ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಸ್ಯಾಂಡಲ್ವುಡ್ ಯುವರಾಜ ನಿಖಿಲ್ ಕುಮಾರಸ್ವಾಮಿ ಜ.22ರಂದು ತಮ್ಮ ಹುಟ್ಟುಹಬ್ಬದಂದು ಅಭಿಮಾನಿಗಳ ಕೈಗೆ ಸಿಗುತ್ತಿಲ್ಲ.
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ನಟ ನಿಖಿಲ್ ಕುಮಾರಸ್ವಾಮಿ, ʻಅಯೋಧ್ಯೆಯ ಶ್ರೀರಾಮ ಮಂದಿಯ ಉದ್ಘಾಟನೆಯಲ್ಲಿ ನಾನು ಭಾಗಿಯಾಗಬೇಕಿದೆ. ನೀವೆಲ್ಲರೂ ನೀವಿದ್ದ ಕಡೆಯಿಂದಲೇ ನನ್ನ ಹುಟ್ಟುಹಬ್ಬಕ್ಕೆ ಹರಸಿದರೆ ಅದೇ ನನಗೆ ಸಂತೋಷʼ.

ʻನನ್ನ ಹುಟ್ಟುಹಬ್ಬಕ್ಕಾಗಿ ಯಾವುದೇ ರೀತಿ ದುಂದು ವೆಚ್ಚ ಬೇಡ. ಅದನ್ನೇ ಒಳ್ಳೆಯ ಕಾರ್ಯಕ್ಕೆ ಬಳಸಿ. ಮತ್ತೊಮ್ಮೆ ನಿಮ್ಮ ಬಳಿ ಕ್ಷಮೆ ಕೇಳುತ್ತಾ ಆದಷ್ಟು ಬೇಗ ಭೇಟಿ ಮಾಡೋಣ ಎಂದು ತಿಳಿಸುತ್ತೇನೆʼ ಎಂದು ತಿಳಿಸುವ ಮೂಲಕ ತಮ್ಮ ನೆಚ್ಚಿನ ನಟನ ಜನ್ಮದಿನಕ್ಕೆ ಶುಭಕೋರಲು ಕಾದಿರುವ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ.