• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಾತಿ ಸಮೀಕ್ಷೆ ಸಮಾಜವನ್ನು ವಿಭಜಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
October 7, 2023
in Top Story, ಕರ್ನಾಟಕ
0
ಜಾತಿ ಸಮೀಕ್ಷೆ ಸಮಾಜವನ್ನು ವಿಭಜಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

ಮೈಸೂರು: ಜಾತಿ ಗಣತಿ ಸಮಾಜವನ್ನು ವಿಭಜಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ADVERTISEMENT

ಜಾತಿ ಗಣತಿ ಸಮಾಜವನ್ನು ವಿಭಜಿಸುತ್ತದೆ ಎಂದು ಪ್ರಧಾನಿಗಳು ಹೇಳಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಬಡತನ ನಿವಾರಣೆ ಕಾರ್ಯಕ್ರಮ ರೂಪಿಸುವಾಗ ಸಮ ಸಮಾಜ ನಿರ್ಮಾಣ ಮಾಡಬೇಕು. ಯಾವ ಜಾತಿ ಸ್ವಾತಂತ್ರ್ಯ ಬಂದು 76 ವರ್ಷಗಳಾದರೂ ಆರ್ಥಿಕವಾಗಿ, ಸಾಮಾಜಿಕವಾಗಿ ರಾಜಕೀಯವಾಗಿ ಯಾವ ಸ್ಥಿತಿಗತಿಯಲ್ಲಿದೆ ಎಂದು ತಿಳಿಯಬೇಕು. ನಮ್ಮದು ಜಾತಿ ವ್ಯವಸ್ಥೆಯ ಸಮಾಜವಾಗಿದೆ. ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಅಸಮಾನತೆ ಇರುವ ಜಾತಿಗಳನ್ನು ಮುಖ್ಯವಾಹಿನಿಗೆ ತರಲು ಅಂಕಿಅಂಶಗಳು ಅಗತ್ಯ. ಅದಕ್ಕಾಗಿ ಜಾತಿಗಣತಿ ಮಾಡಬೇಕು. ಸಾಮಾಜಿಕ- ಆರ್ಥಿಕ ಸಮೀಕ್ಷೆ ಹಾಗೂ ಜಾತಿ ಸಮೀಕ್ಷೆ ಆಗಬೇಕು. ಇದು ಖಂಡಿತವಾಗಿಯೂ ಸಮಾಜವನ್ನು ಒಡೆಯುವುದಿಲ್ಲ ಎಂದು ಅಭಿಪ್ರಾಯಪಟ್ಟರು.

ಬರಪರಿಹಾರಕ್ಕೆ 4860 ಕೋಟಿ ರೂ.ಗಳನ್ನು ಕೋರಲಾಗಿದೆ ಗ್ಯಾರಂಟಿ ಯೋಜನೆಗಳಿಗೆ ತೊಂದರೆ ಇಲ್ಲ. ಬರ ಪರಿಹಾರಕ್ಕೂ ಕೇಂದ್ರ ಸರ್ಕಾರಕ್ಕೆ 4860 ಕೋಟಿ ರೂ.ಗಳನ್ನು ಕೋರಿದ್ದೇವೆ. ಆದರೆ ಬೆಲೆ ನಷ್ಟವಾಗಿರುವುದು 42 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ. ಎಲ್ಲಾ ಸೇರಿ ಒಟ್ಟು 30000 ಕೋಟಿ ರೂ.ಗಳಿಗೂ ನಷ್ಟ ಉಂಟಾಗಿದೆ. ಎನ್. ಡಿ.ಆರ್.ಎಫ್ ನಿಯಮಗಳ ಪ್ರಕಾರ 4860 ಕೋಟಿ ರೂ.ಗಳನ್ನು ಕೋರಿದ್ದೇವೆ. ಕೇಂದ್ರ ಬರ ಅಧ್ಯಯನ ತಂಡ ಮೂರು ತಂಡಗಳಾಗಿ 11 ಜಿಲ್ಲೆಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ. ಅವರು ವರದಿ ನೀಡಿದ ಆಧಾರದ ಮೇಲೆ ಕೇಂದ್ರ ಸರ್ಕಾರ ಪರಿಹಾರ ನಿಗದಿ ಮಾಡಲಿದೆ ಎಂದರು.

ಮೋದಿಯವರು ಹೇಳುವುದಕ್ಕೂ, ಮಾಡುವುದಕ್ಕೂ ವ್ಯತ್ಯಾಸವಿದೆ ನರೇಂದ್ರ ಮೋದಿಯವರು ಎಲ್ಲರನ್ನೂ ಒಳಗೊಂಡ ಸಮಾಜ, ಸಬ್ ಕೆ ಸಾಥ್, ಸಬ್ ಕಾ ವಿಕಾಸ್ ಎನ್ನುತ್ತಾರೆ. ಮುಸಲ್ಮಾನರಿಗೆ ಟಿಕೆಟ್ ಕೊಡದೆ ಹೋದರೆ ಸಬ್ ಕೆ ಸಾಥ್ ಆಗುತ್ತದೆಯೇ, ಎಲ್ಲರನ್ನೂ ಒಳಗೊಂಡಂತೆ ಆಗುತ್ತದೆಯೇ? ಹೇಳುವುದಕ್ಕೂ, ಮಾಡುವುದಕ್ಕೂ ವ್ಯತ್ಯಾಸವಿದೆ. ಹೇಳೋದು ಬೇರೆ, ವಸ್ತುಸ್ಥಿತಿ ಬೇರೆ ಎಂದರು.

ನವೆಂಬರ್ ನಲ್ಲಿ ಜಾತಿ ಸಮೀಕ್ಷೆ ವರದಿ ಸಲ್ಲಿಕೆ ಕಾಂತರಾಜು ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವರದಿ ಪಡೆಯಲಿಲ್ಲ. ಈಗ ಬೇರೆ ಅಧ್ಯಕ್ಷ ರಿದ್ದು, ಅವರಿಗೆ ಕಾಂತರಾಜು ವರದಿ ಇದ್ದಂತೆಯೇ ಮಾಡಿಕೊಡುವಂತೆ ಹೇಳಿದ್ದೇನೆ. ಅವರು ನವೆಂಬರ್ ನಲ್ಲಿ ವರದಿ ನೀಡುವುದಾಗಿ ಹೇಳಿದ್ದಾರೆ ಎಂದರು.

ಪ್ರತ್ಯೇಕ ವರ್ಗ; ಸಮೀಕ್ಷೆ ವರದಿ ಬಂದ ನಂತರ ಪರಿಶೀಲನೆ ಬಹಳ ಹಿಂದುಳಿದವರು ರಾಷ್ಟ್ರೀಯ ಮಟ್ಟದಲ್ಲಿ ಪ್ರತ್ಯೇಕ ವರ್ಗ ಬೇಕು ಎಂದು ಕರ್ನಾಟಕದಲ್ಲಿ ಬೇಡಿಕೆ ಇರುವ ಬಗ್ಗೆ ಉತ್ತರಿಸಿ ಅದನ್ನು ಮಾಡಲು ಹಿಂದುಳಿದ ವರ್ಗಗಳ ಸಮೀಕ್ಷೆ ವರದಿ ಬಂದ ನಂತರ ಪರಿಶೀಲಿಸಲಾಗುವುದು ಎಂದರು. ಜನರ ಅಹವಾಲು ಕೇಳಲು ಸೂಚನೆ ಕೇಂದ್ರ ಬರ ಅಧ್ಯಯನ ತಂಡ ಸರಿಯಾಗಿ ಸಮಸ್ಯೆಗಳನ್ನು ಆಲಿಸುತ್ತಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಅಧ್ಯಯನ ತಂಡಕ್ಕೆ ಎಲ್ಲೆಡೆ ಭೇಟಿ ಮಾಡಿ,ಜನರ ಅಹವಾಲು ಕೇಳಬೇಕು, ಜನಪ್ರತಿನಿಧಿಗಳ ಮಾತನ್ನೂ ಆಲಿಸುವಂತೆ ಸೂಚಿಸಿದ್ದೇನೆ ಎಂದರು.

Tags: castKarnatakaMysoresiddaramaiah
Previous Post

ಶ್ಯಾಮನೂರು ಮುನಿಸಿನ ಸಿಟ್ಟಿಗೆ ಮದ್ದೆಯುತ್ತಾ “ಕೈ” ಹೈಕಮಾಂಡ್..?

Next Post

ಬ್ಯಾಡ್ಮಿಂಟನ್‌ನಲ್ಲಿ ಐತಿಹಾಸಿಕ ಚಿನ್ನ ಗೆದ್ದ ಚಿರಾಗ್‌ -ಸಾತ್ವಿಕ್‌!

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಕರ್ನಾಟಕ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

by ಪ್ರತಿಧ್ವನಿ
April 25, 2026
0

ಮಂಡ್ಯ: ಹವಾಮಾನ  ವೈಪರಿತ್ಯಗಳು ಮತ್ತು ಹವಾಮಾನ ಬದಲಾವಣೆಗಳ ಬಗ್ಗೆ ಮುನ್ಸೂಚನೆ ನೀಡುತ್ತಾ ಬಂದಿರುವ ಅರಸೀಕೆರೆ ಶ್ರೀ ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಇದೀಗ...

Read moreDetails
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
Next Post
ಬ್ಯಾಡ್ಮಿಂಟನ್‌ನಲ್ಲಿ ಐತಿಹಾಸಿಕ ಚಿನ್ನ ಗೆದ್ದ ಚಿರಾಗ್‌ -ಸಾತ್ವಿಕ್‌!

ಬ್ಯಾಡ್ಮಿಂಟನ್‌ನಲ್ಲಿ ಐತಿಹಾಸಿಕ ಚಿನ್ನ ಗೆದ್ದ ಚಿರಾಗ್‌ -ಸಾತ್ವಿಕ್‌!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada