2024 ರ ಲೋಕಸಭಾ ಚುನಾವಣೆಯ ಹೊಸ್ತಿಲಿನಲ್ಲಿ ಈಗಾಗಲೇ ಸಕಲ ಸಿದ್ಧತೆಗಳು ಬಿಜೆಪಿಯಲ್ಲಿ ಆರಂಭವಾಗಿದ್ದು, ಇತ್ತ ತಮ್ಮ ಪುತ್ರ ಕೆ.ಇ.ಕಾಂತೇಶ್‌ಗಾಗಿ ಮಾಜಿ ಡಿಸಿಎಂ ಹಾಗೂ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಲಾಬಿ ಆರಂಭಿಸಿದ್ದಾರೆ.

ಹೈಕಮಾಂಡ್ ಮಟ್ಟದಲ್ಲಿಯೇ ಲೋಕಸಭಾ ಚುನಾವಣೆಯ ಟಿಕೆಟ್‌ಗಾಗಿ ಲಾಬಿ ಆರಂಭಿಸಿರುವ ಕೆ.ಎಸ್.ಈಶ್ವರಪ್ಪ, ಹಾವೇರಿ ಕ್ಷೇತ್ರದಿಂದ ತಮ್ಮ ಪುತ್ರ ಕೆ.ಇ. ಕಾಂತೇಶ್‌ಗೆ ಟಿಕೆಟ್ ನೀಡುವಂತೆ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
