ಕೊಲ್ಕತ್ತಾ: ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಟಿಎಂಸಿ ನಿರ್ಧರಿಸಿದೆ. ಈ ಮೂಲಕ ಇಂಡಿಯಾ ಮೈತ್ರಿಕೂಟದಲ್ಲಿ ಮಹಾ ಬಿರುಕು ಉಂಟಾಗಿದ್ದು, ಭಿನ್ನಮತ ಬೀದಿಗೆ ಬಿದ್ದಿದೆ. ಇದರಿಂದಾಗಿ ಇಂಡಿಯಾ ಮಿತ್ರಕೂಟಕ್ಕೆ ಭಾರೀ ದೊಡ್ದ ಹಿನ್ನಡೆಯಾಗಿದ್ದು, ಇಂಡಿಯಾ ಮಿತ್ರಕೂಟಕ್ಕೆ ಬೆಂಬಲ ನೀಡಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದೀಗ ಲೋಕಸಭೆ ಚುನಾವಣೆಯಲ್ಲಿ ತಮ್ಮ ರಾಜ್ಯದಲ್ಲಿ ಟಿಎಂಸಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆಗೆ ಟಿಎಂಸಿ ನಿರ್ಧಾರ ಮಾಡಿದೆ. ಪ.ಬಂಗಾಳದಲ್ಲಿ ಯಾವುದೇ ಹೊಂದಾಣಿಕೆ ಇಲ್ಲ. ಟಿಎಂಸಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳಲ್ಲ. ಟಿಎಂಸಿ ಯಾರ ಜತೆಗೂ ಕೈಜೋಡಿಸಲ್ಲ ಎಂದಿದ್ದಾರೆ. ಕಾಂಗ್ರೆಸ್ ಪಕ್ಷ ಬೇಕಿದ್ದರೇ ಬಿಜೆಪಿ ವಿರುದ್ದ 300 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿ. ನಮ್ಮೊಂದಿಗೆ ಅವರ ಯಾವುದೇ ಮೈತ್ರಿ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.










