ಮುರುಘಾಶ್ರೀ ಜಾಮೀನು ರಹಿತ ಬಂಧನದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಹೈಕೋರ್ಟ್ ನ್ಯಾ.ಸೂರಜ್ ಗೋವಿಂದರಾಜ್‌ರವರಿದ್ದ ಪೀಠ ಈ ಆದೇಶ ಹೊರಡಿಸಿದೆ.
ಜಿಲ್ಲಾ ನ್ಯಾಯಾಲಯದ ಆದೇಶ ನೀಡಿರುವುದು ಆರೋಪಿಯಾಗಿರುವ ಮುರುಘಾಶ್ರೀಗಳಿಗೆ ಗೆ ಅನ್ಯಾಯವಾಗಿದ್ದು, ಜಾಮೀನು ರಹಿತ ಬಂಧನದ ವಾರೆಂಟ್ಗೆ ತಡೆ ನೀಡಿ, ಆದೇಶ ಉಲ್ಲಂಘಿಸಿ ಚಿತ್ರದುರ್ಗಕ್ಕೆ ಕರೆತಂದಿರುವುದು ಹೈಕೋರ್ಟ್ ಆದೇಶದ ಉಲ್ಲಂಘನೆ ಆಗಿದೆ. ಮುರುಘಾಶ್ರೀ ಬಿಡುಗಡೆಗೊಳಿಸುವಂತೆ ಚಿತ್ರದುರ್ಗ ಜಿಲ್ಲಾ ಕಾರಾಗೃಹಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ದಾವಣಗೆರೆಯ ದೊಡ್ಡಪೇಟೆಯಲ್ಲಿನ ವಿರಕ್ತ ಮತದಲ್ಲಿದ್ದ ಶರಣರನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿ ಚಿತ್ರದುರ್ಗಕ್ಕೆ ಕರೆದೊಯ್ದಿದ್ದರು.
ಎರಡನೇ ಪೋಕ್ಸೋ ಪ್ರಕರಣಕ್ಕೆ ಜಿಲ್ಲಾ ನ್ಯಾಯಾಲಯ ಜಾಮೀನು ರಹಿತ ಬಂಧನಕ್ಕೆ ಆದೇಶಿಸಿತ್ತು. ಆ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದರು.