• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಪುನೀತ್ ರಾಜ್ ಕುಮಾರ್ ಅವರ ಸ್ಮಾರಕ ಪುನರಾಭಿವೃದ್ಧಿ: ಸಿಎಂ ಸಿದ್ದರಾಮಯ್ಯ ಭರವಸೆ

Any Mind by Any Mind
October 17, 2023
in Top Story, ಕರ್ನಾಟಕ, ಸಿನಿಮಾ
0
Share on WhatsAppShare on FacebookShare on Telegram


ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರ ಸ್ಮಾರಕ ಪುನರಾಭಿವೃದ್ಧಿ ಸಂಬಂಧ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಮಾಡಿರುವ ಮನವಿಗೆ ನಮ್ಮ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.

ADVERTISEMENT

ಅವರು ಇಂದು ಪಿ.ಆರ್.ಕೆ. ಸ್ಟುಡಿಯೋಸ್ ಹಾಗೂ N3K ಡಿಸೈನ್ ಸ್ಟುಡಿಯೋ ವತಿಯಿಂದ ಪ್ಯಾಲೇಸ್ ರಸ್ತೆಯ ರಾಡಿಸನ್ ಬ್ಲ್ಯೂ – ಏಟ್ರಿಯಾ ಇಲ್ಲಿ ಆಯೋಜಿಸಿರುವ ಕರ್ನಾಟಕ ರತ್ನ ಡಾ.ಪುನೀತ್ ರಾಜ್‍ ಕುಮಾರ್ ಅವರ -ಸಂಗ್ರಹಣೀಯ ಶಿಲ್ಪಗಳನ್ನು ಅನಾವರಣಗೊಳಿಸಿ ಮಾತನಾಡಿದರು.

ಪುನೀತ್ ಸಾವು ಕರುನಾಡಿಗೆ ಆಗಿರುವ ನಷ್ಟ ನನಗೂ ಪುನೀತ್ ರಾಜ್ ಕುಮಾರ್ ಅವರು ಬಹಳ ಗೌರವದಿಂದ ಕಾಣುತ್ತಿದ್ದರು. ದೊಡ್ಡವರನ್ನು ಸಹಕಲಾವಿದರನ್ನು ಗೌರವದಿಂದ ಲಾನುವ ಪ್ರವೃತ್ತಿಯನ್ನು ಬೆಳೆಸಿಕೊಂಡಿದ್ದರು. ಕಿರಿಯ ಕಲಾವಿದರಿಗೆ ಪ್ರೋತ್ಸಾಹ ನೀಡುತ್ತಿದ್ದರು. ಅವರನ್ನು ಕಳೆದುಕೊಂಡಿರುವುದು ಇಡೀ ಕರುನಾಡಿಗೆ ಆಗಿರುವ ನಷ್ಟ. ಆ ನಷ್ಟವನ್ನು ತುಂಬಲು ಸಾಧ್ಯವಿಲ್ಲ. ಉತ್ತಮ ನಟ, ಹಾಗೂ ಮಾನವೀಯತೆಯುಳ್ಳ ವ್ಯಕ್ತಿಯನ್ನು ನಾಡು ಕಳೆದುಕೊಂಡಿದೆ. ಅವರ ಪ್ರತಿಮೆಯಿಂದ ಪುನೀತ್ ಅವರನ್ನು ಇನ್ನಷ್ಟು ಸ್ಮರಿಸುವ ಕೆಲಸವಾಗಿದೆ ಎಂದರು.

ಕೆಟ್ಟದ್ದನ್ನು ಬಯಸಿಲ್ಲ. ರಾಜ್ ಕುಮಾರ್ ಕುಟುಂಬದವರು ಎಂದಿಗೂ ಕೆಟ್ಟದ್ದನ್ನು ಬಯಸಿಲ್ಲ. ಕೆಟ್ಟ ಪದ ಬಳಸಿಲ್ಲ. ಪುನೀತ್ ರಾಜಕುಮಾರ್ , ಅವರ ತಂದೆ ರಾಜ್ ಕುಮಾರ್ ಅವರಿಗಿಂತ ಒಂದು ಹೆಜ್ಜೆ ಮುಂದೆ ಹೋಗಿದ್ದರು. ರಾಜ್ ಕುಮಾರ್ ಜನಪ್ರಿಯ ಮೇರು ನಟ. ಪುನೀತ್ ತೀರಿಕೊಂಡಾಗ ಜನರ ಭಾವನೆಗಳನ್ನು ಕಂಡಾಗ, ರಾಜ್ ಕುಮಾರ್ ಅವರಿಗಿಂತಲೂ ಜನಪ್ರಿಯರಾಗಿದ್ದರು ಎಂಬ ಭಾವನೆ ಬಂದಿತು.ಪುನೀತ್ ಮರಣ ಹೊಂದಿದಾಗ ನಮ್ಮ ಮನೆಯಲ್ಲಿಯೇ ಯಾರೋ ಒಬ್ಬರು ತೀರಿಕೊಂಡಿದ್ದಾರೆ ಎಂಬಂತಿತ್ತು. ಎಲ್ಲಾ ಊರುಗಳಲ್ಲಿ ಪ್ರತಿಮೆ ಸ್ಥಾಪಿಸಿ, ಕಟೌಟ್ ಹಾಕಿ ಗೋಳಾಡಿದ್ದು ಕಂಡಾಗ ಪುನೀತ್ ಅವರ ಜನಪ್ರಿಯತೆ, ಅಪಾರ ಅಭಿಮಾನಿಗಳನ್ನು ಪಡೆದಿದ್ದರು ಎಂದು ತಿಳಿಯುತ್ತದೆ. ಬಹಳ ಬೇಗ ನಮ್ಮನ್ನು ಅಗಲಿದರು. ಅವರು ಬದುಕಿದ್ದರೆ, ನಾವು ನಿರೀಕ್ಷೆ ಮಾಡದಷ್ಟು ಎತ್ತರಕ್ಕೆ ಬೆಳೆಯುತ್ತಿದ್ದರು ಎಂದರು.

ಮನೆ ಮನೆಯ ಮಗ ಅವರ ಕುಟುಂಬ ವರ್ಗದವರಿಗೆ ಅವರ ಸಾವಿನಿಂದಾದ ನೋವನ್ನು ಭರಿಸುವ ಶಕ್ತಿ ದೇವರು ಯಾವಾಗಲೂ ನೀಡಬೇಕು ಎಂದರು. ಪುನೀತ್ ರಾಜ್ ಕುಮಾರ್ ಮನೆ ಮನೆಯ ಮಗ. ಅವರನ್ನು ಗೌರವಿಸದವರೇ ಇಲ್ಲ ಎಂದರು. ಅಪರೂಪದ ವ್ಯಕ್ತಿತ್ವ ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಅವರ ಪ್ರತಿಮೆಯನ್ನು ಇಂದು ಅನಾವರಣ ಮಾಡಲಾಗಿದೆ. ಡಾ.ಪುನೀತ್ ರಾಜ್ ಕುಮಾರ್ ಅವರು ಅಪರೂಪದ ವ್ಯಕ್ತಿತ್ವ.

ಸರಳ, ಸಜ್ಜನಿಕೆ, ವಿನಯ ಕಾಣುವುದು ವಿರಳ. ಸಾಮಾನ್ಯ ಜನರು, ಸಂಕಷ್ಟದಲ್ಲಿದವರಿಗೆ ಸ್ಪಂದಿಸುವ ಉದಾತ್ತ ಭಾವನೆಯ ಪುನೀತ್‍ರಗಿದ್ದ ಅಭಿಮಾನಿ ಬಳಗ ಬಹಳ ದೊಡ್ಡದು. ಇವರ ಅಕಾಲಿಕ ಮರಣಕ್ಕೆ ತುತ್ತಾಗಿದ್ದಾಗ ಜನರು ತಮ್ಮ ಮನೆಯ ಸದಸ್ಯನನ್ನೇ ಕಳೆದುಕೊಂಡಷ್ಟು ದು:ಖಿಸಿದ್ದರು. ಕರ್ನಾಟಕ ಜನರ ಮನಸ್ಸನ್ನು ಗೆದಿದ್ದರು. ರಾಜ್ಯದ ಪ್ರತಿ ಮನೆಯಲ್ಲಿಯೂ ಕುಡ ಪುನೀತ್ ರ ಭಾವಚಿತ್ರವಿದ್ದು, ಇಂದಿಗೂ ಜನರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿದ್ದಾರೆ. ಬಹುಶ: ಇನ್ನೊಬ್ಬ ಪುನೀತ್ ರಂಥ ವ್ಯಕ್ತಿಯನ್ನು ಕಾಣುವುದು ಕಷ್ಟ. ರಾಜಕುಮಾರ್ ಕುಟುಂಬದವರು ಸದಾ ವಿನಯವಂತರು. ರಾಜಕುಮಾರ್ , ಅವರ ಮಕ್ಕಳು ಮಾನವೀಯತೆಯ ಪ್ರತಿರೂಪವಾಗಿದ್ದಾರೆ. ಮಾನವೀಯತೆಯುಳ್ಳವರು ಮತ್ತೊಬ್ಬರನ್ನು ಪ್ರೀತಿ ಗೌರವಗಳಿಂದ ಕಾಣುತ್ತಾರೆ. ರಾಜ್ ಕುಮಾರ್ ಸೇರಿದಂತೆ ಅವರ ಕುಟುಂಬದವರೊಂದಿಗೆ ತಮಗೆ ಉತ್ತಮ ಒಡನಾಟವಿದೆ ಎಂದು ತಿಳಿಸಿದರು.

Tags: ashwinipuneethrajkumarBanglorecmsiddaramiahpuneeth rajkumar
Previous Post

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ನಿರಾಕ್ಷೇಪಣಾ ಪತ್ರ: ಈಶ್ವರ ಖಂಡ್ರೆ

Next Post

ಹಿಂದೂಗಳ ಅಂಗಡಿಗಳಲ್ಲೇ ವ್ಯಾಪಾರ ಮಾಡಿ: ಬಜರಂಗದಳ ಮನವಿ

Related Posts

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
0

ವಿಕಾಸದ ಗುರಿಯತ್ತ ಸಾಗುತ್ತಿರುವ ನವ-ಡಿಜಿಟಲ್‌ ಭಾರತ ಎಲ್ಲ ಮಗ್ಗುಲುಗಳಲ್ಲೂ ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸುತ್ತಿದೆ. ದೇಶದ ಪ್ರಗತಿ ಅಥವಾ ಅಭಿವೃದ್ಧಿಯ ಕಲ್ಪನೆಯನ್ನು ಆರ್ಥಿಕ ಪರಿಭಾಷೆಯಿಂದ ಹೊರತುಪಡಿಸಿ ವಿಶ್ಲೇಷಿಸುವಾಗ ಸಹಜವಾಗಿ...

Read moreDetails
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

January 28, 2026
ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

January 27, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

January 27, 2026
ಕೋರ್ಟ್‌ಗೆ ಹಾಜರಾದ ರಾಜೀವ್‌ ಗೌಡ : ಕೈ ಮುಖಂಡನಿಗೆ ಜೈಲಾ? ಬೇಲಾ..?

ಕೋರ್ಟ್‌ಗೆ ಹಾಜರಾದ ರಾಜೀವ್‌ ಗೌಡ : ಕೈ ಮುಖಂಡನಿಗೆ ಜೈಲಾ? ಬೇಲಾ..?

January 27, 2026
Next Post
ಹಿಂದೂಗಳ ಅಂಗಡಿಗಳಲ್ಲೇ ವ್ಯಾಪಾರ ಮಾಡಿ: ಬಜರಂಗದಳ ಮನವಿ

ಹಿಂದೂಗಳ ಅಂಗಡಿಗಳಲ್ಲೇ ವ್ಯಾಪಾರ ಮಾಡಿ: ಬಜರಂಗದಳ ಮನವಿ

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada