ಸಿ.ಎಂ.ಇಬ್ರಾಹಿಂ ಅವರೇ ಒರಿಜಿನಲ್ ಪಕ್ಷ ಎಂದು ಬೋರ್ಡ್ ಹಾಕಿಕೊಳ್ಳಲಿ. ನನ್ನನ್ನು ಉಚ್ಚಾಟನೆಯಾದರೂ ಮಾಡಲಿ, ಏನಾದರೂ ಮಾಡಿಕೊಳ್ಳಲಿ ಅವರಿಗೆ ಬಿಟ್ಟಿದ್ದು ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
‘ಒರಿಜಿನಲ್ ಜೆಡಿಎಸ್ ನಮ್ಮದೇ, ಅಧ್ಯಕ್ಷ ಸ್ಥಾನದಿಂದ ತೆಗೆಯಲು ಆಗಲ್ಲ’ ಎಂದು ಹೇಳಿಕೆ ನೀಡಿದ್ದ ಸಿ.ಎಂ.ಇಬ್ರಾಹಿಂ ಅವರ ಮಾತಿಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ, ಇಬ್ರಾಹಿಂ ಫ್ರೀ ಇದ್ದಾರೆ ಏನು ಬೇಕಾದರೂ ಮಾತನಾಡಲಿ, ಉಚ್ಚಾಟನೆಯಾದರೂ ಮಾಡಲಿ ಏನಾದರೂ ಮಾಡಿಕೊಳ್ಳಲಿ ಅವರಿಗೆ ಬಿಟ್ಟಿದ್ದು. ನಾವು ಎಲ್ಲವನ್ನೂ ಸರಿ ಮಾಡುತ್ತೇವೆ. ನಮ್ಮ ಪಕ್ಷದ ಹಿರಿಯ ನಾಯಕರು ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.
ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಪಕ್ಷದ ನಾಯಕತ್ವದ ನಿರ್ಧಾರದಿಂದ ಅಸಮಾಧಾನಗೊಂಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ‘ಜೆಡಿಎಸ್ ಒರಿಜಿನಲ್ ನಮ್ಮದೇ , ನಾವು ಬಿಜೆಪಿಗೆ ಸಪೋರ್ಟ್ ಮಾಡಲ್ಲ ನಾವು ಕಾಂಗ್ರೆಸ್ ಗೆ ಬೆಂಬಲ ನೀಡುತ್ತೇವೆ ಎಂದು ಹೇಳಿದ್ದರು.