• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಚಿವ ಎಂ.ಬಿ.ಪಾಟೀಲ ಕೊಟ್ಟ ಸುಳಿವು; ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆ ಘಟಕ ಪತ್ತೆ; ₹2 ಕೋಟಿ ಮೌಲ್ಯದ ಸಾಮಗ್ರಿ ವಶ

Any Mind by Any Mind
January 13, 2024
in ಕರ್ನಾಟಕ, ವಾಣಿಜ್ಯ
0
ಸಚಿವ ಎಂ.ಬಿ.ಪಾಟೀಲ ಕೊಟ್ಟ ಸುಳಿವು; ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆ ಘಟಕ ಪತ್ತೆ; ₹2 ಕೋಟಿ ಮೌಲ್ಯದ ಸಾಮಗ್ರಿ ವಶ
Share on WhatsAppShare on FacebookShare on Telegram

ಬೆಂಗಳೂರು: ಕರ್ನಾಟಕ ಸರ್ಕಾರಿ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸಾಬೂನನ್ನು ನಕಲಿಯಾಗಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಹೈದರಾಬಾದಿನಲ್ಲಿ ಭೇದಿಸಲಾಗಿದೆ. ಈ ಕಾರ್ಯಾಚರಣೆ ವೇಳೆ ನಕಲಿ ಉತ್ಪನ್ನ, ಅದರ ಪ್ಯಾಕಿಂಗ್ ಗೆ ಬಳಸುತ್ತಿದ್ದ ಕಾರ್ಟನ್ ಬಾಕ್ಸ್ ಗಳು ಸೇರಿದಂತೆ ಸುಮಾರು ರೂ 2 ಕೋಟಿ ಬೆಲೆಯ ಮಾಲು ಪತ್ತೆಯಾಗಿದೆ.

ADVERTISEMENT

ನಕಲಿ ತಯಾರಿಕೆ ಆರೋಪದ ಮೇಲೆ ಹೈದರಾಬಾದಿನ ರಾಕೇಶ್ ಜೈನ್ ಮತ್ತು ಮಹಾವೀರ್ ಜೈನ್ ಎಂಬುವವರನ್ನು ಬಂಧಿಸಲಾಗಿದೆ. ಮಾಲಕಪೇಟೆ ಪೊಲೀಸರಿಗೆ ದೂರು ನೀಡಿದ್ದು ತನಿಖೆ ನಡೆದಿದೆ. ನಕಲಿ ಮೈಸೂರ್ ಸ್ಯಾಂಡಲ್ ಸಾಬೂನು ಹೈದರಾಬಾದ್ ಮಾರುಕಟ್ಟೆಗೆ ಪೂರೈಕೆಯಾಗುತ್ತಿರುವ ಬಗ್ಗೆ ಕೆ ಎಸ್ ಡಿ ಎಲ್ ಅಧ್ಯಕ್ಷರೂ ಆದ ಸಚಿವ ಎಂ.ಬಿ ಪಾಟೀಲ ಅವರಿಗೆ‌ ಅನಾಮಧೇಯ ಕರೆ ಬಂದಿತ್ತು. ಬಳಿಕೆ ಸಚಿವರು ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಶಾಂತ್ ಅವರಿಗೆ ನಿಗಾ ವಹಿಸಲು ಸೂಚಿಸಿದ್ದರು. ಅದರಂತೆ, ಸಿಕಂದರಾಬಾದಿನಲ್ಲಿರುವ ಸಂಸ್ಥೆಯ ಅಧಿಕೃತ ಮಾರಾಟ ಕಚೇರಿಯ ಸಿಬ್ಬಂದಿ ತಮಗೆ ಸಿಕ್ಕ ಸುಳಿವಿನ ಜಾಡು ಹಿಡಿದು ಕಾರ್ಯಪ್ರವೃತ್ತರಾಗಿದ್ದರು.

ಹೈದರಾಬಾದಿನ ಕೆಲವು ಪ್ರದೇಶಗಳಲ್ಲಿ ನಕಲಿ ಸಾಬೂನು ಮಾರಾಟವಾಗುತ್ತಿರುವುದು ಕಂಡುಬಂದಿತ್ತು. ಆದರೆ, ಅದನ್ನು ಯಾರು ಪೂರೈಸುತ್ತಿದ್ದಾರೆ ಎಂಬ ಬಗ್ಗೆ ಸರಿಯಾದ ಮಾಹಿತಿ ಸಿಕ್ಕಿರಲಿಲ್ಲ. ಆಗ ಕೆ ಎಸ್ ಡಿ ಎಲ್ ಸಿಬ್ಬಂದಿ ಸ್ವತಃ ಒಂದು ಲಕ್ಷ ರೂಪಾಯಿ ಬೆಲೆಯ ಉತ್ಪನ್ನ ಖರೀದಿಸಿ, ಅದರ ಮೂಲ ಪತ್ತೆಗೆ ಕಾರ್ಯಪವೃತ್ತರಾದರು. ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಬೇಡಿಕೆ ಇದೆ ಎಂಬ ಕಾರಣ ಕೊಟ್ಟು 25 ಲಕ್ಷ ರೂಪಾಯಿ ಬೆಲೆಯ ಸೋಪು ಖರೀದಿಗೆ ಆರ್ಡರ್ ಕೊಟ್ಟಿದ್ದರು. ಅದನ್ನು ಸ್ವತಃ ತಾವೇ ವಾಹನದಲ್ಲಿ ಸಾಗಿಸುವ ನೆಪದಲ್ಲಿ ಉತ್ಪಾದನೆ ಮಾಡುತ್ತಿದ್ದ ಸ್ಥಳಕ್ಕೆ ತೆರಳಿದ್ದರು. ಹೀಗೆ ಕಾರ್ಯಾಚರಣೆ ನಡೆಸಿದಾಗ ನಕಲಿ ಉತ್ಪಾದನಾ ಘಟಕ ಪತ್ತೆಯಾಯಿತು ಎಂದು ಕೆ ಎಸ್ ಡಿ ಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ವಿವರಿಸಿದ್ದಾರೆ.

ತಲಾ 150 ಗ್ರಾಂ ತೂಕದ 3 ಸಾಬೂನುಗಳಿರುವ 20 ಕಾರ್ಟನ್ ಬಾಕ್ಸ್ ಗಳು (ಪ್ರತಿಯೊಂದು ಬಾಕ್ಸ್ ನಲ್ಲಿ 90ರಂತೆ ಒಟ್ಟು 1800 ಪೀಸ್ ಗಳು), ತಲಾ 75 ಗ್ರಾಂ ನ 47 ಕಾರ್ಟನ್ ಬಾಕ್ಸ್ ಗಳು (9400 ಪೀಸ್ ಗಳು), 150 ಗ್ರಾಂ ಸಾಬೂನು ಪ್ಯಾಕ್ ಮಾಡುವ 400 ಖಾಲಿ ಕಾರ್ಟನ್ ಬಾಕ್ಸ್ ಗಳು ಮತ್ತು 75 ಗ್ರಾಂ ಸಾಬೂನು ಪ್ಯಾಕ್ ಮಾಡುವ 400 ಕಾರ್ಟನ್ ಬಾಕ್ಸ್ ಗಳು ನಕಲಿ ಘಟಕದಲ್ಲಿ ಪತ್ತೆಯಾಗಿವೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ. ಕೆ ಎಸ್ ಡಿ ಎಲ್ ಉತ್ಪನ್ನಗಳ ಮಾರುಕಟ್ಟೆಯನ್ನು ದೇಶ ಹಾಗೂ ವಿದೇಶಗಳಿಗೆ ವಿಸ್ತರಿಸಲು ಸ್ವತಃ ಆಸಕ್ತಿ ವಹಿಸಿ ಕ್ರಮ ತೆಗೆದುಕೊಂಡಿರುವ ಸಚಿವ ಪಾಟೀಲರು, ತಪ್ಪಿತಸ್ಥರಿಗೆ ಶಿಕ್ಷೆಯಾಗುವುದನ್ನು ಖಾತರಿಗೊಳಿಸಲು ಗಮನ ವಹಿಸಲಾಗುವುದು ಎಂದಿದ್ದಾರೆ.

Previous Post

ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಮಹಾದ್ರೋಹ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪ

Next Post

ಕೇಂದ್ರ ಸಚಿವರಾಗುತ್ತಾರಾ ಹೆಚ್. ಡಿ.ಕುಮಾರಸ್ವಾಮಿ?

Related Posts

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು
Top Story

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

by ಪ್ರತಿಧ್ವನಿ
April 20, 2026
0

ವಿಶೇಷ ಲೇಖನ : ನಾ ದಿವಾಕರ ( ಸಂವಾದ ಮಾಸಪತ್ರಿಕೆಯ ಏಪ್ರಿಲ್ 2026 ರ ಅಂಬೇಡ್ಕರ್ ವಿಶೇಷ ಸಂಚಿಕೆಗೆ ಬರೆದ ಲೇಖನ ) ಭಾಗ 2 ಹಕ್ಕು...

Read moreDetails
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
Next Post
ಕೇಂದ್ರ ಸಚಿವರಾಗುತ್ತಾರಾ ಹೆಚ್. ಡಿ.ಕುಮಾರಸ್ವಾಮಿ?

ಕೇಂದ್ರ ಸಚಿವರಾಗುತ್ತಾರಾ ಹೆಚ್. ಡಿ.ಕುಮಾರಸ್ವಾಮಿ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada