• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿ.ಕೆ. ಹರಿಪ್ರಸಾದ್ ಹೇಳಿದ್ದರ ಬಗ್ಗೆ ಪೋಲಿಸರ ಬಳಿ ಮಾಹಿತಿ ನೀಡಬೇಕು: ಮಾಜಿ ಸಚಿವ ಸಿ.ಟಿ. ರವಿ

Any Mind by Any Mind
January 20, 2024
in ಕರ್ನಾಟಕ, ರಾಜಕೀಯ
0
ಬಿ.ಕೆ. ಹರಿಪ್ರಸಾದ್ ಹೇಳಿದ್ದರ ಬಗ್ಗೆ ಪೋಲಿಸರ ಬಳಿ ಮಾಹಿತಿ ನೀಡಬೇಕು: ಮಾಜಿ ಸಚಿವ ಸಿ.ಟಿ. ರವಿ
Share on WhatsAppShare on FacebookShare on Telegram

ಬೆಂಗಳೂರು: ಗೋದ್ರಾ ರೀತಿಯ ಘಟನೆಯ ಬಗ್ಗೆ ಬಿ.ಕೆ. ಹರಿಪ್ರಸಾದ್ ಹೇಳಿದ್ದರ ಬಗ್ಗೆ ಪೋಲಿಸರ ಬಳಿ ಮಾಹಿತಿ ನೀಡಬೇಕು ಎಂದು ಮಾಜಿ ಸಚಿವ ಸಿ.ಟಿ. ರವಿ ಒತ್ತಾಯಿಸಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜವಾಬ್ದಾರಿಯುತ ಸ್ಥಾನದಲ್ಲಿರುವವರು ಹೇಳಿಕೆಯ ಬಗ್ಗೆ ಮಾಹಿತಿ ನೀಡಬೇಕು. ನಾಳೆ ಈ ರೀತಿಯ ಘಟನೆ ನಡೆದರೆ ಆಗ ನಾನು ಮುಂಚೆಯೇ ಹೇಳಿಕೆ ನೀಡಿದ್ದೆ, ನನ್ನ ಬಳಿ ಮಾಹಿತಿ ಕೇಳಲಿಲ್ಲ ಎಂದು ಹೇಳಬಹುದು. ಹೀಗಾಗಿ ಅವರು ಮಾಹಿತಿ ನೀಡಬೇಕು. ರಾಜ್ಯಪಾಲರು ಹರಿಪ್ರಸಾದ್ ಗೆ ಹೇಳಿ ಹೇಳಿಕೆ ಕೊಡಿಸಿದ್ರಾ? ಅಥವಾ ಎಐಸಿಸಿ ಪ್ರಚೋದನೇನಾ? ಅವರು ಎಐಸಿಸಿ ಜನರಲ್ ಸೆಕ್ರೆಟ್ರಿ ಆಗಿದವರು, ಪರಿಷತ್ ವಿಪಕ್ಷ ನಾಯಕರಾಗಿದ್ರು, ಅವರು ಜವಾಬ್ದಾರಿಯುತ ಸ್ಥಾನದಲ್ಲಿದ್ದವರು, ಅವರು ಹಾದಿಬೀದಿಯಲ್ಲಿ ಹೋಗುವವರಲ್ಲ. ಅಂಥವರು ಹೇಳಿಕೆ ನೀಡಿದ್ದಾರೆ, ಅವರು ಯಾರ ಸಂಪರ್ಕದಿಂದ ಹೇಳಿಕೆ ನೀಡಿದ್ದಾರೆ. ಜೈಷೇ ಮಹಮದ್ ಸಂಪರ್ಕನಾ..? ತಾಲಿಬಾನ್ ಸಂಪರ್ಕನಾ.? ದಾವೂದ್ ಇಬ್ರಾಹಿಂ ಸಂಪರ್ಕನಾ..? ಯಾರ ಸಂಪರ್ಕದಿಂದ ಹೇಳಿದ್ದರು. ರಾಜ್ಯಪಾಲರು ಸಾವಿಂಧಾನಿಕ ಹುದ್ದೆ, ಅದನ್ನ ಮೀರಿ ಅವರು ಕೆಲಸ ಮಾಡೊಲ್ಲ, ನಾಳೆ ಈ ರೀತಿಯ ಘಟನೆ ನಡೆದ್ರೆ ಯಾರು ಕಾರಣ? ಎಂದು ರಾಜ್ಯಪಾಲರ ಮೂಲಕ ರಾಜ್ಯದಲ್ಲಿ ಆಳ್ವಿಕೆ ಮಾಡಲು ಕೇಂದ್ರ ಸರ್ಕಾರದ ಒತ್ತಡ ಎಂಬ ಪ್ರಿಯಾಂಕ ಖರ್ಗೆ ಹೇಳಿಕೆಗೆ ತಿರುಗೇಟು ನೀಡಿದರು.

ಗುಜರಾತ್ ಕಾಂಗ್ರೆಸ್‌ ಶಾಸಕರು ಚಾವ್ಡಾ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿರುವ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್‌ನ ನಿಲುವನ್ನ ವಿರೋಧಿ ಅವರು ರಾಜೀನಾಮೆ ನೀಡಿದ್ದಾರೆ ಅದನ್ನ ಸ್ವಾಗತಿಸುತ್ತೇನೆ. ರಾವಣನ ಸಹೋದರ ವಿಭಿಷಣ ರಾವಣನ ದುರ್ನಡತೆ ವಿರೋಧಿಸಿ ರಾಮನ ಪರ ಬಂದ. ಅದೇ ರೀತಿ ಕಾಂಗ್ರೆಸ್‌ನಲ್ಲಿ ರಾಮನ ಮಂದಿರ ವಿಚಾರವಾಗಿ ಬೇರೆ ಬೇರೆ ಹೇಳಿಕೆಯನ್ನ ನೀಡಿದ್ದಾರೆ. ಹೀಗಾಗಿ ವಿಭಿಷಣ ಮನಸ್ಥಿತಿಯ ಕಾಂಗ್ರೆಸ್‌ನವರು ಪಕ್ಷ ತೊರೆದು ಬರುವುದು ಒಳಿತು ಎಂದರು.

ಜನವರಿ 22ರಂದು ಸರ್ಕಾರಿ ರಜೆ ವಿಷಯವಾಗಿ ಪ್ರತಿಕ್ರಿಯಿಸಿದ ಅವರು, ಇಷ್ಟು ದಿನ ಮೀನಾಮೇಷ ಎಣಿಸಿದ್ದೆ ತಪ್ಪು, ರಜೆ ಕೊಡಬೇಕೆಂದು ಹೇಳಿಸಿಕೊಂಡು ಮಾಡಬೇಕಾ? ಇವರು ಸ್ವಯಂ ಪ್ರೇರಿತವಾಗಿ ಕಾಂಗ್ರೆಸ್‌ ಸರ್ಕಾರ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.

ಪಿಎಸ್‌ಐ ಪ್ರಶ್ನೆ ಪತ್ರಿಕೆ ಲೀಕ್ ಆರೋಪದ ವಿಚಾರವಾಗಿ ಮಾತನಾಡಿದ ಅವರು, ಹಿಂದೆ ಆರೋಪ ಮಾಡ್ತಿದ್ರು, ಆರೋಪಿಗಳನ್ನ ಬಂಧಿಸಿದ್ರು, ಈಗ ಪದೇ ಪದೇ ಪ್ರಶ್ನೆ ಪತ್ರಿಕೆ ಬಹಿರಂಗ ಆಗ್ತಿದೆ ಎನ್ನುವುದು, ಗಂಭೀರ ವಿಚಾರ. ಇದರ ಕಿಂಗ್ ಪಿನ್ ಯಾರು. ಎಂದು ಪತ್ತೆ ಆಗಬೇಕು. ಹೊರಗಡೆ ಇದ್ದಾರೊ, ಕ್ಯಾಬಿನೆಟ್ ಒಳಗಡೆಯೇ ಇದ್ದಾರೋ? ಅವರಿಗೆ ಯಾರು ರಕ್ಷಣೆ ಕೊಡ್ತಿದ್ದಾರೆ. ಇದರ ಹಿಂದೆ ಯಾರ ಲಾಬಿ ಇದೆ ಇದನ್ನ ಬುಡ ಸಮೇತ ಕಿತ್ತು ಹಾಕಬೇಕು. ಇಲ್ಲದಿದ್ದರೆ ರಾಜಾಶ್ರಯದ ಕೃಪಾ ಕಟಾಕ್ಷದ ಮೂಲಕ ನಡೆಯುತ್ತಿದ್ಯಾ ಎಂಬ ಅನುಮಾನ ಮೂಡುತ್ತೆ ಎಂದರು.

Previous Post

ಅನಂತ್ ಕುಮಾರ್ ಹೆಗ್ಡೆಗೆ ಮಾನ ಮರ್ಯಾದೆ ಇಲ್ಲ ಆತನೊಬ್ಬ ಹುಚ್ಚ : ಸಚಿವ ಮಧು ಬಂಗಾರಪ್ಪ

Next Post

ಪ್ರಜಾಪ್ರಭುತ್ವವಕ್ಕೆ ದೇಶ ವಿರೋಧಿ ಪಕ್ಷ ಬೇಡ ಕಾಂಗ್ರೆಸ್ ವಿರುದ್ದ ಅನಂತ್ ಕುಮಾರ್ ಹೆಗಡೆ ಕಿಡಿ

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಅನಂತ್ ಕುಮಾರ್ ಹೆಗ್ಡೆಗೆ  ಮಾನ ಮರ್ಯಾದೆ ಇಲ್ಲ ಆತನೊಬ್ಬ ಹುಚ್ಚ : ಸಚಿವ ಮಧು ಬಂಗಾರಪ್ಪ

ಪ್ರಜಾಪ್ರಭುತ್ವವಕ್ಕೆ ದೇಶ ವಿರೋಧಿ ಪಕ್ಷ ಬೇಡ ಕಾಂಗ್ರೆಸ್ ವಿರುದ್ದ ಅನಂತ್ ಕುಮಾರ್ ಹೆಗಡೆ ಕಿಡಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada