ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಭಾರಿ ಭಯೋತ್ಪಾದಕ ದಾಳಿ ನಡೆದಿದೆ.
ಹಲವು ಆತ್ಮಾಹುತಿ ಬಾಂಬ್ ದಾಳಿಕೋರರು ಇಂದು ಬೆಳಿಗ್ಗೆ ವಾಯು ನೆಲೆಗೆ ನುಗ್ಗಿದ್ದಾರೆ. ಇದಕ್ಕೆ ಪ್ರತಿಯಾಗಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನ ವಾಯು ಪಡೆ (ಪಿಎಎಫ್) ತಿಳಿಸಿದೆ.
ಭಾರಿ ಶಸ್ತ್ರಸಜ್ಜಿತರಾದ 5-6 ಮಂದಿ ಜನರ ಗುಂಪು ಶನಿವಾರ ಮುಂಜಾನೆ ತೀವ್ರ ಸ್ವರೂಪದ ದಾಳಿ ಆರಂಭಿಸಿದೆ. ಇದರಿಂದ ಎರಡೂ ಕಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.
ಅಪರಿಚಿತ ಬಂದೂಕುಧಾರಿಗಳ ವಿರುದ್ಧ ನಡೆಸಿದ ಪ್ರತೀಕಾರದ ಗುಂಡಿನ ದಾಳಿಯಲ್ಲಿ ಮೂವರು ಭಯೋತ್ಪಾದಕರನ್ನು ಹತ್ಯೆಗೈದಿರುವುದಾಗಿ ಪಾಕಿಸ್ತಾನ ವಾಯುಪಡೆ (ಪಿಎಎಫ್) ತಿಳಿಸಿದೆ. ಐದರಿಂದ ಆರು ಮಂದಿ ಭಾರಿ ಶಸ್ತ್ರಸಜ್ಜಿತ ವ್ಯಕ್ತಿಗಳ ಗುಂಪು ಮುಂಜಾನೆ ದಾಳಿ ನಡೆಸಿದ್ದು, ಶೂಟೌಟ್‌ಗೆ ಕಾರಣವಾಯಿತು. ಭಯೋತ್ಪಾದಕರು ವಾಯುನೆಲೆ ಪ್ರವೇಶಿಸುವ ಮೊದಲೇ ಅವರ ದಾಳಿಯನ್ನು ವಿಫಲಗೊಳಿಸಲಾಯಿತು ಎಂದು ಹೇಳಿದೆ. ಇನ್ನೊಂದೆಡೆ, ದಾಳಿಯ ಕುರಿತಾದ ಹಲವಾರು ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ.






