• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರು ಸಬ್‌ ಅರ್ಬನ್‌ ರೈಲು ವಿಚಾರದಲ್ಲಿ ರಾಜ್ಯ ಹಿತಾಸಕ್ತಿ ಬಲಿಕೊಟ್ಟಿದ್ದು BSY : ಸಿಎಂ ಸಿದ್ದರಾಮಯ್ಯ ಗರಂ

Any Mind by Any Mind
November 2, 2023
in ಕರ್ನಾಟಕ
0
ಬೆಂಗಳೂರು ಸಬ್‌ ಅರ್ಬನ್‌ ರೈಲು ವಿಚಾರದಲ್ಲಿ ರಾಜ್ಯ ಹಿತಾಸಕ್ತಿ ಬಲಿಕೊಟ್ಟಿದ್ದು BSY : ಸಿಎಂ ಸಿದ್ದರಾಮಯ್ಯ ಗರಂ
Share on WhatsAppShare on FacebookShare on Telegram

ADVERTISEMENT

ಯಡಿಯೂರಪ್ಪ ಅವರು ಬೆಂಗಳೂರು ನಗರದ ಸಬ್‌ ಅರ್ಬನ್‌ ರೈಲು ಯೋಜನೆಗೆ ಕೇಂದ್ರ ಸರ್ಕಾರವು ರೂ. 450 ಕೋಟಿ ಬಿಡುಗಡೆ ಮಾಡಿದೆ ಎಂದಿದ್ದಾರೆ. ಇದು ಅರ್ಧ ಸತ್ಯ ಮಾತ್ರ. ವಾಸ್ತವ ಬೇರೆ ಇದ್ದು ನಾಡಿಗೆ ಆಗುತ್ತಿರುವ ಅನ್ಯಾಯ ಮುಚ್ಚಿಟ್ಟಿರುವುದು ಯಡಿಯೂರಪ್ಪ ಅವರೇ ಹೊರತು ನಾನಲ್ಲ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, 2018-19ರ ಕೇಂದ್ರ ಬಜೆಟ್‌ ಭಾಷಣದಲ್ಲಿ ಅಂದಿನ ವಿತ್ತ ಸಚಿವರಾಗಿದ್ದ ಅರುಣ್‌ ಜೇಟ್ಲಿ ಅವರು ರೂ.17,000 ಕೋಟಿ ವೆಚ್ಚದಲ್ಲಿ ಬೆಂಗಳೂರು ಉಪನಗರ ರೈಲು ಯೋಜನೆಯನ್ನು ಕೇಂದ್ರ ಸರ್ಕಾರವು ಯೋಜನೆ ರೂಪಿಸಲಿದೆ ಎಂದು ಹೇಳಿದ್ದರು. ಕೇಂದ್ರ ಸರ್ಕಾರದ ಈ ಘೋಷಣೆಯನ್ನು ಬಿಜೆಪಿ ತನ್ನ 2018ರ ಚುನಾವಣಾ ಪ್ರಣಾಳಿಕೆಯಲ್ಲಿ ಕೂಡ ಸೇರಿಸಿಕೊಂಡಿತ್ತು. ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ, “ಕೇಂದ್ರ ಸರ್ಕಾರ ಘೋಷಿಸಿದ ರೂ.17,000 ಕೋಟಿ ಅನುದಾನ ಬಳಸಿಕೊಂಡು ಬೆಂಗಳೂರಿನ ಉಪನಗರ ರೈಲು ಜಾಲವನ್ನು ಪೂರ್ಣಗೊಳಿಸುತ್ತೇವೆ” ಎಂದು ಹೇಳಿತ್ತು. ಇದರರ್ಥ ಕೇಂದ್ರ ಸರ್ಕಾರವು ಸಬ್‌ ಅರ್ಬನ್‌ ರೈಲು ಯೋಜನೆಗೆ ಬಜೆಟ್‌ ನಲ್ಲಿ 17,000 ಕೋಟಿ ರೂ. ನಿಗದಿಪಡಿಸಿದೆ ಎಂದು ರಾಜ್ಯ ಬಿಜೆಪಿಯೇ ಒಪ್ಪಿಕೊಂಡಿತ್ತು. ಆದರೆ ಆ ಆರ್ಥಿಕ ವರ್ಷ ಬಿಡಿಗಾಸು ಹಣವನ್ನು ಕೂಡ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರಲಿಲ್ಲ ಎಂದಿದ್ದಾರೆ.

2019ರ ಜುಲೈನಲ್ಲಿ ಆಪರೇಷನ್‌ ಕಮಲದ ಮೂಲಕ ರಾಜ್ಯದ ಸಮ್ಮಿಶ್ರ ಸರ್ಕಾರವನ್ನು ಉರುಳಿಸಿ ಅಧಿಕಾರಕ್ಕೆ ಬಂದ ಕರ್ನಾಟಕ ಬಿಜೆಪಿ, ಜನರಿಗೆ ದ್ರೋಹ ಬಗೆಯಲು ಮುಂದಾಯಿತು. ಕೇಂದ್ರ ಸರ್ಕಾರವು ಯೋಜನೆಗೆ ಅನುದಾನ ಕೊಡಲು ಮನಸ್ಸಿಲ್ಲದೆ ಫೆಬ್ರವರಿ 2020ರಲ್ಲಿ ಮಂಡಿಸಿದ 2020-21ರ ಕೇಂದ್ರ ಬಜೆಟ್‌ ನಲ್ಲಿ ಸಬ್ ಅರ್ಬನ್ ರೈಲು ಯೋಜನೆಗೆ ತಾನು ಕೇವಲ 20% ಅನುದಾನ ನೀಡುವುದಾಗಿ, ಮತ್ತೆ 20% ರಾಜ್ಯ ಸರ್ಕಾರ ಹಾಗೂ ಉಳಿದ 60% ಹಣವನ್ನು ರಾಜ್ಯಕ್ಕೆ ಸಾಲ ಕೊಡಿಸುವುದಾಗಿ ಘೋಷಿಸಿತು. ಅಂದಿನ ರಾಜ್ಯ ಬಿಜೆಪಿ ಸರ್ಕಾರ ಇದಕ್ಕೆ ಚಕಾರವೆತ್ತದೆ ಸಮ್ಮತಿಸಿತು. ಈ ಹೊಸ ಬದಲಾವಣೆಯ ನಂತರ
2022-23ರಲ್ಲಿ ಕೇಂದ್ರ ಸರ್ಕಾರ ರೂ.450 ಕೋಟಿ ಅನುದಾನವನ್ನು ನಿಗದಿ ಮಾಡಿತ್ತು, ಆದರೆ ಕೊಟ್ಟಿದ್ದು ರೂ.50 ಕೋಟಿ ಮಾತ್ರ. ನಂತರ ಪ್ರಸಕ್ತ ಸಾಲಿನಲ್ಲಿ ರೂ.1350 ಕೋಟಿ ನಿಗದಿ ಮಾಡಿ, ಈ ವರೆಗೆ ಕೇವಲ ರೂ.450 ಕೋಟಿ ಬಿಡುಗಡೆ ಮಾಡಿದೆ ಎಂದು ಅರೋಪಿಸಿದ್ದಾರೆ.

ಅಂದು ಮೋದಿ ಸರ್ಕಾರದ ಜೊತೆ ಸೇರಿ ನಾಡಿಗೆ ಅನ್ಯಾಯ ಮಾಡಿದ್ದ ಯಡಿಯೂರಪ್ಪ ಅವರೇ ಇಂದು ಸಬ್‌ ಅರ್ಬನ್‌ ರೈಲು ಯೋಜನೆಗೆ ಕಾಂಗ್ರೆಸ್‌ ನಿರಾಸಕ್ತಿ ತೋರುತ್ತಿದೆ ಎಂದು ಆರೋಪ ಮಾಡುತ್ತಿರುವುದು ವಿಪರ್ಯಾಸವಾಗಿದೆ ಎಂದು ಹೇಳಿದ್ದಾರೆ.

Tags: Congress Partyಎಚ್ ಡಿ ಕುಮಾರಸ್ವಾಮಿಕರೋನಾನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಗುಂಪುಗಳ ನಡುವೆ ದ್ವೇಷ ಪೋಸ್ಟ್ : ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಮತ್ತೊಂದು ಪ್ರಕರಣ

Next Post

ಬಲೆಗೆ ಬಿದ್ದ ಚಿರತೆ ಕೊಂದಿದ್ದಕ್ಕೆ ಪ್ರಾಣಿಪ್ರಿಯರ ಆಕ್ರೋಶ..

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಬಲೆಗೆ ಬಿದ್ದ ಚಿರತೆ ಕೊಂದಿದ್ದಕ್ಕೆ ಪ್ರಾಣಿಪ್ರಿಯರ ಆಕ್ರೋಶ..

ಬಲೆಗೆ ಬಿದ್ದ ಚಿರತೆ ಕೊಂದಿದ್ದಕ್ಕೆ ಪ್ರಾಣಿಪ್ರಿಯರ ಆಕ್ರೋಶ..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada