• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬರಕ್ಕಿಂತ ಜೆಡಿಎಸ್ – ಬಿಜೆಪಿ ಮೈತ್ರಿಯೇ ನಿಮಗೆ ದೊಡ್ಡ ಸಂಕಷ್ಟವಾಗಿದೆ: ಹೆಚ್.ಡಿ.ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
November 6, 2023
in Top Story, ಕರ್ನಾಟಕ
0
ಬರಕ್ಕಿಂತ ಜೆಡಿಎಸ್ – ಬಿಜೆಪಿ ಮೈತ್ರಿಯೇ ನಿಮಗೆ ದೊಡ್ಡ ಸಂಕಷ್ಟವಾಗಿದೆ: ಹೆಚ್.ಡಿ.ಕುಮಾರಸ್ವಾಮಿ
Share on WhatsAppShare on FacebookShare on Telegram

ಬೆಂಗಳೂರು: ತಾವು ಹಮ್ಮಿಕೊಳ್ಳಲಿರುವ ರೈತ ಸಾಂತ್ವನ ಯಾತ್ರೆ ಬಗ್ಗೆ ಲಘುವಾಗಿ ಹೇಳಿಕೆ ಕೊಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀವ್ರ ತಿರುಗೇಟು ಕೊಟ್ಟಿದ್ದಾರೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ.

ADVERTISEMENT

ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ನಿಮಗೆ ರಾಜ್ಯದ ಬರ ಮತ್ತಿತರೆ ಸಂಕಷ್ಟಗಳಿಗಿಂತ ಜೆಡಿಎಸ್ – ಬಿಜೆಪಿ ಮೈತ್ರಿಯೇ ಬಹುದೊಡ್ಡ ಸಂಕಷ್ಟವಾಗಿ ಪರಿಣಮಿಸಿದಂತೆ ತೋರುತ್ತಿದೆ ಎಂದು ಕಾಲೆಳೆದಿದ್ದಾರೆ.

ಅಲ್ಲದೆ ವಿಶ್ವ ವಿಖ್ಯಾತ ವಿತ್ತತಜ್ಞ ಎಂದು ಹಾಲಿ ಸಿಎಂಗೆ ಮಾಜಿ ಮುಖ್ಯಮಂತ್ರಿ ಟಾಂಗ್ ನೀಡಿದ್ದಾರೆ. ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ʼಹೃದಯ ವೈಶಾಲ್ಯತೆʼಗೆ ನಾನು ಆಭಾರಿ. ರೈತ ಸಾಂತ್ವನ ಯಾತ್ರೆಯನ್ನು ಸ್ವಾಗತ ಮಾಡಿರುವ ನಿಮ್ಮ ʼದೊಡ್ಡʼ ಗುಣವನ್ನು ಮನಸಾರೆ ಕೊಂಡಾಡುತ್ತೇನೆ. ಜೆಡಿಎಸ್ ಸಲ್ಲಿಸಲಿರುವ ಬರ ಅಧ್ಯಯನ ವರದಿಯನ್ನು ಗಂಭೀರವಾಗಿ ಪರಿಗಣಿಸುವುದಾಗಿ ಹೇಳಿದ್ದೀರಿ, ಬಹಳ ಸಂತೋಷ ಎಂದು ಕುಮಾರಸ್ವಾಮಿ ಅವರು ಟಾಂಗ್ ನೀಡಿದ್ದಾರೆ.

ರೈತ ಸಾಂತ್ವನ ಯಾತ್ರೆಯ ಅನುಭವವನ್ನು ಕೇಂದ್ರದ ಜತೆಗೂ ಹಂಚಿಕೊಳ್ಳುತ್ತೇವೆ. ನಿಮಗೆ ಸಂಶಯ ಬೇಡ. ರಾಜ್ಯದ ಅಗತ್ಯಗಳಿಗೆ ಕೇಂದ್ರ ಸರಕಾರ ಹೇಗೆ ಸ್ಪಂದಿಸುತ್ತಿದೆ? ಅದಕ್ಕೆ ನಿಮ್ಮ ನೇತೃತ್ವದ ಸರಕಾರ ಎಷ್ಟು ʼಗಂಭೀರ(!?)ʼ ಪ್ರಯತ್ನ ಮಾಡಿದೆ, ಮಾಡುತ್ತಿದೆ ಎನ್ನುವುದು ನನಗೂ ತಿಳಿದಿದೆ. ಬರದ ಜತೆಗೆ, ವಿದ್ಯುತ್‌ ಬಿಕ್ಕಟ್ಟು, ಕಾವೇರಿ ಸಂಕಷ್ಟದ ವಿಷಯದಲ್ಲಿ ನಿಮ್ಮ ಸರಕಾರದ ʼಅಪರಿಮಿತ ಅಸಡ್ಡೆʼಯನ್ನು ಅರಿಯದಷ್ಟು ಮುಗ್ಧನೇ ನಾನು? ಎಂದು ಸಿಎಂಗೆ ಖಾರವಾಗಿ ಪ್ರಶ್ನಿಸಿದ್ದಾರೆ.

ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ಜತೆ ಹೆಚ್.ಡಿ.ದೇವೇಗೌಡರು ಮತ್ತವರ ಕುಟುಂಬಕ್ಕೆ ಆತ್ಮೀಯತೆ ಇದೆ ಎಂಬುದರಲ್ಲಿ ಎರಡು ಮಾತಿಲ್ಲ. ಬಿಜೆಪಿ-ಜೆಡಿಎಸ್‌ ನಡುವೆ ಮೈತ್ರಿ ಏರ್ಪಟ್ಟಿದೆ ಎನ್ನುವುದೂ ನಿಜ. ರಾಜ್ಯದ ಹಿತಕ್ಕಾಗಿ ನಾವು ಪ್ರಧಾನಿಯವರ ಮುಂದೆಯೂ ದನಿ ಎತ್ತುತ್ತೇವೆ, ಅದು ನಮ್ಮ ಬದ್ಧತೆ. ಆದರೆ, ನಿಮಗೆ ರಾಜ್ಯದ ಬರ ಮತ್ತಿತರೆ ಸಂಕಷ್ಟಗಳಿಗಿಂತ ಈ ಮೈತ್ರಿಯೇ ಬಹುದೊಡ್ಡ ಸಂಕಷ್ಟವಾಗಿ ಪರಿಣಮಿಸಿದಂತೆ ತೋರುತ್ತಿದೆ! ಅಲ್ಲವೇ? ಎಂದು ಅವರು ಕುಟುಕಿದ್ದಾರೆ.

ಹುಳಿ ಹಿಂಡುವ ಉಡಾಳತನ ಯಾಕೆ?

ಪ್ರತಿಪಕ್ಷಗಳಾಗಿ ನಮ್ಮ ಪ್ರಯತ್ನ ನಾವು ಮಾಡುತ್ತೇವೆ, ಸರಕಾರವಾಗಿ ನಿಮ್ಮ ಸಾಧನೆ ಏನು? ಎಷ್ಟು ರೈತರಿಗೆ ಬೆಳೆ ವಿಮೆ ಕೊಡಿಸಿದ್ದೀರಿ? ಸರಕಾರದ ವತಿಯಿಂದ ಎಷ್ಟು ಪರಿಹಾರ ನೀಡಿದ್ದೀರಿ? ಅದನ್ನು ಹೇಳಬೇಕೆ ಹೊರತು, ಮಿತ್ರರ ನಡುವೆ ಹುಳಿ ಹಿಂಡುವ ಉಡಾಳತನ ತಮಗ್ಯಾಕೆ? ಎನ್ನುವುದು ನನ್ನ ವಿನಮ್ರ ಪ್ರಶ್ನೆ ಎಂದಿದ್ದಾರೆ ಮಾಜಿ ಮುಖ್ಯಮಂತ್ರಿಗಳು.

236 ತಾಲೂಕುಗಳಲ್ಲಿ 216 ಬರಪೀಡಿತ ಎಂದು ಲೆಕ್ಕ ಕೊಟ್ಟಿದ್ದೀರಿ. 33,710 ಕೋಟಿ ರೂ. ಮೌಲ್ಯದ ಬೆಳೆಹಾನಿ ಆಗಿದ್ದು, ಕೇಂದ್ರಕ್ಕೆ 17,901 ಕೋಟಿ ರೂ. ಪರಿಹಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದ್ದೀರಿ, ಸರಿ. ಜತೆಗೆ; 343 ಕೋಟಿ ರೂ. ಬಿಡುಗಡೆ ಮಾಡಿದ್ದೇವೆ ಎಂದೂ ತಿಳಿಸಿದ್ದೀರಿ. ಅದನ್ನು ಯಾರಿಗೆ ಹಂಚಿದ್ದೀರಿ? ಎಂದು ಕುಮಾರಸ್ವಾಮಿ ಅವರು ಪ್ರಶ್ನೆ ಮಾಡಿದ್ದಾರೆ.

ವಿಶ್ವ ವಿಖ್ಯಾತ ವಿತ್ತತಜ್ಞ!!

ಈ ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್‌ ಮಂಡಿಸಿ ʼವಿಶ್ವವಿಖ್ಯಾತ ವಿತ್ತತಜ್ಞʼರಾಗಿ ಮೆರೆಯುತ್ತಿರುವವರು ನೀವು. ಅಧಿಕಾರಕ್ಕೆ ಬಂದೊಡನೆ ವಿಶೇಷವಾಗಿ ವಿತ್ತಖಾತೆಯನ್ನು ತಮ್ಮಲ್ಲಿಯೇ ‘ ಜೋಪಾನ ‘ ಮಾಡಿಕೊಳ್ಳುವ ನಿಮಗೆ, ಕೇಂದ್ರ ಸರಕಾರವು ಬರಕ್ಕೆ, ಪ್ರವಾಹಕ್ಕೆ ಯಾವ ರೀತಿ ಪರಿಹಾರ ಕೊಡುತ್ತದೆ ಎನ್ನುವ ಸಾಮಾನ್ಯ ತಿಳಿವಳಿಕೆಯೂ ಇಲ್ಲವೇ? ಎಂದು ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.

ಹೋಗಲಿ, ನೀವು ಈ ರಾಜ್ಯದ ಮುಖ್ಯಮಂತ್ರಿ… ದೆಹಲಿಗೆ ಹೋಗಿ ಪ್ರಧಾನಿಗಳಿಗೆ ವಸ್ತುಸ್ಥಿತಿ ಮನವರಿಕೆ ಮಾಡಿಕೊಡಬೇಕಿತ್ತು. ಅದನ್ನೂ ಮಾಡಲಿಲ್ಲ, ಪ್ರತಿಷ್ಠೆ ನಿಮಗೆ. ಪ್ರಧಾನಿಗಳನ್ನು ಸದಾ ನಿಂದಿಸುತ್ತಾ ಕುಳಿತರೆ ಲಾಭವೇನು? ಇಲ್ಲಿ ವರ್ಗಾವಣೆ ದಂಧೆ, ಕಮೀಷನ್ ವಸೂಲಿ, ಆಪರೇಷನ್‌ ಹಸ್ತ, ಡಿನ್ನರ್‌-ಬ್ರೇಕ್‌ ಫಾಸ್ಟ್‌ ಮೀಟಿಂಗುಗಳಲ್ಲಿಯೇ ʼಭಾರೀʼ ಬ್ಯುಸಿ‌ ಆಗಿರುವ ನಿಮಗೆ ದೆಹಲಿಗೆ ಜನರ ಅಹವಾಲು ತೆಗೆದುಕೊಂಡು ಹೋಗಲು ಸಮಯವಾದರೂ ಎಲ್ಲಿದೆ? ಎಂದು ಕೇಳಿದ್ದಾರೆ.

ಕಾಂಗ್ರೆಸ್ ಸದಸ್ಯರು ಎಲ್ಲಿ ಅವಿತಿದ್ದರು?

ನೀವು ಕರೆದೊಯ್ಯುವ ಸರ್ವಪಕ್ಷ ನಿಯೋಗದಲ್ಲಿ ಜೆಡಿಎಸ್ ಪಕ್ಷವೂ ಇರುತ್ತದೆ, ನಮ್ಮ ಮಿತ್ರಪಕ್ಷ ಬಿಜೆಪಿಯೂ ಇರುತ್ತದೆ. ಇನ್ನೊಬ್ಬರ ಧೈರ್ಯದ ಬಗ್ಗೆ ಮಾತನಾಡುವ ನೀವು, ನಿಮ್ಮ ಸ್ಥೈರ್ಯದ ಬಗ್ಗೆಯೂ ಕೊಂಚ ಹೇಳಬೇಕಲ್ಲವೇ? ಮುಖ್ಯಮಂತ್ರಿಯಾಗಿ ನೀವು ರಾಜ್ಯಕ್ಕೆ ಸಂಬಂಧಿಸಿ ಪ್ರಧಾನಿಗಳನ್ನು,‌ ಸಂಬಂಧಿಸಿದ ಕೇಂದ್ರ ಸಚಿವರನ್ನು ಎಷ್ಟು ಸಲ ಭೇಟಿ ಆಗಿದ್ದೀರಿ? ಎಷ್ಟು ಅರ್ಜಿ ಕೊಟ್ಟಿದ್ದೀರಿ? ರಾಜ್ಯದ ನೆಲ-ಜಲ, ಇನ್ನಿತರೆ ಸಂಕಷ್ಟದ ವೇಳೆ ಈ ಇಳಿವಯಸ್ಸಿನಲ್ಲಿಯೂ ಮಾನ್ಯ ದೇವೇಗೌಡರು ನಡೆಸುತ್ತಿರುವ ಹೋರಾಟ ನಿಮಗೆ ಕಾಣಿಸಿಲ್ಲವೇ? ಕಾವೇರಿ ಬಗ್ಗೆ ಅವರು ಸಂಸತ್ತಿನಲ್ಲಿ ಸಿಡಿದೆದ್ದಾಗ ನಿಮ್ಮ ಪಕ್ಷದ ಸದಸ್ಯರೆಲ್ಲರೂ ಎಲ್ಲಿ ಅವಿತು ಕುಳಿತಿದ್ದರು ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೀಟಿಂಗ್ ಗಳಲ್ಲಿ ಆಪರೇಷನ್ ಹಸ್ತದ ಚರ್ಚೆ

ಡಿನ್ನರ್‌-ಬ್ರೇಕ್‌ ಫಾಸ್ಟ್ ಮೀಟಿಂಗ್‌‌ ಮಾಡಿಕೊಂಡು ಆಪರೇಷನ್‌ ಹಸ್ತದ ಬಗ್ಗೆಯೇ ನಿಮ್ಮ ಸಚಿವರ ಬಳಿ ಅಲವತ್ತುಕೊಳ್ಳುತ್ತಿದ್ದೀರಿ. ಪಂಚರಾಜ್ಯಗಳಿಗೆ ಹಣ ಹೊಂಚಲು ರಾಜ್ಯವನ್ನು ದೋಚುವುದು ಹೇಗೆಂದು ಗುಟ್ಟು ಗುಟ್ಟಾಗಿ ಪಾಠ ಮಾಡುತ್ತಿದ್ದೀರಿ. ಜೆಡಿಎಸ್‌, ಬಿಜೆಪಿ ಶಾಸಕರು ಹಾಗೂ ಸೋತ ಅಭ್ಯರ್ಥಿಗಳನ್ನು ಆಪರೇಷನ್‌ ಮಾಡಲು ಗುಳ್ಳೆನರಿಗಳಂತೆ ಅವರ ಮನೆಗಳ ಮುಂದೆ ಕತ್ತಲಾದ ಮೇಲೆ ಹೊಂಚು ಹಾಕಿ ಕೂರುತ್ತಿದ್ದೀರಿ ಎಂದು ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.

ಕುತ್ತಿಗೆಗೆ ಗ್ಯಾರಂಟಿ ಬೋರ್ಡ್‌ ತಕಲಾಕ್ಕೊಂಡು ಹಾದಿಬೀದಿಯಲ್ಲಿ ಓಡಾಡುತ್ತಿದ್ದೀರಿ. ಐದು ತಿಂಗಳಿಗೇ ಭದ್ರತೆಯ ಗ್ಯಾರಂಟಿ ಇಲ್ಲದೆ ಬಾಲಗ್ರಹಪೀಡಿತ ನಿಮ್ಮ ಸರಕಾರ ಭಿನ್ನಮತಪೀಡಿತವಾಗಿದೆ. ಕುರ್ಚಿ ಉಳಿಸಿಕೊಳ್ಳಲು ನೀವೂ ಹೆಣಗಾಡುತ್ತಿದ್ದೀರಿ. ಹೌದಲ್ಲವೇ? ಆನ್ಸರ್ ಮಾಡಿ ಸನ್ಮಾನ್ಯ ಸಿದ್ದರಾಮಯ್ಯನವರೇ? ಎಂದು ಕೇಳಿದ್ದಾರೆ ಕುಮಾರಸ್ವಾಮಿ ಅವರು.

Tags: BJPCMSiddaramaiahHdKumaraswamyJDSKarnatakaKarnatakaGovt
Previous Post

ನ.10ರಿಂದ ವೈಕುಂಠ ದ್ವಾರ ದರ್ಶನ ಮಹೋತ್ಸವಕ್ಕೆ ಆನ್‌ಲೈನ್‌ ಮೂಲಕ ಟಿಕೆಟ್‌ ಬುಕ್ ಗೆ ಅವಕಾಶ

Next Post

ಸಿದ್ದರಾಮಯ್ಯನವರ ಸಿಎಂ ಸ್ಥಾನ ಎಷ್ಟು ದಿನ ಇರುತ್ತೋ ಅವರಿಗೇ ಗೊತ್ತಿಲ್ಲ: ಪ್ರಧಾನಿ ಮೋದಿ

Related Posts

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
ಕರ್ನಾಟಕ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

by ಪ್ರತಿಧ್ವನಿ
April 23, 2026
0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈ ಬಾರಿ ಉತ್ತಮ ಫಲಿತಾಂಶ ಬಂದ ಹಿನ್ನೆಲೆ, ಈ ಹಿಂದೆ ಘೋಷಿಸಲಾಗಿದ್ದ ಮೂರನೇ ಪರೀಕ್ಷೆ (Exam-3)...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
ಸಿದ್ದರಾಮಯ್ಯನವರ ಸಿಎಂ ಸ್ಥಾನ ಎಷ್ಟು ದಿನ ಇರುತ್ತೋ ಅವರಿಗೇ ಗೊತ್ತಿಲ್ಲ: ಪ್ರಧಾನಿ ಮೋದಿ

ಸಿದ್ದರಾಮಯ್ಯನವರ ಸಿಎಂ ಸ್ಥಾನ ಎಷ್ಟು ದಿನ ಇರುತ್ತೋ ಅವರಿಗೇ ಗೊತ್ತಿಲ್ಲ: ಪ್ರಧಾನಿ ಮೋದಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada