• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

“ಗೌರಿ” ಚಿತ್ರತಂಡದಿಂದ ನಾಯಕ ಸಮರ್ಜಿತ್ ಲಂಕೇಶ್ ಹುಟ್ಟುಹಬ್ಬ ಆಚರಣೆ

ಪ್ರತಿಧ್ವನಿ by ಪ್ರತಿಧ್ವನಿ
November 1, 2023
in Top Story, ಸಿನಿಮಾ
0
“ಗೌರಿ”  ಚಿತ್ರತಂಡದಿಂದ ನಾಯಕ ಸಮರ್ಜಿತ್ ಲಂಕೇಶ್ ಹುಟ್ಟುಹಬ್ಬ ಆಚರಣೆ
Share on WhatsAppShare on FacebookShare on Telegram

ಖ್ಯಾತ ಸಾಹಿತಿ ಪಿ.ಲಂಕೇಶ್ ಅವರ ಮೊಮ್ಮಗ ಹಾಗೂ ಇಂದ್ರಜಿತ್ ಲಂಕೇಶ್ ಅವರ ಮಗ ಸಮರ್ಜಿತ್ ಲಂಕೇಶ್ “ಗೌರಿ” ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ಇತ್ತೀಚೆಗೆ ನಾಯಕ ಸಮರ್ಜಿತ್ ಲಂಕೇಶ್ ಹುಟ್ಟುಹಬ್ಬವನ್ನು ಚಿತ್ರತಂಡದ ಸದಸ್ಯರು ಆಚರಿಸಿದರು.

ADVERTISEMENT

ಸಮರ್ಜಿತ್ ಅವರ ಅಜ್ಜಿ, ಪಿ.ಲಂಕೇಶ್ ಪತ್ನಿ ಇಂದಿರಾ ಲಂಕೇಶ್, ತಾಯಿ ಅರ್ಪಿತಾ ಲಂಕೇಶ್, ಇಂದ್ರಜಿತ್ ಲಂಕೇಶ್, ನಾಯಕಿ ಸಾನ್ಯ ಅಯ್ಯರ್, ನಟಿಯರಾದ ಮಾನಸಿ ಸುಧೀರ್, ಎಸ್ತರ ನರೋನ, ಹಿರಿಯ ಛಾಯಾಗ್ರಾಹಕ ಕೆ.ಕೆ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

“ಗೌರಿ” ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ಈಗಾಗಲೇ ಚಿಕ್ಕಮಗಳೂರಿನ ರಮಣೀಯ ಸ್ಥಳಗಳಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಎರಡನೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತಿದೆ. ರವಿವರ್ಮ ಅವರ ಸಾಹಸ ನಿರ್ದೇಶನದಲ್ಲಿ ಸಾಹಸ ದೃಶ್ಯಗಳು ಅದ್ಭುತವಾಗಿ ಮೂಡಿಬಂದಿದೆ. ಸಮರ್ಜಿತ್ ನಾನು ಅಂದುಕೊಂಡದಕ್ಕಿಂತ ಚೆನ್ನಾಗಿ ಅಭಿನಯಿಸುತ್ತಿದ್ದಾರೆ. ಸಾನ್ಯ ಅವರು ಕೂಡ. ಮುಖ್ಯಮಂತ್ರಿ ಚಂದ್ರು, ಸಿಹಿಕಹಿ ಚಂದ್ರು, ಮಾನಸಿ ಸುಧೀರ್, ಎಸ್ತರ್ ನರೋನ ಮುಂತಾದವರು ನಮ್ಮ ಚಿತ್ರದಲ್ಲಿ ನಟಿಸುತ್ತಿದ್ದಾರೆ‌. ಹಿರಿಯ ಛಾಯಾಗ್ರಾಹಕ ಕೆ.ಕೆ ಛಾಯಾಗ್ರಹಣ ಮಾಡುತ್ತಿದ್ದಾರೆ. ಇದು ಅವರ ನೂರನೇ ಚಿತ್ರ ಎಂದು ಇಂದ್ರಜಿತ್ ಲಂಕೇಶ್ ತಿಳಿಸಿದರು.

ನಾನು ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಳ್ಳುವುದಿಲ್ಲ ಎಂದು ಮಾತನಾಡಿದ ಸಮರ್ಜಿತ್ ಲಂಕೇಶ್, ಇಂದು ಚಿತ್ರತಂಡದವರು ನನ್ನ ಹುಟ್ಟುಹಬ್ಬ ಆಚರಿಸಿದ್ದು ಖುಷಿಯಾಗಿದೆ. ಎಲ್ಲರಿಗೂ ಧನ್ಯವಾದ. ಸಾಕಷ್ಟು ತಯಾರಿ ಮಾಡಿಕೊಂಡು ಈ ಚಿತ್ರದಲ್ಲಿ ನಟಿಸುತ್ತಿದ್ದೇನೆ. ಚಿತ್ರ ಚೆನ್ನಾಗಿ ಮೂಡಿಬರುವ ಭರವಸೆ ಇದೆ ಎಂದರು. ನಾಯಕಿ ಸಾನ್ಯ ಅಯ್ಯರ್ ಚಿತ್ರೀಕರಣದ ಅನುಭವವನ್ನು ಹಂಚಿಕೊಂಡರು. ಮಾನಸಿ ಸುಧೀರ್ ಹಾಗೂ ಎಸ್ತರ್ ನರೋನ ಸಹ ಚಿತ್ರದ ಕುರಿತು ಮಾತನಾಡಿದರು.

ಇದು ನನ್ನ ನೂರನೇ ಚಿತ್ರ. ನನ್ನ ಮಗ ನಾಣಿ ಕೂಡ ಈ ಚಿತ್ರದಲ್ಲಿ ನನ್ನ ಜೊತೆ ಕೆಲಸ ಮಾಡುತ್ತಿದ್ದಾರೆ. ಸಮರ್ಜಿತ್ ನಟನೆ ನೋಡಿದಾಗ ಮೊದಲ ಚಿತ್ರ ಅನಿಸುವುದಿಲ್ಲ. ಅಷ್ಟು ಚೆನ್ನಾಗಿ ನಟಿಸುತ್ತಿದ್ದಾರೆ ಎಂದರು ಛಾಯಾಗ್ರಾಹಕ ಕೆ.ಕೆ. ಸಮರ್ಜಿತ್ ಅಜ್ಜಿ ಅವರು ಮೊಮ್ಮಗನಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ, ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು.

ಸಮರ್ಜಿತ್ ತಮ್ಮ ಹುಟ್ಟುಹಬ್ಬವನ್ನು ಅನೇಕ ಸಾಮಾಜಿಕ ಕಾರ್ಯಗಳೊಂದಿಗೆ ಅರ್ಥಪೂರ್ಣವಾಗಿ ಆಚರಿಸಿಕೊಂಡರು.
ಬೆಳಗ್ಗೆ ಸಿದ್ದಗಂಗಾ ಮಠಕ್ಕೆ ತೆರಳಿ ಶಿವಕುಮಾರ ಸ್ವಾಮಿಗಳ ಗದ್ದುಗೆ ದರ್ಶನ ಮಾಡಿ ಆಶೀರ್ವಾದ ಪಡೆದುಕೊಂಡರು. ಆನಂತರ ಕಂಠೀರವ ಸ್ಟುಡಿಯೋಗೆ ಆಗಮಿಸಿ ಪುನೀತ್ ರಾಜಕುಮಾರ್ ಸಮಾಧಿಗೆ ಪೂಜೆ ಸಲ್ಲಿಸಿದರು.

Tags: gowrigowricinemaIndira LankeshSamarjit Lankesh
Previous Post

Kannada Rajyotsava | ಕನ್ನಡ ನೆಲದಲ್ಲಿದ್ದೂ ಕನ್ನಡ ಮಾತನಾಡದವರು ಹಲವು ಭಾಗಗಳಲ್ಲಿ ಇದ್ದಾರೆ | CM Siddaramaiah

Next Post

CM Siddaramaiah | ಕನ್ನಡದಲ್ಲಿ ಕಲಿತರೆ ಉದ್ಯೋಗ ಸಿಗುವುದಿಲ್ಲ, ಜ್ಞಾನ ಸಂಪಾದನೆ ಸಾಧ್ಯವಿಲ್ಲ ಎನ್ನುವ ತಪ್ಪು

Related Posts

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ
ಸಿನಿಮಾ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

by ಪ್ರತಿಧ್ವನಿ
April 14, 2026
0

ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ‘ಕೆಡಿ’ ಸಿನಿಮಾಗೆ ಸೆನ್ಸಾರ್ ಸಂಬಂಧಿತ ಅಡಚಣೆಗಳು ಎದುರಾಗಿದ್ದು, ಕೇಂದ್ರ ಸೆನ್ಸಾರ್ ಮಂಡಳಿಯ ಕ್ರಮದ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಕನ್ನಡ ಸಿನಿಮಾಗಳಿಗೆ ಅನ್ಯಾಯವಾಗುತ್ತಿದೆ ಎಂಬ...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post

CM Siddaramaiah | ಕನ್ನಡದಲ್ಲಿ ಕಲಿತರೆ ಉದ್ಯೋಗ ಸಿಗುವುದಿಲ್ಲ, ಜ್ಞಾನ ಸಂಪಾದನೆ ಸಾಧ್ಯವಿಲ್ಲ ಎನ್ನುವ ತಪ್ಪು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada