ಪೋಕ್ಸೋ ಕೇಸ್ ಪ್ರಕರಣವನ್ನು ಎದುರಿಸುತ್ತಿರುವ ಮುರುಘ ಶ್ರೀಗಳಿಗೆ ಕಳೆದ ವಾರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಈಗ ಮತ್ತೆ ಬಂಧನದ ಭೀತಿ ಎದುರಾಗಿದ್ದು, ಶೀಘ್ರದಲ್ಲೇ ಅವರನ್ನು ಬಂಧಿಲಾಗುತ್ತದೆ ಎಂಬುದು ತಿಳಿದುಬಂದಿದೆ.
ಶ್ರೀಗಳು ಮೊದಲನೇ ಕೇಸಿನಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದರು. ಇದೀಗ 2ನೇ ಕೇಸಿನಲ್ಲಿ ಬಂಧಿಸುವಂತೆ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ಆದೇಶ ಮಾಡಿದೆ. ಪೋಕ್ಸೋ ಕೇಸಿನಲ್ಲಿ ಶ್ರೀಗಳಿಗೆ ಅರೆಸ್ಟ್ ವಾರೆಂಟ್ ಜಾರಿಯಾಗಿದ್ದು, ಈ ಮೂಲಕ ಕೇವಲ ನಾಲ್ಕೇ ದಿನಕ್ಕೆ ಶ್ರೀಗಳಿಗೆ ಮತ್ತೆ ಬಂಧನವಾಗು ಸಾಧ್ಯತೆ ಜಾಸ್ತಿ ಇದೆ ಎನ್ನಲಾಗಿದೆ.
ಮೊದಲನೇ ಪೋಕ್ಸೋ ಪ್ರಕರಣದಲ್ಲಿ ಹೈಕೋರ್ಟ್ ನಿಂದ ಷರತ್ತುಬದ್ಧ ಜಾಮೀನು ಹಿನ್ನೆಲೆಯಲ್ಲಿ ಮುರುಘಾಶ್ರೀ ಚಿತ್ರದುರ್ಗ ಜಿಲ್ಲೆ ಪ್ರವೇಶಿಸುವಂತಿಲ್ಲ. ಬಂಧನ ವಾರೆಂಟ್ ಹೈಕೋರ್ಟ್ ಆದೇಶ ಉಲ್ಲಂಘನೆ ಆಗುತ್ತದೆ ಎಂದು ಮುರುಘಾಶ್ರೀ ಪರ ವಕೀಲ ಉಮೇಶ್ ವಾದಿಸಿದ್ದಾರೆ.

ಸದ್ಯ ಎರಡೂ ಕಡೆಯ ವಾದ ಆಲಿಸಿರುವ ಚಿತ್ರದುರ್ಗ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯ ಇಂದು ಬಂಧನ ವಾರಂಟ್ಗೆ ಆದೇಶ ನೀಡಿದೆ. ಈ ಮೂಲಕ 2ನೇ ಪ್ರಕರಣದಲ್ಲಿ ನಿರ್ಧಾರ ಪ್ರಕಟಿಸಿದೆ.





