ಬೆಂಗಳೂರು: ವಿಶ್ವವಿದ್ಯಾಲಯಗಳ ಆದಾಯ ಕೊರತೆ ಹಿನ್ನೆಲೆಯಲ್ಲಿ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ 2023-24 ಸಾಲಿನಿಂದ ಕನಿಷ್ಠ ಶೇ.10ರಷ್ಟು ಶುಲ್ಕ ಏರಿಕೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ.
ಪ್ರಸಕ್ತ ವರ್ಷದಲ್ಲಿ ಶೇ.10ರಷ್ಟು ಶುಲ್ಕ ಏರಿಕೆ ಮಾಡಲು ಉನ್ನತ ಶಿಕ್ಷಣ ಇಲಾಖೆ ಅವಕಾಶ ನೀಡಿದೆ.
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪದವಿ ಕೋರ್ಸ್ಗಳ ಶುಲ್ಕ ಶೇ.10 ಏರಿಕೆ ಮಾಡಲು ಶಿಕ್ಷಣ ಸಂಸ್ಥೆಗಳಿಗೆ ಉನ್ನತ ಶಿಕ್ಷಣ ಇಲಾಖೆ ಅವಕಾಶ ಕೊಟ್ಟಿದ್ದು, ಬಿಎ, ಬಿಕಾಂ, ಬಿಎಸ್ಸಿ ಸೇರಿದಂತೆ ಅನೇಕ ಪದವಿ ಪ್ರವೇಶಕ್ಕೆ ಕಳೆದ ವರ್ಷ ಇದ್ದ ಶುಲ್ಕಕ್ಕೆ ಶೇ.10ರಷ್ಟು ಏರಿಕೆಗೆ ಅವಕಾಶ ನೀಡಿದೆ. ಇದು ಸಹಜವಾಗಿಯೇ ಬಡ ವಿದ್ಯಾರ್ಥಿಗಳ ಮೇಲೆ ಆರ್ಥಿಕ ಹೊರೆ ಹೆಚ್ಚಿಸಿದೆ.
ಈಗಾಗಲೇ ಪರಿಷ್ಕೃತ ಶುಲ್ಕ ಪಟ್ಟಿಯನ್ನು ಯೂನಿವರ್ಸಿಟಿಗಳಿಗೆ ನೀಡಿ ಈ ಬಗ್ಗೆ ಸಿದ್ಧತೆಗೆ ಸರ್ಕಾರ ಸೂಚಿಸಿದೆ. ಮುಂದಿನ ವರ್ಷ ಪದವಿ ವಿದ್ಯಾರ್ಥಿಗಳಿಗೆ ಮತ್ತಷ್ಟು ಶುಲ್ಕ ಏರಿಕೆಯ ಬರೆ ಬೀಳಲಿದೆ.