• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಿಎಂ ಸಿದ್ದರಾಮಯ್ಯ ಕೆಣಕಿದ ಅಶೋಕ್‌ಗೆ ಬಾಸುಂಡೆ ಬರೆ ಎಳೆದ ಟಗರು!!

ಕೃಷ್ಣ ಮಣಿ by ಕೃಷ್ಣ ಮಣಿ
December 26, 2023
in ಕರ್ನಾಟಕ
0
ಸಿಎಂ ಸಿದ್ದರಾಮಯ್ಯ ಕೆಣಕಿದ ಅಶೋಕ್‌ಗೆ ಬಾಸುಂಡೆ ಬರೆ ಎಳೆದ ಟಗರು!!
Share on WhatsAppShare on FacebookShare on Telegram

ADVERTISEMENT

ಕಾಂಗ್ರೆಸ್ ಸರ್ಕಾರ ಕನ್ನಡಿಗರ ತಲೆ ಮೇಲೆ ಕಲ್ಲು ಹಾಕುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಟೀಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಬಿಜೆಪಿ ವಿರೋಧಿಗಳು ಈ ರೀತಿಯ ಹೇಳಿಕೆಯನ್ನು ಅಶೋಕ್ ಬಾಯಿಯಿಂದ ಹೇಳಿಸಿದಂತೆ ಕಾಣುತ್ತಿದೆ. ಅಶೋಕ್ ಅವರೇ, ಯಾಕೆ ನಮ್ಮ ಕೈಗೆ ಬಡಿಗೆ ಕೊಟ್ಟು ಬಡಿಸಿಕೊಳ್ತೀರಿ..? ಎನ್ನುತ್ತ ಟೀಕಾಪ್ರಹಾರ ನಡೆಸಿರುವ ಸಿದ್ದರಾಮಯ್ಯ, ನರೇಂದ್ರ ಮೋದಿ ಅವರ ನೇತೃತ್ವದಲ್ಲಿ 9 ವರ್ಷಗಳ ಆಡಳಿತದ ಜಾತಕ ಬಿಚ್ಚಿಟ್ಟರೆ ಯಾರು ಕನ್ನಡಿಗರ ತಲೆ ಮೇಲೆ ಕಲ್ಲು ಹಾಕುತ್ತಿದ್ದಾರೆ ಎಂದು ನಿಮಗೂ ಅರಿವಾಗಬಹುದು ಎಂದು ಅಂಕಿ ಅಂಶ ಸಮೇತ ಬಂಡವಾಳ ಬಯಲು ಮಾಡಿದ್ದಾರೆ.

6 ತಿಂಗಳ ಬರಗಾಲ, ಕೇಂದ್ರಕ್ಕೆ ಮೊರೆಯಿಟ್ಟರು ಕಿವಿ ಕೊಟ್ಟಿಲ್ಲ..

ಕರುನಾಡಿಗೆ ಬರಗಾಲ ಬಂದು ಆರು ತಿಂಗಳುಗಳಾಗಿವೆ. ಬರ ಪರಿಹಾರದ ಕೆಲಸಗಳಿಗಾಗಿ 18 ಸಾವಿರದ 177 ಕೋಟಿ ರೂಪಾಯಿ ನೀಡಲು ಮೂರು ತಿಂಗಳುಗಳಿಂದ ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡುತ್ತಲೇ ಬಂದಿದ್ದೇವೆ. ಪತ್ರವನ್ನೂ ಬರೆದಿದ್ದೇವೆ. ಸ್ಬತಃ ನಾನೇ ಖುದ್ದಾಗಿ ಹೋಗಿ ಪ್ರಧಾನಮಂತ್ರಿ ಮತ್ತು ಗೃಹಸಚಿವರನ್ನು ಭೇಟಿಯಾಗಿ ನಮ್ಮ ರಾಜ್ಯದ ರೈತರ ಕಷ್ಟಗಳ ಬಗ್ಗೆ ವಿವರಿಸಿದ್ದೇನೆ. ನಮ್ಮ ಕಂದಾಯ ಮತ್ತು ಕೃಷಿ ಸಚಿವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ. ಉಪಮುಖ್ಯಮಂತ್ರಿಗಳು ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ. ಆದರೂ ಇಲ್ಲಿಯವರೆಗೆ ಒಂದು ಪೈಸೆ ಪರಿಹಾರ ಬಿಡುಗಡೆ ಮಾಡಿಲ್ಲ. ನಮಗೆ ಅನ್ನ ನೀಡುವ ರೈತರು ಕನ್ನಡಿಗರಲ್ಲವೇ..? ಅವರ ತಲೆ ಮೇಲೆ ಕಲ್ಲು ಹಾಕುತ್ತಿರುವವರು ಯಾರು..? ಈಗ ಉತ್ತರ ಕೊಡಿ ಎಂದು ಸವಾಲು ಹಾಕಿದ್ದಾರೆ.

ಕರ್ನಾಟಕ ಹೆಚ್ಚು ತೆರಿಗೆ ಕಟ್ಟಿದ್ರೂ ಅನ್ಯಾಯ ಮಾಡ್ತಿರೋದ್ಯಾಕೆ..?

ಆದಾಯ ತೆರಿಗೆ ಪಾವತಿಯಲ್ಲಿ ಕನ್ನಡಿಗರು ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದ್ದಾರೆ. ಆದರೆ ಕೇಂದ್ರದ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ನ್ಯಾಯಯುತ ಪಾಲನ್ನೂ ಕೊಡದೆ ವಂಚಿಸುತ್ತಿದೆ. ಕೇಂದ್ರ ಸರ್ಕಾರದ ಸಹಭಾಗಿತ್ವದ ಯೋಜನೆಗಳಿಗೆ ನೀಡುತ್ತಿರುವ ಅನುದಾನ ವರ್ಷದಿಂದ ವರ್ಷಕ್ಕೆ ಇಳಿಕೆಯ ಹಾದಿಯಲ್ಲಿದೆ. 2021-22ರ ಅವಧಿಯಲ್ಲಿ 20 ಸಾವಿರ ಕೋಟಿ ರೂಪಾಯಿ ಅನುದಾನ ಕೊಡಲಾಗಿತ್ತು. 2022-23ರಲ್ಲಿ 13 ಸಾವಿರ ಕೋಟಿ ರೂಪಾಯಿಗೆ ಇಳಿಕೆಯಾಗಿದೆ. ಪರಿಸ್ಥಿತಿ ಈಗಿರುವಾಗ ಕನ್ನಡಿಗರ ತಲೆ ಮೇಲೆ ಕಲ್ಲು ಹಾಕುತ್ತಿರುವವರು ಯಾರು ಅಶೋಕ್ ಅವರೇ..? ಎಂದು ಪ್ರಶ್ನೆ ಮಾಡಿದ್ದಾರೆ.

ಹಣಕಾಸು ಆಯೋಗದ ಶಿಫಾರಸು ತಿರಸ್ಕರಿಸಿದ್ದು ಯಾರು..? ಯಾಕೆ..?

ಯುಪಿಎ ಸರ್ಕಾರದ ಅವಧಿಯಲ್ಲಿ 14ನೇ ಹಣಕಾಸು ಆಯೋಗವು ಕರ್ನಾಟಕಕ್ಕೆ ಶೇಕಡ 4.72 ತೆರಿಗೆ ಪಾಲನ್ನು ನಿಗದಿ ಮಾಡಲಾಗಿತ್ತು. ಆದರೆ ಬಿಜೆಪಿ ಸರ್ಕಾರ ಜಾರಿಗೆ ಬಂದ ಬಳಿಕ 15ನೇ ಹಣಕಾಸು ಆಯೋಗವು ಶೇಕಡ 3.64 ಕ್ಕೆ ಇಳಿಕೆ ಮಾಡುವ ಮೂಲಕ ಕನ್ನಡಿಗರನ್ನು ವಂಚಿಸಿದೆ. ಇದರಿಂದ ಕನ್ನಡಿಗರು ಕಳೆದ 4 ವರ್ಷಗಳಲ್ಲಿ ಸುಮಾರು 45 ಸಾವಿರ ಕೋಟಿ ರೂಪಾಯಿ ನಷ್ಟ ಅನುಭವಿಸಿದ್ದಾರೆ. ಕರ್ನಾಟಕಕ್ಕೆ 5,495 ಕೋಟಿ ರೂಪಾಯಿ ವಿಶೇಷ ಅನುದಾನ ನೀಡುವಂತೆ 15ನೇ ಹಣಕಾಸು ಆಯೋಗವು ಶಿಫಾರಸು ಮಾಡಿತ್ತು. ಆದರೆ ನಮ್ಮ ರಾಜ್ಯದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಹಣಕಾಸು ಆಯೋಗದ ಶಿಫಾರಸನ್ನು ತಿರಸ್ಕರಿಸಿ ಕನ್ನಡಿಗರಿಗೆ ದ್ರೋಹ ಎಸಗಿದರು. ಕನ್ನಡಿಗರ ತಲೆ ಮೇಲೆ ಕಲ್ಲು ಹಾಕಿದವರು ನಿಮ್ಮದೇ ಪಕ್ಷಕ್ಕೆ ಸೇರಿರುವ ನಿರ್ಮಲಾ ಸೀತಾರಾಮನ್ ಅವರಾ..? ಅಥವಾ ನಾವಾ..? ಎಂದು ಪ್ರಶ್ನಿಸಿದ್ದಾರೆ.

ರಾಜ್ಯಕ್ಕೆ 1 ರೂಪಾಯಿ ತೆರಿಗೆಯಲ್ಲಿ 15 ಪೈ. ವಾಪಸ್..! ಸಾಕಾ..?

ಕನ್ನಡಿಗರು ಕೇಂದ್ರ ಸರ್ಕಾರಕ್ಕೆ 1 ರೂಪಾಯಿ ತೆರಿಗೆ ಪಾವತಿಸಿದರೆ ಕರ್ನಾಟಕದ ಅಭಿವೃದ್ಧಿಗಾಗಿ ವಾಪಾಸ್‌ ಕೊಡುತ್ತಿರುವುದು ಕೇವಲ 15 ಪೈಸೆ. ಕನ್ನಡಿಗರು ಬೆವರು ಸುರಿಸಿ ದುಡಿದ ದುಡ್ಡನ್ನು ಉತ್ತರ ಭಾರತದ ರಾಜ್ಯಗಳಿಗೆ ಹಂಚಿಕೆ ಮಾಡಲಾಗುತ್ತಿದೆ. ಆರ್ಥಿಕ ವರ್ಷ ಆರಂಭವಾಗಿ 6 ತಿಂಗಳು ಕಳೆದರೂ ಕೇಂದ್ರ ಸರ್ಕಾರದ ಸಹಯೋಗದ 61 ಯೋಜನೆಗಳಿಗೆ ಸಂಬಂಧಿಸಿದಂತೆ 23 ಇಲಾಖೆಗಳಿಗೆ ನಯಾಪೈಸೆ ಅನುದಾನ ಬಿಡುಗಡೆಯಾಗಿಲ್ಲ. ಕನ್ನಡಿಗರ ತಲೆ ಮೇಲೆ ಕಲ್ಲು ಹಾಕುತ್ತಲೇ ಇರುವವರು ಯಾರು ಅಶೋಕ್ ಅವರೇ..? ಕರ್ನಾಟಕಕ್ಕೆ ಏಮ್ಸ್ ಸಂಸ್ಥೆ ಬೇಕೆಂಬ ಕನ್ನಡಿಗರ ಬಹುಕಾಲದ ಕನಸು ಇನ್ನೂ ಕನಸಾಗಿಯೇ ಉಳಿದಿದೆ. ಕನ್ನಡಿಗರು ಶ್ರಮದಿಂದ ಕಟ್ಟಿದ್ದ ಬ್ಯಾಂಕುಗಳನ್ನು ಉತ್ತರ ಭಾರತದ ಬ್ಯಾಂಕುಗಳ ಜೊತೆಗೆ ವಿಲೀನ ಮಾಡಿಕೊಂಡು ಯಾರದೋ ಪಾಲಾದವು. 18 ಸಾವಿರ ಕೋಟಿ ರೂಪಾಯಿಗಳ ಬೆಂಗಳೂರು ಸಬ್‌ ಅರ್ಬನ್‌ ರೈಲು ಯೋಜನೆ ಅನುದಾನ ಸಿಗದೆ ಸೊರಗಿ ಹೋಗಿದೆ. ಇನ್ನು ರಾಜ್ಯದ ಇತರೆ ರೈಲ್ವೇ ಯೋಜನೆಗಳಿಗೂ ಬಿಡಿಗಾಸು ಅನುದಾನ ಸಿಕ್ಕಿಲ್ಲ. ಇದು ಪ್ರಧಾನಿ ನರೇಂದ್ರ ಮೋದಿ ಕನ್ನಡಿಗರ ತಲೆಮೇಲೆ ಸುರಿಯತ್ತಿರುವ ಹೂಮಳೆಯೇ..? ಅಥವಾ ಕಲ್ಲುಗಳ ರಾಶಿಯೇ..? ಎಂದು ಕುಟುಕಿದ್ದಾರೆ

Tags: BJPCongress PartyHIJABHindumuslimR Ashoksiddaramaiahಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಆದಾಯ ಮೀರಿ ಆಸ್ತಿ ಗಳಿಕೆ : ಸಚಿವನಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್!

Next Post

ಏಪ್ರಿಲ್ ವೇಳೆಗೆ 1400 ಹೊಸ ಎಲೆಕ್ಟ್ರಿಕ್ ಬಸ್‌ಗಳು BMTCಗೆ ಸೇರ್ಪಡೆ : ಸಿಎಂ ಸಿದ್ದರಾಮಯ್ಯ

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
ಏಪ್ರಿಲ್ ವೇಳೆಗೆ 1400 ಹೊಸ ಎಲೆಕ್ಟ್ರಿಕ್ ಬಸ್‌ಗಳು BMTCಗೆ ಸೇರ್ಪಡೆ : ಸಿಎಂ ಸಿದ್ದರಾಮಯ್ಯ

ಏಪ್ರಿಲ್ ವೇಳೆಗೆ 1400 ಹೊಸ ಎಲೆಕ್ಟ್ರಿಕ್ ಬಸ್‌ಗಳು BMTCಗೆ ಸೇರ್ಪಡೆ : ಸಿಎಂ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada