ಕರ್ನಾಟಕದಲ್ಲಿ ಕಾಂಗ್ರೆಸ್ ತನ್ನ ಚುನಾವಣಾ ಸಮಯದಲ್ಲಿ ನೀಡಿದ್ದ ಗ್ಯಾರಂಟಿ ಭರವಸೆಗಳನ್ನು ಜಾರಿಗೊಳಿಸಿಲ್ಲ ಎಂದು ಆರೋಪಿಸಿರುವ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ , ತೆಲಂಗಾಣದಲ್ಲಿ ಕಾಂಗ್ರೆಸ್ ಮತ್ತು ಆಡಳಿತಾರೂಢ ಬಿಆರ್ಎಸ್ ಎರಡೂ ಪಕ್ಷ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಿವೆ ಎಂದು ಗುರುವಾರ ಆರೋಪಿಸಿದ್ದಾರೆ .
“ತೆಲಂಗಾಣದ ಸಂಗಾರೆಡ್ಡಿ ಪಟ್ಟಣದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ನಡ್ಡಾ, ಕಾಂಗ್ರೆಸ್ ಸರ್ಕಾರದ ನಿರುದ್ಯೋಗ ಭತ್ತೆ ಮತ್ತು 200 ಯೂನಿಟ್ ಉಚಿತ ವಿದ್ಯುತ್ನಂತಹ ಭರವಸೆಗಳ ಅನುಷ್ಠಾನಕ್ಕಾಗಿ ಕರ್ನಾಟಕದ ಜನರು ಕಾಯುತ್ತಿದ್ದಾರೆ. ಆದರೆ ಕಾಂಗ್ರೆಸ್ ಅಥವಾ ಕೆಸಿಆರ್ ಪಕ್ಷ ತೆಲಂಗಾಣದಲ್ಲಿ ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರ ಮತ್ತು ಕುಟುಂಬ ಆಡಳಿತ ಗ್ಯಾರಂಟಿ” ಎಂದು ಅವರು ಟೀಕಿಸಿದ್ದಾರೆ.

“ಬಡವರಿಗೆ ಡಬಲ್ ಬೆಡ್ ರೂಂ ಮನೆ ನೀಡುವುದು, ದಲಿತ ಬಂಧು ಯೋಜನೆ ಅನುಷ್ಠಾನ ಸೇರಿದಂತೆ ಚುನಾವಣಾ ಭರವಸೆಗಳ ಬಗ್ಗೆ ನಡ್ಡಾ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ವಿರುದ್ಧ ವಾಗ್ದಾಳಿ ನಡೆಸಿದರು.





