ಹುಲಿ ಉಗುರು ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನವಾಗುತ್ತಿದ್ದಂತೆ ಹಲವು ಸೆಲೆಬ್ರಿಟಿಗಖು ರಾಜಕಾರಣಿಗಳಿಗೆ ಸಂಕಷ್ಟ ಎದುರಾಗಿದೆ. ಕಾರಣ ದರ್ಶನ್ ಮನೆಯಲ್ಲಿ ಶೋಧ ನಡೆಸುತ್ತಿದ್ದು, ಇದೀಗ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರ ಮನೆಯನ್ನು ಅರಣ್ಯಾಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದಾರೆ.
ಜಗ್ಗೇಶ್ ಅಲ್ಲದೇ ನಟ ದರ್ಶನ್, ರಾಕ್ಲೈನ್ ವೆಂಕಟೇಶ್ ಮತ್ತು ನಿಖಿಲ್ ಕುಮಾರಸ್ವಾಮಿ ಅವರ ಮನೆಯನ್ನು ಅರಣ್ಯ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಲೆಬ್ರಿಟಿಗಳ ವಿರುದ್ಧ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಹಲವು ತಂಡಗಳನ್ನು ರಚಿಸಿ ಸೆಲೆಬ್ರಿಟಿಗಳ ಮನೆ ಮೇಲೆ ಶೋಧ ನಡೆಸುತ್ತಿದ್ದಾರೆ.
ಮಲ್ಲೇಶ್ವರಂನಲ್ಲಿರುವ ನಟ ಜಗ್ಗೇಶ್, ಮಹಾಲಕ್ಷ್ಮೀ ಲೇಔಟ್ ನಲ್ಲಿರುವ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ನಿವಾಸದಲ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರೆ. ಆರ್ ಆರ್ ನಗರದಲ್ಲಿರುವ ನಟ ದರ್ಶನ್ ಮನೆಯಲ್ಲಿ ಅರಣ್ಯಾಧಿಕಾರಿಗಳು ತಪಾಸಣೆ ನಡೆಸಿದ್ದಾರೆ.