• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಿದ್ದರಾಮಯ್ಯ ಸರ್ ಬ್ರಿಲಿಯಂಟ್ ಫಾದರ್, ಮಗನಿಗಾಗಿ ನನ್ನನ್ನು ಮುಗಿಸಲು ಪ್ರಯತ್ನಿಸಿದ್ದಾರೆ : ಪ್ರತಾಪ್ ಸಿಂಹ

Any Mind by Any Mind
December 31, 2023
in ಕರ್ನಾಟಕ
0
ಮಹಿಷ ದಸರಾ ದಿನವೇ ಚಲೋ ಚಾಮುಂಡಿ ಕಾರ್ಯಕ್ರಮ ನಡೆಯಲಿ:ಪ್ರತಾಪ್ ಸಿಂಹ
Share on WhatsAppShare on FacebookShare on Telegram

ADVERTISEMENT

ನನ್ನ ಮುಗಿಸಲು ಎಲ್ಲಾ ಪ್ರಯತ್ನ ಮಾಡುತ್ತಿದ್ದೀರಿ. ಕೊನೆಗೆ ನನ್ನ ಜೀವನ ತೆಗೆಯಬಹುದು ಅಷ್ಟೇ ಎಂದು ಸಂಸದ ಪ್ರತಾಪ್‌ ಸಿಂಹ (Pratap Simha) ಭಾವುಕರಾಗಿ ಮಾತನಾಡಿದ್ದಾರೆ.

ಮರಗಳ್ಳತನ ಪ್ರಕರಣದಲ್ಲಿ ಸಹೋದರ ವಿಕ್ರಂ ಸಿಂಹ ಬಂಧನದ ಬಗ್ಗೆ ಮಾತನಾಡುವಾಗ ಸಂಸದರು ಭಾವುಕರಾಗಿದ್ದಾರೆ. ಅಲ್ಲದೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಸಿದ್ದರಾಮಯ್ಯ ಸರ್ ಬ್ರಿಲಿಯಂಟ್ ಫಾದರ್, ಬ್ರಿಲಿಯಂಟ್ ಪೊಲಿಟಿಷಿಯನ್. ನಿಮ್ಮ ಮಗನನ್ನ ಎಂಪಿ ಮಾಡಿಕೊಳ್ಳುವ ಸಲುವಾಗಿ ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದೀರಿ. ಎಫ್‌ಐಆರ್‌ನಲ್ಲಿ ಹೆಸರಿಲ್ಲದಿದ್ದರೂ ನನ್ನ ತಮ್ಮನನ್ನು ಅರೆಸ್ಟ್ ಮಾಡಿಸಿದ್ದೀರಿ ಎಂದು ಟೀಕಿಸಿದ್ದಾರೆ.

ಮನೆಯಲ್ಲಿ ವಯೋವೃದ್ಧ ತಾಯಿ ಇದ್ದಾಳೆ. ನನ್ನ ತಂಗಿ ಇದ್ದಾಳೆ,‌ ಅವರನ್ನು ಅರೆಸ್ಟ್ ಮಾಡಿಬಿಡಿ. ನನ್ನ ತೇಜೋವಧೆ ಮಾಡಿದ್ದಾಯಿತು. ಈಗ ನನ್ನ ಕುಟುಂಬವನ್ನ ಮುಗಿಸಲು ಪ್ರಯತ್ನ ಮಾಡುತ್ತಿದ್ದೀರಿ ಎಂದು ನೊಂದು ನುಡಿದಿದ್ದಾರೆ.

ಮಾನ್ಯ ಸಿದ್ದರಾಮಯ್ಯ ಅವರಲ್ಲಿ ಸಾಷ್ಟಾಂಗ ನಮಸ್ಕಾರಗಳು. ಅವರನ್ನ ನಾನು ಶ್ಲಾಘನೆ ಮಾಡಬೇಕು ಅಂದುಕೊಂಡಿದ್ದೇನೆ. ತನ್ನ ಮಗನ ರಾಜಕೀಯ ಭವಿಷ್ಯಕ್ಕಾಗಿ, ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸಲು ಯಾರನ್ನ ಬೇಕಾದರೂ ತುಳಿಯುತ್ತಾರೆ. ಇದನ್ನ ಸಿದ್ದರಾಮಯ್ಯ ಅವರಿಂದ ಕಲಿಯಬೇಕು. ಇಂತಹ ತಂದೆ ಎಲ್ಲರಿಗೂ ಸಿಗಲ್ಲ. ನೀವೊಬ್ಬ ಬ್ರಿಲಿಯೆಂಟ್ ಫಾದರ್. ನಿಜಕ್ಕೂ‌ ನಿಮ್ಮನ್ನ ಮೆಚ್ಚಿದ್ದೇನೆ. ನಿಮಗೆ ಸಾಷ್ಟಾಂಗ ನಮಸ್ಕಾರಗಳು ಎಂದು ಟಾಂಗ್‌ ಕೊಟ್ಟಿದ್ದಾರೆ.

ನಿಮ್ಮಂತಹ ತಂದೆ ಜಗತ್ತಿನಲ್ಲಿ ಯಾರಿಗೂ ಸಿಗಲ್ಲ. ಎಲ್ಲಾ ಮಕ್ಕಳಿಗೂ ನಿಮ್ಮಂತಹ ತಂದೆ ಸಿಗಲ್ಲ. ಪ್ರತಾಪ್‌ ಸಿಂಹ ಅಡ್ಡಿ‌ ಆಗಿದ್ದಾನೆ ಅಂತಾ ಮುಗಿಸಲು ಮುಂದಾಗಿದ್ದೀರಿ. ನಿಮ್ಮಂತಹ ತಂದೆ ಪ್ರಪಂಚದಲ್ಲೇ ಎಲ್ಲೂ ಸಿಗಲ್ಲ. ಎರಡನೇ ಕಾರಣ, ನೀವು ಬ್ರಿಲಿಯೆಂಟ್ ಪಾಲಿಟಿಷಿಯನ್ ಎಂದು ತಿರುಗೇಟು ನೀಡಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಯಾರನ್ನ ನೀವು ನಿಷ್ಟಾವಂತ ಎಂದುಕೊಂಡಿದ್ದೀರಿ ಅವರ ನಿಷ್ಟೆ ಯಾರಿಗೆ ಅನ್ನೋದನ್ನೂ ಹೇಳುತ್ತೇನೆ : ವಿಕ್ರಂ ಸಿಂಹ

Next Post

ಮಹಾರಾಷ್ಟ್ರದ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 6 ಕಾರ್ಮಿಕರು ಸಜೀವ ದಹನ

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ಮಹಾರಾಷ್ಟ್ರದ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 6 ಕಾರ್ಮಿಕರು ಸಜೀವ ದಹನ

ಮಹಾರಾಷ್ಟ್ರದ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 6 ಕಾರ್ಮಿಕರು ಸಜೀವ ದಹನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada