• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಯುವಕರು ಪ್ರತಿ ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು ಎಂದ ನಾರಾಯಣ ಮೂರ್ತಿ: ಪ್ರಿಯಾಂಕ್‌ ಖರ್ಗೆ ಬೆಂಬಲ

Any Mind by Any Mind
November 1, 2023
in Top Story, ದೇಶ
0
ಯುವಕರು ಪ್ರತಿ ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು ಎಂದ ನಾರಾಯಣ ಮೂರ್ತಿ: ಪ್ರಿಯಾಂಕ್‌ ಖರ್ಗೆ ಬೆಂಬಲ
Share on WhatsAppShare on FacebookShare on Telegram

ನವದೆಹಲಿ ನಾರಾಯಣ ಮೂರ್ತಿಯವರು ಇನ್ಫೋಸಿಸ್‌ ಸಂಸ್ಥೆಯನ್ನು ಕಷ್ಟಪಟ್ಟು ಕಟ್ಟಿದ್ದಾರೆ. ಯುವಕರು ಪ್ರತಿ ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು ಎಂದು ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ಭವಿಷ್ಯದ ಭಾರತಕ್ಕೆ ಇದೊಂದು ಉತ್ತಮವಾದ ಸಲಹೆ. ನಾನು ಇದನ್ನು ಸ್ವಾಗತಿಸುತ್ತೇನೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಭಾರತದ ಉತ್ಪಾದಕತೆ ಕಡಿಮೆಯಾಗಿದ್ದು, ಜಿಡಿಪಿ ಹೆಚ್ಚಾಗಲು ಯುವಕರು ವಾರಕ್ಕೆ 70 ಗಂಟೆಗಳ ಕಾಲ ಕೆಲಸ ಮಾಡಬೇಕು ಎಂಬ ಇನ್ಫೋಸಿಸ್‌ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಹೇಳಿಕೆ ಇತ್ತೀಚೆಗೆ ಭಾರೀ ಪರ ವಿರೋಧಗಳ ಚರ್ಚೆಗೆ ಗ್ರಾಸವಾಗಿದ್ದ ಬೆನ್ನಲ್ಲೇ ಮೂರ್ತಿ ಹೇಳಿಕೆಗೆ ಪ್ರಿಯಾಂಕ್‌ ಬೆಂಬಲ ನೀಡಿದ್ದಾರೆ.

ADVERTISEMENT

ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್‌ ‘ಮೂರ್ತಿ ಅವರು ಕಠಿಣ ಪರಿಶ್ರಮದಿಂದ ಕಂಪನಿ ನಿರ್ಮಿಸಿ ಹೆಚ್ಚಿನ ಜನರಿಗೆ ಉದ್ಯೋಗ ನೀಡುವ ಮೂಲಕ ತಮ್ಮನ್ನು ತಾವು ಏನೆಂದು ಸಾಬೀತುಪಡಿಸಿದ್ದಾರೆ. ಅವರು ದೇಶದ ಹಿತದೃಷ್ಟಿಯಿಂದ ತಮ್ಮ ಅಭಿಪ್ರಾಯ ಹೇಳಿದ್ದಾರೆ. ನಾವು ಉತ್ಪಾದಕ ಕೆಲಸಗಳತ್ತ ಹೆಚ್ಚು ಗಮನ ಹರಿಸಬೇಕು. ಜಾಗತಿಕ ಉತ್ಪಾದನಾ ಕೇಂದ್ರವಾಗಿ ಹೊರಹೊಮ್ಮಲು ಉತ್ಪಾದಕತೆ ಹೆಚ್ಚಿಸಿಕೊಳ್ಳಬೇಕು. ಅದಕ್ಕಾಗಿ ಎಲ್ಲರೂ ಶ್ರಮಿಸಬೇಕು’ ಎಂದಿದ್ದಾರೆ.

 ಭಾರತ ಗಮನಾರ್ಹ ಬದಲಾವಣೆಯನ್ನು ಸಾಧಿಸಬೇಕಾದರೆ ಭಾರತದ ಯುವಕರು ವಾರಕ್ಕೆ ಗರಿಷ್ಠ 70 ಗಂಟೆಗಳ ಕಾಲ ಕೆಲಸ ಮಾಡಬೇಕು. ಅಲ್ಲದೇ ಅನಪೇಕ್ಷಿತ ಹವ್ಯಾಸಗಳನ್ನು ಪಾಶ್ಚಿಮಾತ್ಯರಿಂದ ಕಲಿಯಬಾರದು ಎಂದು ಇನ್ಫೊಸಿಸ್‌ ಸ್ಥಾಪಕ ನಾರಾಯಣ ಮೂರ್ತಿ ಗುರುವಾರ ಹೇಳಿದ್ದಾರೆ. ಇನ್ಫೋಸಿಸ್‌ನ ಮಾಜಿ ಸಿಎಫ್‌ಒ ಮೋಹನ್‌ದಾಸ್‌ ಪೈ ಅವರ ಜೊತೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಮೂರ್ತಿ, ಭಾರತೀಯರು ಪಾಶ್ಚಿಮಾತ್ಯರಿಂದ ಅನಪೇಕ್ಷಿತ ಹವ್ಯಾಸಗಳನ್ನು ಕಲಿಯಬಾರದು. ಭಾರತ ನನ್ನ ದೇಶ, ಇದಕ್ಕಾಗಿ ನಾನು 70 ಗಂಟೆಗಳ ಕಾಲ ದುಡಿಯುತ್ತೇನೆ ಎಂಬ ಮನಃಸ್ಥಿತಿಯನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

Tags: InfosysNarayanamurthyNewsPriyank Khargework
Previous Post

ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

Next Post

ಶಿವಸೇನೆ ಕಾರ್ಯಕರ್ತರನ್ನು ಗಡಿಯಲ್ಲೇ ತಡೆದು ಬೆಳಗಾವಿ ಪೊಲೀಸರು

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

May 15, 2026
Next Post
ಶಿವಸೇನೆ ಕಾರ್ಯಕರ್ತರನ್ನು ಗಡಿಯಲ್ಲೇ ತಡೆದು ಬೆಳಗಾವಿ ಪೊಲೀಸರು

ಶಿವಸೇನೆ ಕಾರ್ಯಕರ್ತರನ್ನು ಗಡಿಯಲ್ಲೇ ತಡೆದು ಬೆಳಗಾವಿ ಪೊಲೀಸರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada