ಸಿಎಂ ಸಿದ್ದರಾಮಯ್ಯ ವಿರುದ್ದ ಏಕವಚನ ಪದ ಬಳಕೆ ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡು ಡಿಕೆಶಿಗೆ ಟಾಂಗ್ ಕೊಟ್ಟಿದ್ದಾರೆ
ಈ ಕುರಿತು ಮಾತನಾಡಿರುವ ಸಂಸದ ಅನಂತಕುಮಾರ್ ಹೆಗಡೆ, ಇದು ನನ್ನ ವೈಯಕ್ತಿಕ ಹೇಳಿಕೆ. ಪಕ್ಷದ ಹೇಳಿಕೆ ಅಲ್ಲ . ಬಿ.ವೈ ವಿಜಯೇಂದ್ರ ಹೇಳಿರುವ ಮಾತು ಸರಿ ಇದೆ ಎಂದರು.ಅನಂತ್ ಕುಮಾರ್ ಹೆಗಡೆ ಆರೋಗ್ಯದ ಬಗ್ಗೆ ಗಮನ ಕೊಡಲಿ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನನ್ನ ಆರೋಗ್ಯ ತುಂಬಾ ಚೆನ್ನಾಗಿದೆ ಅದರಲ್ಲಿ ಯಾವುದೇ ಸಂಶಯ ಬೇಡ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ ನನ್ನ ಟಿಕೆಟ್ ಬಗ್ಗೆ ಬೇರೆಯವರಿಗೆ ಯಾಕೆ ಚಿಂತೆ ಎಂದು ಡಿಕೆಶಿಗೆ ಟಾಂಗ್ ನೀಡಿದರು
ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ನಾಯಕರು ಒಬ್ಬರ ಮೇಲೆ ಒಬ್ಬರು ವಾಗ್ದಾಳಿ ನಡೆಸುತ್ತಿದ್ದು ಏಕವಚನದಲ್ಲಿ ಸಿಎಂ ಸಿದ್ದರಾಮಯ್ಯ ಮೇಲೆ ಅನಂತ್ ಕುಮಾರ್ ಹೆಗ್ಡೆ ನೀಡಿರುವ ಹೇಳಿಕೆ ಸದ್ಯ ರಾಜಕೀಯ ವಲಯದಲ್ಲಿ ಕಾಂಗ್ರೆಸ್ ಗೆ ಹೊಸ ಅಸ್ತ್ರ ನೀಡಿದಂತಾಗಿದೆ







