ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ನಿವಾಸಕ್ಕೆ ಅರಣ್ಯಾಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರಿನ ಆರ್ ಆರ್ ನಗರದಲ್ಲಿ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಮನೆಗೆ ಅರಣ್ಯಾಧಿಕಾರಿಗಳು ಆಗಮಿಸಿದ್ದಾರೆ. ಬೆಂಗಳೂರು ನಗರ ಆರ್ ಎಫ್ ಸೇರಿದಂತೆ ಇಬ್ಬರು ಅಧಿಕಾರಿಗಳು ಆಗಮಿಸಿದ್ದಾರೆ. ದರ್ಶನ್ ಕೊರಳಲ್ಲಿ ಹುಲಿ ಉಗುರಿನ ಪೆಂಡೆಂಟ್ ಇರೋ ಬಗ್ಗೆ ದೂರು ಬಂದ ಹಿನ್ನೆಲೆ ವಿಚಾರಣೆ ನಡೆಸುತ್ತಿದ್ದಾರೆ. ಅರಣ್ಯಾಧಿಕಾರಿಗಳಿ ಬಂದ ಹಿನ್ನೆಲೆ ಸ್ಥಳೀಯ ಪೊಲೀಸರು ಕೂಡ ದರ್ಶನ್ ಮನೆಗೆ ಆಗಮಿಸಿದ್ದಾರೆ.
ವನ್ಯಜೀವಿ ಸಂರಕ್ಷಣಾ ಕಾಯ್ದೆ ಪ್ರಕಾರ ಹುಲಿ ಉಗುರು ಬಳಸೋದು ಅಪರಾಧವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಸ್ಪರ್ಧಿ ವರ್ತೂರ್ ಸಂತೋಷ್ ಅವರನ್ನು ಬಂಧಿಸಲಾಗಿದೆ. ದರ್ಶನ್ ಬಳಿಯೂ ಹುಲಿ ಉಗುರು ಇದೆ ಎನ್ನುವ ಆರೋಪ ಕೇಳಿ ಬಂದ ಕಾರಣ ಅರಣ್ಯಾಧಿಕಾರಿಗಳು ಮನೆ ಪರಿಶೀಲನೆ ಮಾಡುತ್ತಿದ್ದಾರೆ.