545 ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಸಿವಿಲ್) ಹುದ್ದೆಗಳ ನೇಮಕಾತಿಗೆ ಹೊಸದಾಗಿ ಪರೀಕ್ಷೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿತ್ತು ಇದರ ಬೆನ್ನಲೇ, ಡಿಸೆಂಬರ್ 23ರಂದು 545 PSI ಹುದ್ದೆಗಳಿಗೆ ಮರು ಪರೀಕ್ಷೆ ನಡೆಸುವುದಕ್ಕೆ KEA ಆದೇಶ ನೀಡಿದೆ.

ಇದೇ ವೇಳೆ ನ್ಯಾಯಾಪೀಠ ಅಭ್ಯರ್ಥಿಗಳಿಗೆ ಯಾವುದೇ ಹೆಚ್ಚುವರಿ ಶುಲ್ಕವನ್ನು ವಿಧಿಸದೆ ರಾಜ್ಯ ಸರ್ಕಾರವು ಪ್ರಕ್ರಿಯೆಯನ್ನು ಸ್ವತಂತ್ರ ಸಂಸ್ಥೆಗೆ ವಹಿಸಬೇಕು ಎಂದು ನ್ಯಾಯಾಲಯ ತಿಳಿಸಿತ್ತು . ಅಕ್ರಮಗಳ ಆರೋಪದ ನಂತರ ಹೊಸ ಪರೀಕ್ಷೆ ನಡೆಸುವ ಸರ್ಕಾರದ ನಿರ್ಧಾರವನ್ನು ಅಭ್ಯರ್ಥಿಗಳು ಪ್ರಶ್ನಿಸಿದ ನಂತರ ಈ ನಿರ್ಧಾರ ಬಂದಿದೆ.






