ಮೈಸೂರು: ಸಾರಿಗೆ ಬಸ್ ಹಾಗೂ ಜೀಪ್ ನಡುವೆ ಸಂಭವಿಸಿದ ಭೀರಕ ಅಪಘಾತದಲ್ಲಿ ನಾಲ್ವರು ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.
ಹುಣಸೂರು ನಗರದ ಹೊರವಲಯದ ಅಯ್ಯಪ್ಪಸ್ವಾಮಿ ಬೆಟ್ಟದ ಬಳಿ ಮಂಗಳವಾರ ಬೆಳಗ್ಗೆ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಅಂತರಸಂತೆ ಹೊಬಳಿ ಜಿ.ಆರ್. ಕಾಲೋನಿ ನಿವಾಸಿಗಳಾದ ರಾಜೇಶ್, ಲೋಕೇಶ್, ಸೋಮೇಶ್ ಮೃತಪಟ್ಟಿದ್ದಾರೆ. ಜೀಪಿನಲ್ಲಿ ಒಟ್ಟು ಆರು ಮಂದಿ ಪ್ರಯಾಣ ಬೆಳೆಸುತ್ತಿದ್ದರು. ಇವರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮತ್ತೊಬ್ಬರು ಸಾವನ್ನಪ್ಪಿದ್ದಾರೆ. ಇನ್ನೂ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ವಿರಾಜಪೇಟೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರ್ಕಾರಿ ಬ್ಯಾಟರಿ ಚಾಲಿತ ಬಸ್ ಹಾಗೂ ಹುಣಸೂರಿನಿಂದ ಪಿರಿಯಾಪಟ್ಟಣಕ್ಕೆ ತೆರಳುತ್ತಿದ್ದ ಜೀಪ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಸಾವನ್ನಪ್ಪಿದವರು ಕೂಲಿ ಕಾರ್ಮಿಕರು ಎನ್ನುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಹುಣಸೂರು ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಾತಿ ಜನಗಣತಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೀಗೆ ಹೇಳಿದ್ಯಾಕೆ..?
ರಾಜ್ಯದಲ್ಲಿ ಜಾತಿ ಜನಗಣತಿ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ಆಗ್ತಿದೆ. ರಾಜ್ಯ ಸಚಿವ ಸಂಪುಟ ವಿಶೇಷ ಸಭೆಯಲ್ಲೂ ಈ ಬಗ್ಗೆ ಚರ್ಚೆ ಆಗಿದೆ. ಆದರೆ ಸಂಪುಟದಲ್ಲಿ ವಿರೋಧ...
Read moreDetails