ಬೆಂಗಳೂರು : ರಾಜ್ಯದಲ್ಲಿ ಇನ್ನುಮುಂದೆ ಮದುವೆ, ಗಣೇಶ ಉತ್ಸವ ಹಾಗೂ ರಾಜಕೀಯ ಸಂಬಂಧಿತ ಕಾರ್ಯಕ್ರಮಗಳಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅತ್ತಿಬೆಲೆ ಪಟಾಕಿ ಮಳಿಗೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆ ಮಾಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸುಪ್ರೀಂಕೋರ್ಟ್ ಆದೇಶದ ಪ್ರಕಾರ, ಹಸಿರು ಪಟಾಕಿ ನಿಯಾಮವಳಿಗಳಿಗೆ ವಿರುದ್ಧವಾಗಿ ಅಂಗಡಿಗಳು ಇದ್ದರೆ ಕ್ರಮ ಕೈಗೊಳ್ಳಬೇಕು. ಇನ್ನುಮುಂದೆ ಅನಧಿಕೃತ ಮಳಿಗೆಗಳು ಕಂಡುಬಂದಲ್ಲಿ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳಲು ಸೂಚಿಸಿದ್ದೇವೆ. ಇನ್ಮುಂದೆ ಪಟಾಕಿ ಅಂಗಡಿಗಳಿಗೆ ಲೆಸೆನ್ಸ್ ಗಳಿಗೆ ಸುಪ್ರೀಂಕೋರ್ಟ್ ಆದೇಶದ ಪ್ರಕಾರವೇ ಲೆಸೆನ್ಸ್ ಕಡ್ಡಾಯ ನೀಡುವಂತೆ ಸೂಚಿಸಲಾಗಿದೆ ಎಂದರು.