ದೆಹಲಿಯಲ್ಲಿ ಆಡಳಿತ ನಡೆಸುತ್ತಿರುವ ಆಮ್ ಆದ್ಮಿ ಪಾರ್ಟಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗುತ್ತಿದೆ. ಈಗಾಗಲೇ ಸತ್ಯೇಂದ್ರ ಜೈನ್ ಹಾಗೂ ಮನೀಶ್ ಸಿಸೋಡಿಯಾ ಜೈಲು ಸೇರಿದ್ದಾರೆ. ಇದೀಗ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಪ್ ಸಂಸದ ಸಂಜಯ್ ಸಿಂಗ್ ಬಂಧನವಾಗಿದೆ. ದೆಹಲಿ ಅಬಕಾರಿ ಹಗರಣ ಕುರಿತು ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಲಾಯ ಇಂದು ಸಂಸದ ಸಂಜಯ್ ಸಿಂಗ್ ಮನೆ ಮೇಲೆ ದಾಳಿ ನಡೆಸಿ ಸಂಜಯ್ ಸಿಂಗ್‌ರನ್ನು ಇಡಿ ಅಧಿಕಾರಿಗಳು ಬಂಧಿಸಿರುವುದು ಈಗ ತೀರ್ವ ವಿರೋಧ ವ್ಯಕ್ತವಾಗಿದೆ.
ಬಿಜೆಪಿ ಕಚೇರಿ ಹೊರಗೆ ಎಎಪಿ ಪ್ರತಿಭಟನೆ
ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರನ್ನು ಮದ್ಯದ ಹಗರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವುದನ್ನು ವಿರೋಧಿಸಿ ಇಂದು ಆಮ್ ಆದ್ಮಿ ಪಕ್ಷ (ಎಎಪಿ)ದ ನಾಯಕರು ಹಾಗೂ ಕಾರ್ಯಕರ್ತರು ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಲಿದ್ದಾರೆ.
ದೆಹಲಿಯ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ದೆಹಲಿ ನಿವಾಸದ ಮೇಲೆ ದಾಳಿ ನಡೆಸಿ ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಸಂಜಯ್ ಸಿಂಗ್ ಅವರನ್ನು ಬಂಧಿಸಲಾಯಿತು.
ಎಎಪಿ ಆರೋಪಿ ಆಗಲಿದೆಯೇ?: ಕಾನೂನು ಸಲಹೆಗೆ ಮುಂದಾದ ED
ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಹಾಗೂ ದಿಲ್ಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಇದೇ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಬಂಧಿತರು ಜಾಮೀನು ಅರ್ಜಿ ಸಲ್ಲಿಸಿದ್ದರ. ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಮದ್ಯ ನೀತಿಯಿಂದ ಪಕ್ಷಕ್ಕೆ ಲಾಭವಾಗಿದೆ ಎಂದು ಇಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಆರೋಪದಡಿ ಆಮ್ ಆದ್ಮಿ ಪಕ್ಷವನ್ನು (AAP) ಆರೋಪಿ ಎಂದು ಹೆಸರಿಸಬಹುದೇ?. ಈ ಬಗ್ಗೆ ತನಿಖಾ ಸಂಸ್ಥೆ ಜಾರಿ ನಿರ್ದೇಶನಾಲಯ (ED) ಕಾನೂನು ಸಲಹೆ ಪಡೆಯಲು ಮುಂದಾಗಿದೆ.
ಎಎಪಿ ನಾಯಕರ ಬಂಧನದ ವಿರುದ್ಧ ತಮಿಳುನಾಡು ಸಿಎಂ ಸ್ಟಾಲಿನ್ ವಿರೋಧ
ಕೇಂದ್ರ ಬಿಜೆಪಿ ಸರ್ಕಾರದ ಸೇಡಿನ ರಾಜಕಾರಣಕ್ಕೆ ಮಿತಿಯೇ ಇಲ್ಲದಂತಾಗಿದೆ. ಎಎಪಿ ಸಂಸದ ಸಂಜಯ್ ಸಿಂಗ್ ಅವರನ್ನು ಬಂಧಿಸುವುದು ಮತ್ತು ಡಿಎಂಕೆ ಸಂಸದ ಜಗತ್ರಕ್ಷಕನ್ ಅವರ ಮನೆಯ ಮೇಲೆ ದಾಳಿ ಮಾಡುವುದು INDIA ಬ್ಲಾಕ್ ನಾಯಕರ ವಿರುದ್ಧ ಸೇಡಿನ ರಾಜಕೀಯ ಮಾಡುತ್ತಿದೆ. ಸ್ವತಂತ್ರ ತನಿಖಾ ಸಂಸ್ಥೆಗಳನ್ನು ಇದಕ್ಕೆ ದುರುಪಯೋಗಪಡಿಸಿಕೊಂಡ ಸ್ಪಷ್ಟ ಉದಾಹರಣೆಗಳಾಗಿವೆ.
ವಿರೋಧ ಪಕ್ಷದ ನಾಯಕರ ಈ ಉದ್ದೇಶಪೂರ್ವಕ ಕಿರುಕುಳ ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದೆ. ಪಾರದರ್ಶಕ ಮತ್ತು ನ್ಯಾಯಯುತವಾಗಿರುವಂತೆ ಇಡಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿರುವುದನ್ನು ಬಿಜೆಪಿ ತನ್ನ ಅನುಕೂಲಕ್ಕೆ ಮರೆತಿದೆ. ಆದರೆ ಅವರು ಕಾನೂನು ಮತ್ತು ಪ್ರಜಾಪ್ರಭುತ್ವವನ್ನು ಕಡೆಗಣಿಸಬಾರದು.
ವಿರೋಧ ಪಕ್ಷಗಳ ನಡುವೆ ಬೆಳೆಯುತ್ತಿರುವ ಒಗ್ಗಟ್ಟಿನ ಬಗ್ಗೆ ಬಿಜೆಪಿ ಹೆದರುತ್ತಿದೆ. ಎಂದು x ನಲ್ಲಿ ಟ್ವೀಟ್ ಮಾಡಿದ್ದಾರೆ.
ಲೋಕಸಭೆ ಚುನಾವಣೆಗೆ ಮುನ್ನ ಪ್ರತಿಪಕ್ಷಗಳ ಮತ್ತಷ್ಟು ನಾಯಕರ ಬಂಧನ
ಎಎಪಿ ಹಿರಿಯ ನಾಯಕ ಸಂಜಯ್ ಸಿಂಗ್ ಅವರ ಬಂಧನ “ಸಂಪೂರ್ಣ ಕಾನೂನುಬಾಹಿರ” ಎಂದಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, 2024 ರ ಲೋಕಸಭೆ ಚುನಾವಣೆಗೆ ಮುನ್ನ ಮತ್ತಷ್ಟು ವಿರೋಧ ಪಕ್ಷದ ನಾಯಕರನ್ನು ಬಂಧಿಸುತ್ತಾರೆ ಎಂದು ಬುಧವಾರ ಹೇಳಿದ್ದಾರೆ.













