• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೋಚಿಮುಲ್‌ನಲ್ಲಿ ನೇಮಕಾತಿ ಅಕ್ರಮ, ನೇಮಕಕ್ಕೆ ಮುನ್ನವೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಡಾ.ಕೆ.ಸುಧಾಕರ್‌ ಆಕ್ರೋಶ

Any Mind by Any Mind
December 19, 2023
in ಕರ್ನಾಟಕ
0
ಕೋಚಿಮುಲ್‌ನಲ್ಲಿ ನೇಮಕಾತಿ ಅಕ್ರಮ, ನೇಮಕಕ್ಕೆ ಮುನ್ನವೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಡಾ.ಕೆ.ಸುಧಾಕರ್‌ ಆಕ್ರೋಶ
Share on WhatsAppShare on FacebookShare on Telegram

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟದಲ್ಲಿ (ಕೋಚಿಮುಲ್) ನಡೆಯುತ್ತಿರುವ ನೇಮಕಾತಿಯಲ್ಲಿ ಅಕ್ರಮದ ಆರೋಪ ಕೇಳಿಬಂದಿದ್ದು, ಈ ಕುರಿತು ಮಾಜಿ ಸಚಿವ ಡಾ.ಕೆ.ಸುಧಾಕರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಕಾಂಗ್ರೆಸ್‌ ಸರ್ಕಾರ ಇದರ ವಿರುದ್ಧ ತನಿಖೆಗೆ ಆದೇಶಿಸದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

ADVERTISEMENT

ಈ ಕುರಿತು ಡಾ.ಕೆ.ಸುಧಾಕರ್‌ ಅವರು ಮಾಡಿರುವ ಟ್ವೀಟ್, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟದಲ್ಲಿ (ಕೋಚಿಮುಲ್) ನಡೆಯುತ್ತಿರುವ ನೇಮಕಾತಿಯಲ್ಲಿ ಭಾರಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದ್ದು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಚಿಕ್ಕಬಳ್ಳಾಪುರಕ್ಕೆ ದಕ್ಕಿದ್ದ ಪ್ರತ್ಯೇಕ ಹಾಲು ಒಕ್ಕೂಟವನ್ನು ರದ್ದು ಮಾಡಿದ ಕಾಣದ ಕೈಗಳು ಹಾಗೂ ಪಟ್ಟಭದ್ರ ಹಿತಾಸಕ್ತಿಗಳ ಬಣ್ಣ ಬಯಲಾಗಿದೆ. ನೇಮಕಾತಿ ಪ್ರಕ್ರಿಯೆ ಮುಗಿಯುವ ಮುನ್ನವೇ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅಭ್ಯರ್ಥಿಗಳ ಹೆಸರಿನ ಮುಂದೆ ಅವರನ್ನು ಶಿಫಾರಸ್ಸು ಮಾಡಿದ ವ್ಯಕ್ತಿಗಳ ಹೆಸರನ್ನು ಸಹ ನಮೂದಿಸಿರುವುದನ್ನು ಗಮನಿಸಿದರೆ ನೇಮಕಾತಿ ಎಷ್ಟು ಪಾರದರ್ಶಕವಾಗಿ ನಡೆದಿದೆ ಎಂದು ತಿಳಿಯುತ್ತದೆ.

ಈ ಇಡೀ ನೇಮಕಾತಿ ಪ್ರಕ್ರಿಯೆಯೇ ಒಂದು ದೊಡ್ಡ ಹಗರಣವೆಂದು ಮೇಲ್ನೋಟಕ್ಕೆ ಸ್ಪಷ್ಟವಾಗಿದ್ದು, ಪ್ರಾಮಾಣಿಕ ಹಾಗೂ ಪ್ರತಿಭಾವಂತ ಉದ್ಯೋಗಾಕಾಂಕ್ಷಿಗಳ ಹಿತದೃಷ್ಟಿಯಿಂದ ಈ ನೇಮಕಾತಿಯನ್ನು ಕೂಡಲೇ ರದ್ದುಪಡಿಸಿ, ನಿಷ್ಪಕ್ಷಪಾತ ತನಿಖೆಗೆ ಆದೇಶ ನೀಡಬೇಕೆಂದು ಮಾನ್ಯ ಮುಖ್ಯಮಂತ್ರಿಗಳಲ್ಲಿ ಆಗ್ರಹಿಸುತ್ತೇನೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ ದಕ್ಕಿದ್ದ ಪ್ರತ್ಯೇಕ ಹಾಲು ಒಕ್ಕೂಟವನ್ನು ಕಾಂಗ್ರೆಸ್ ಸರ್ಕಾರ ಬಂದ ಕೂಡಲೇ ರದ್ದು ಮಾಡಿತು. ಜಿಲ್ಲೆ ರಚನೆಯಾದ 16 ವರ್ಷಗಳ ನಂತರ ಚಿಕ್ಕಬಳ್ಳಾಪುರಕ್ಕೆ ಒಂದು ಪ್ರತ್ಯೇಕ ಹಾಲು ಒಕ್ಕೂಟ ದಕ್ಕಿತೆಂದು ಸಂಭ್ರಮಿಸುವ ಮೊದಲೇ ಕಾಂಗ್ರೆಸ್ ಸರ್ಕಾರ ರೈತರ ಕನಸನ್ನು ನುಚ್ಚು ನೂರು ಮಾಡಿತು.

ರಾಜ್ಯದಲ್ಲಿ ಹಾಲು ಉತ್ಪಾದನೆ ಮಾಡುವ ಪ್ರಮುಖ ಜಿಲ್ಲೆಗಳಲ್ಲಿ ಚಿಕ್ಕಬಳ್ಳಾಪುರ ಮುಂಚೂಣಿಯಲ್ಲಿದ್ದು ಹೈನುಗಾರಿಕೆಯಿಂದಲೇ ಲಕ್ಷಾಂತರ ಕುಟುಂಬಗಳು ಬದುಕು ಕಟ್ಟಿಕೊಂಡಿವೆ. ಜಿಲ್ಲೆಯಲ್ಲಿ ಒಟ್ಟು ಸುಮಾರು 1.75 ಲಕ್ಷ ರಾಸುಗಳಿದ್ದು ಜಿಲ್ಲೆಯ ಐದು ತಾಲ್ಲೂಕುಗಳಿಂದ ಪ್ರತಿನಿತ್ಯ ಸುಮಾರು 3.5 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತದೆ. 2 ಲಕ್ಷ ಲೀಟರ್ ಹಾಲು ಉತ್ಪಾದಿಸುವ ಚಾಮರಾಜನಗರ ಹಾಗೂ 50,000 ಲೀಟರ್ ಹಾಲು ಉತ್ಪಾದಿಸುವ ಬೀದರ್, ಕಲಬುರಗಿ ಜಿಲ್ಲೆಗಳಿಗೆ ಕೂಡ ಪ್ರತ್ಯೇಕ ಹಾಲು ಒಕ್ಕೂಟಗಳಿದ್ದರೂ ಚಿಕ್ಕಬಳ್ಳಾಪುರಕ್ಕೆ ಮಾತ್ರ ಪ್ರತ್ಯೇಕ ಒಕ್ಕೂಟ ನೀಡದೆ ಕಾಂಗ್ರೆಸ್ ಪಕ್ಷ ದಶಕಗಳಿಂದ ಜಿಲ್ಲೆಯ ರೈತರಿಗೆ, ಹೈನುಗಾರಿಕೆ ಉದ್ಯಮಕ್ಕೆ ಅನ್ಯಾಯ ಮಾಡುತ್ತಾ ಬಂದಿತ್ತು.

ಆಡಳಿತಾತ್ಮಕ ದೃಷ್ಟಿಯಿಂದ, ಜಿಲ್ಲೆಯ ರೈತರ ಹಿತಾಸಕ್ತಿ ಕಾಪಾಡಲು ಪ್ರತ್ಯೇಕ ಹಾಲು ಒಕ್ಕೂಟ ಅಗತ್ಯವಿದೆ ಎಂದು ಹೋರಾಟ ಮಾಡಿ, ಅಂದಿನ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಹಾಗೂ ಸಂಪುಟದ ಸದಸ್ಯರನ್ನು ಮನವೊಲಿಸಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ತರುವಲ್ಲಿ ಯಶಸ್ವಿಯಾಗಿದ್ದೆ. ಆದರೆ ಕಾಂಗ್ರೆಸ್ ಸರ್ಕಾರ ಬಂದ ತಕ್ಷಣ ಒಂದು ವರ್ಷದಿಂದ ನಡೆಯುತ್ತಿದ್ದ ಪ್ರತ್ಯೇಕ ಒಕ್ಕೂಟವನ್ನು ಧಿಡೀರನೆ ನಿಲ್ಲಿಸಿ, ಬಿಜೆಪಿ ಸರ್ಕಾರದ ಆದೇಶವನ್ನು ಏಕಾಏಕಿ ರದ್ದು ಮಾಡಿ ಜಿಲ್ಲೆಯ ರೈತರ ಹಕ್ಕು ಕಸಿದುಕೊಳ್ಳುವ ಪಾಪದ ಕೆಲಸಕ್ಕೆ ಕೈ ಹಾಕಿತು.

ಈ ನೇಮಕಾತಿ ಹಗರಣ ಗಮನಿಸಿದರೆ, ಪ್ರತ್ಯೇಕ ಒಕ್ಕೂಟವನ್ನು ವಿರೋಧಿಸುವ ಕಾಣದ ಕೈಗಳು ಹಾಗೂ ಪಟ್ಟಭದ್ರ ಹಿತಾಸಕ್ತಿಗಳ ದುರುದ್ದೇಶ ಏನೆಂದು ಅರ್ಥವಾಗುತ್ತಿದೆ. ಈ ನೇಮಕಾತಿ ಪ್ರಕ್ರಿಯೆ ಸಂಪೂರ್ಣ ಅಪಾರದರ್ಶಕವಾಗಿದ್ದು, ಅಕ್ರಮ ನಡೆದಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಆದ್ದರಿಂದ ಈ ನೇಮಕಾತಿಯನ್ನು ಈ ಕೂಡಲೇ ರದ್ದು ಮಾಡಿ ನಿಷ್ಪಕ್ಷಪಾತ ತನಿಖೆಗೆ ಆದೇಶ ಮಾಡಬೇಕು. ಇಲ್ಲವಾದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಬೇಕಾಗುತ್ತದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ತುರ್ತಾಗಿ ಉನ್ನತ ಮಟ್ಟದ ಸಭೆ ನಡೆಸಿ, ಬರ ಪರಿಹಾರ ಒದಗಿಸಲು ಪ್ರಧಾನಿ ಮೋದಿ ಅವರಿಗೆ ಒತ್ತಾಯಿಸಿದ್ದೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಕರ್ನಾಟಕದ ಖರ್ಗೆ ಮೋದಿಗೆ ಎದುರಾಳಿ..? ಕಾಂಗ್ರೆಸ್‌‌ಗೆ ಆಗುವ ಲಾಭ ಏನು..?

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

May 20, 2026
Next Post
ಕರ್ನಾಟಕದ ಖರ್ಗೆ ಮೋದಿಗೆ ಎದುರಾಳಿ..? ಕಾಂಗ್ರೆಸ್‌‌ಗೆ ಆಗುವ ಲಾಭ ಏನು..?

ಕರ್ನಾಟಕದ ಖರ್ಗೆ ಮೋದಿಗೆ ಎದುರಾಳಿ..? ಕಾಂಗ್ರೆಸ್‌‌ಗೆ ಆಗುವ ಲಾಭ ಏನು..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada