• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಇಂದು ಪೊಲೀಸ್ ಸಂಸ್ಮರಣ ದಿನ: ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಪುಷ್ಪಚಕ್ರ ಅರ್ಪಿಸಿ ನಮನ

ಪ್ರತಿಧ್ವನಿ by ಪ್ರತಿಧ್ವನಿ
October 21, 2023
in Top Story, ಕರ್ನಾಟಕ
0
ಇಂದು ಪೊಲೀಸ್ ಸಂಸ್ಮರಣ ದಿನ: ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಪುಷ್ಪಚಕ್ರ ಅರ್ಪಿಸಿ ನಮನ
Share on WhatsAppShare on FacebookShare on Telegram

ಬೆಂಗಳೂರು: ಕರ್ತವ್ಯದ ಮೇಲಿದ್ದಾಗ ಹುತಾತ್ಮರಾಗುವ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಇಂದು ಪೊಲೀಸ್ ಸಂಸ್ಮರಣ ದಿನದ ಅಂಗವಾಗಿ ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮರಿಗೆ ಪುಷ್ಪಚಕ್ರ ಅರ್ಪಿಸಿ ನಮನ ಸಲ್ಲಿಸಿ ಮಾತನಾಡಿದರು.ಪೊಲೀಸ್ ವ್ಯವಸ್ಥೆ ರಾಜ್ಯದ , ಸರ್ಕಾರದ ಘನತೆಯನ್ನು ಹೆಚ್ಚಿಸುವಂತೆ ಕೆಲಸ ಮಾಡುತ್ತದೆ. ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆಗೆ ನೇರ ಸಂಬಂಧವಿದೆ.

ADVERTISEMENT

ಯಾವ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಮರ್ಪಕವಾಗಿರುತ್ತದೋ ಅಲ್ಲಿಗೆ ಬಂಡವಾಳ ಹೆಚ್ಚಾಗಿ ಬರುತ್ತದೆ. ಇದರಿಂದ ಉದ್ಯೋಗ ಸೃಷ್ಟಿ ಹೆಚ್ಚಾಗಿ, ಅಭಿವೃದ್ಧಿ ವೇಗ ಪಡೆದುಕೊಳ್ಳುತ್ತದೆ. ಇದರ ಪರಿಣಾಮ ನಾಡಿನ‌ ಜನರ ತಲಾ ಆದಾಯದ ಪ್ರಮಾಣವೂ ಹೆಚ್ಚಾಗುತ್ತದೆ. ಆದ್ದರಿಂದ ನಾಡಿನ ಕಾನೂನು ಸುವ್ಯವಸ್ಥೆಯನ್ನು ಪೊಲೀಸ್ ಇಲಾಖೆ ಕಟ್ಟು ನಿಟ್ಟಾಗಿ ನಿರ್ವಹಿಸಬೇಕು ಎಂದು‌ ಕರೆ ನೀಡಿದರು.

ತಂತ್ರಜ್ಞಾನ ಬೆಳೆದಂತೆ ಪೊಲೀಸ್ ವ್ಯವಸ್ಥೆ ಹೊಸ ಹೊಸ ಸವಾಲುಗಳಿಗೆ ಮುಖಾಮುಖಿ ಆಗುತ್ತದೆ. ಸೈಬರ್ ತಂತ್ರಜ್ಞಾನದ ಜತೆಗೇ ಸೈಬರ್ ಅಪರಾಧಗಳೂ ಹೆಚ್ಚಾಗುತ್ತಿವೆ. ಇದನ್ನು ಪರಿಣಾಮಕಾರಿಯಾಗಿ ತಡೆ ಹಿಡಿಯಬೇಕು ಎನ್ನುವ ಸೂಚನೆ ನೀಡಿದರು ಸುಳ್ಳು ಸುದ್ದಿಗಳು, ಅಶಾಂತಿ ಸೃಷ್ಟಿಸುವ ಸುಳ್ಳುಗಳನ್ನು, ದ್ವೇಷ ಹರಡುವ ಸುಳ್ಳುಗಳನ್ನು ವ್ಯಾಪಕವಾಗಿ ಹರಡಲಾಗುತ್ತಿದೆ. ಸರ್ವರನ್ನೂ ಸಮಾನವಾಗಿ ಕಾಣುವ ಮತ್ತು ಸಮಾನವಾಗಿ ನಡೆಸಿಕೊಳ್ಳುವ ಜವಾಬ್ದಾರಿ ಸರ್ಕಾರ ಮತ್ತು ಪೊಲೀಸ್ ವ್ಯವಸ್ಥೆ ಮೇಲಿದೆ ಎಂದರು.

ಆದ್ದರಿಂದ ಸುಳ್ಳು ಸುದ್ದಿ ಹರಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಸುಳ್ಳು ಮತ್ತು ದ್ವೇಷದ ಸುದ್ದಿಗಳು ನಾಡಿನ GDP ಗೆ ಮಾರಕ. ಅಶಾಂತಿಯ ಪರಿಣಾಮವಾಗಿ ಜನರ ತಲಾ ಆದಾಯಕ್ಕೂ ಧಕ್ಕೆಯಾಗುತ್ತದೆ. ಆದ್ದರಿಂದ ಸುಳ್ಳು ಸುದ್ದಿ ಹರಡುವ ಜಾಲ ತಾಣಗಳು ಮತ್ತು ಅವನ್ನು ನಿರ್ವಹಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ಮಹಿಳೆ, ಮಕ್ಕಳು ಮತ್ತು ಹಿರಿಯ ನಾಗರಿಕರ ಸುರಕ್ಷತೆ ಮತ್ತು ಭದ್ರತೆಗೆ ಹೆಚ್ಚಿನ ರಕ್ಷಣೆ ಕೊಡುವ ಅಗತ್ಯವಿದೆ. ಸುಗಮ ಸಂಚಾರ ವ್ಯವಸ್ಥೆ ಇನ್ನಷ್ಟು ಪರಿಣಾಮಕಾರಿಯಾಗಬೇಕು. ಹೀಗಾಗಿ ಹೆಚ್ಚುವರಿ ಪೊಲೀಸ್ ಹುದ್ದೆ ಸೃಷ್ಟಿಸಿದ್ದೇವೆ. ಹೆಚ್ಚುವರಿ ಮಹಿಳಾ ಮತ್ತು ಸಂಚಾರ ಠಾಣೆಗಳನ್ನು ಆರಂಭಿಸಿದ್ದೇವೆ. ಹೊಸ ವಾಹನ ಖರೀದಿಗೆ 100 ಕೋಟಿ ರೂಪಾಯಿಗಳನ್ನು ನೀಡಲಾಗುವುದು ಎಂದರು.

2125 ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲು 450 ಕೋಟಿ ನೀಡಲಾಗುವುದು. ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ಆರೋಗ್ಯ ಭಾಗ್ಯಕ್ಕಾಗಿ 100 ಕೋಟಿ ರೂ ಒದಗಿಸಲಾಗಿದೆ. ನಿವೃತ್ತ ಸಿಬ್ಬಂದಿಯ ಆರೋಗ್ಯ, ಚಿಕಿತ್ಸೆಗಾಗಿ ನಿಶ್ಚಿತ ಠೇವಣಿ ಇಡಲಾಗಿದೆ. ಪೊಲೀಸ್ ಸಿಬ್ಬಂದಿಯ ಮಕ್ಕಳ ಶಿಕ್ಷಣಕ್ಕಾಗಿ 7 ಜಿಲ್ಲೆಗಳಲ್ಲಿ 7 ಪೊಲೀಸ್ ಪಬ್ಲಿಕ್ ಶಾಲೆ ಆರಂಭಿಸಲಾಗುತ್ತಿದೆ. ಇವುಗಳ ಮೂಲಕ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸರ್ಕಾರ ಬದ್ದವಾಗಿದೆ. ಪೊಲೀಸ್ ಕ್ಯಾಂಟೀನ್ ಗಳನ್ನು ಆರಂಭಿಸಲಾಗುತ್ತಿದೆ ಎಂದರು.

ಗೃಹ ಮಂತ್ರಿ ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್ ಮತ್ತು ಪೊಲೀಸ್ ಇಲಾಖೆಯ ನಾನಾ ವಿಭಾಗಗಳ ಮುಖ್ಯಸ್ಥರು ಪುಷ್ಪ ನಮನ ಸಲ್ಲಿಸಿದರು.
ಕಳೆದ ಒಂದು ವರ್ಷದಲ್ಲಿ ದೇಶದಾದ್ಯಂತ ಹುತಾತ್ಮರಾದ ಎಲ್ಲಾ ರಕ್ಷಣಾ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಸ್ಮರಿಸಿ ನಮನ ಸಲ್ಲಿಸಲಾಯಿತು.

Tags: MysorePolicePolice Remembrance Day
Previous Post

ಮೊದಲ ಪರೀಕ್ಷಾರ್ಥ ಉಡಾವಣೆ ತಾತ್ಕಾಲಿಕ ತಡೆಯಿಡಿದ ಇಸ್ರೊ

Next Post

ಬಿಜೆಪಿ ಮುಖಂಡರ ವಿರುದ್ಧ ನಗರದ ಹೈಗ್ರೌಂಡ್ ಪೊಲೀಸ್‌ ಠಾಣೆಯಲ್ಲಿ ದೂರು…!

Related Posts

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
0

https://youtube.com/live/MVIPvxtGf0k

Read moreDetails
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025
Next Post
ಬಿಜೆಪಿ ಮುಖಂಡರ ವಿರುದ್ಧ ನಗರದ ಹೈಗ್ರೌಂಡ್ ಪೊಲೀಸ್‌ ಠಾಣೆಯಲ್ಲಿ ದೂರು…!

ಬಿಜೆಪಿ ಮುಖಂಡರ ವಿರುದ್ಧ ನಗರದ ಹೈಗ್ರೌಂಡ್ ಪೊಲೀಸ್‌ ಠಾಣೆಯಲ್ಲಿ ದೂರು...!

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

July 5, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada