ಕೇಂದ್ರ ಚುನಾವಣಾ ಆಯೋಗ ಐದು ರಾಜ್ಯಗಳಿಗೆ ಚುನಾವಣೆ ಘೋಷಣೆ ಮಾಡುತ್ತಿದ್ದಂತೆ. ಬಿಜೆಪಿ ಹೈಅಲರ್ಟ್ ಆಗಿದೆ.
ತೆಲಂಗಾಣ ವಿಧಾನಸಭೆ ಚುನಾವಣೆ ಪ್ರಚಾರರ್ಥವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಆದಿಲಾಬಾದ್ ಮತ್ತು ಹೈದರಾಬಾದ್‌ನಲ್ಲಿ ಚಿಂತಕರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕುರಿತು ಸ್ವತಃ ತೆಲಂಗಾಣ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಜಿ.ಪ್ರೇಮೇಂದ್ರ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತೆಲಂಗಾಣದಲ್ಲಿ ನವೆಂಬರ್ 30ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ಪ್ರಚಾರಕ್ಕೆ ಶಾ ಬರುತ್ತಿದ್ದು, ಅವರ ಭೇಟಿಯೊಂದಿಗೆ ಚುನಾವಣಾ ಪ್ರಚಾರ ವೇಗ ಪಡೆಯಲಿದೆ ಎಂದು ಬಿಜೆಪಿ ಹೇಳಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಈ ತಿಂಗಳ ಆರಂಭದಲ್ಲಿ ತೆಲಂಗಾಣದ ಮೆಹಬೂಬ್‌ನಗರ ಮತ್ತು ನಿಜಾಮಾಬಾದ್‌ನಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.