ಧರ್ಮಶಾಲಾ: ಹಾಲಿ ವಿಶ್ವಕಪ್ನಲ್ಲಿ ಒಂದು ಸೋಲು ಕಾಣದ ಅಜೇಯ ತಂಡಗಳಾದ ಭಾರತ ಮತ್ತು ನ್ಯೂಜಿಲೆಂಡ್ ಇಂದು ಹಿಮಾಲಯದ ತಪ್ಪಲಲ್ಲಿರುವ ಮನಮೋಹಕ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ.
ಉಭಯ ತಂಡಕ್ಕೆ ಈ ಗೆಲುವು ಪ್ರತಿಷ್ಠೆಯಾಗಿದೆ. ಕಳೆದ ವಿಶ್ವಕಪ್ ಸೆಮಿಫೈನಲ್ನಲ್ಲಿ ಕಿವೀಸ್ ವಿರುದ್ಧ ಅನುಭವಿಸಿದ ಸೋಲಿಗೆ ಟೀಂ ಇಂಡಿಯಾ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.
ವಿಶ್ವಕಪ್ಗೂ ಮುನ್ನ ಏಷ್ಯಾಕಪ್ನಲ್ಲಿ ಜಯ ದಾಖಲಿಸಿ, ಐಸಿಸಿ ಶ್ರೇಯಾಂಕದಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡ ಟೀಮ್ ಇಂಡಿಯಾ ಬಲಿಷ್ಠವಾಗಿ ಕಾಣುತ್ತಿದೆ. ತವರು ಮೈದಾನದ ಲಾಭದ ಜೊತೆಗೆ ಬ್ಯಾಟಿಂಗ್ ಮತ್ತು ಬೌಲಿಂಗ್ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಾ ತಂಡ ನಾಲ್ಕು ತಂಡಗಳನ್ನು ಮಣಿಸಿದೆ. ಚೊಚ್ಚಲ ಪ್ರಶಸ್ತಿಯ ಹಸಿವಿನಲ್ಲಿರುವ ಕಿವೀಸ್ ಪ್ರಮುಖ ಆಟಗಾರ ಕೇನ್ ವಿಲಿಯಮ್ಸನ್ ಅವರ ಅನುಪಸ್ಥಿತಿಯಲ್ಲಿ ಅಸಾದಾರಣ ಆಟವನ್ನು ಆಡುತ್ತಿದ್ದು, ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ.






