂಚನೆ ಮಾಡಿದ್ದಾರೆ ಎನ್ನುವ ಬಗ್ಗೆ ಇನ್ನು ಮಾಹಿತಿ ತಿಳಿದುಬಂದಿಲ್ಲ. ಎಲ್ಲಾ ದಾಖಲೆ ಪರಿಶೀಲನೆ ನಡೆಸಿದ ಬಳಿಕ ಖುದ್ದು ಐಟಿ ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಲಿದ್ದಾರೆ.





