ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಸೇರಿದಂತೆ 33 ವಿರೋಧ ಪಕ್ಷದ ಸದಸ್ಯರನ್ನು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಸದನದಿಂದ ಅಮಾನತುಗೊಳಿಸಿದ್ದಾರೆ.
ಲೋಕಸಭಾ ಭದ್ರತಾ ಉಲ್ಲಂಘನೆಯ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಹೇಳಿಕೆ ನೀಡುವಂತೆ ಒತ್ತಾಯಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಸಂಸದರು ಸದನದ ಒಳಗೆ ಫಲಕಗಳನ್ನು ಪ್ರದರ್ಶಿಸಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಕಳೆದ ಕೆಲವಾರ ಲೋಕಸಭೆಯಲ್ಲಿ 14 ಸಂಸದರನ್ನು ಅಮಾನತುಗೊಳಿಸಿ ಸ್ಪೀಕರ್ ಆದೇಶಿಸಿದ್ದರು. ಈ ಬೆನ್ನಲ್ಲೇ ಇದೀಗ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಸೇರಿದಂತೆ 33 ವಿರೋಧ ಪಕ್ಷದ ಸದಸ್ಯರನ್ನು ಲೋಕಸಭೆಯ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಸದನದಿಂದ ಅಮಾನತುಗೊಳಿಸಲಾಗಿದೆ.