• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಫೆಬ್ರುವರಿ 8ರಂದು ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮ

Any Mind by Any Mind
January 24, 2024
in ಕರ್ನಾಟಕ
0
ಫೆಬ್ರುವರಿ 8ರಂದು ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮ
Share on WhatsAppShare on FacebookShare on Telegram

ADVERTISEMENT

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರುವರಿ 8 ರಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಸೂಚಿಸಲಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ ಅವರು ಇಂದು ಪೂರ್ವಸಿದ್ಧತಾ ಸಭೆ ನಡೆಸಿ, ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದರು ಅಗತ್ಯ ಸಲಹೆ‌ ಮತ್ತು‌ ಸೂಚನೆಗಳನ್ನು ನೀಡಿದ್ದಾರೆ.‌

ಈ ಸಂದರ್ಭದಲ್ಲಿ ಮಾತನಾಡಿದ ಅವರು ಜನಸ್ಪಂದನ ಕಾರ್ಯಕ್ರಮವನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸಬೇಕು. ಮುಖ್ಯಮಂತ್ರಿಯವರು ನಡೆಸುತ್ತಿರುವ ಎರಡನೇ ಜನಸ್ಪಂದನ ಕಾರ್ಯಕ್ರಮ ಇದಾಗಿದ್ದು, ಎಲ್ಲ ಇಲಾಖೆಗಳ ಕಾರ್ಯದರ್ಶಿಗಳು, ಇಲಾಖಾ ಮುಖ್ಯಸ್ಥರು ಹಾಜರಿದ್ದು, ವಿಶೇಷ ಆಸಕ್ತಿ ವಹಿಸಿ ಕುಂದು ಕೊರತೆ ನಿವಾರಣೆಗೆ ಕ್ರಮ ವಹಿಸಬೇಕೆಂದು ತಿಳಿಸಿದರು.

ಜನಸ್ಪಂದನ ಕಾರ್ಯಕ್ರಮಕ್ಕೆ ಆಗಮಿಸುವ ವಿಶೇಷಚೇತನರು, ಹಿರಿಯನಾಗರಿಕರಿಗೆ ವಿಶೇಷ ವ್ಯವಸ್ಥೆಗಳನ್ನು ಮಾಡುವಂತೆ ಸೂಚಿಸಿದರು.

ಸ್ವಚ್ಛತೆ, ಕುಡಿಯುವ ನೀರು, ಲಘು ಉಪಾಹಾರ, ಊಟದ ವ್ಯವಸ್ಥೆಗಳನ್ನು ಮಾಡುವ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕಳೆದ ಬಾರಿಯ ಜನಸ್ಪಂದನದಲ್ಲಿ ಸ್ವೀಕರಿಸಿದ ಅರ್ಜಿಗಳ ತ್ವರಿತ ವಿಲೇವಾರಿ ಮಾಡುವ ಬಗ್ಗೆ ಎಲ್ಲ ಇಲಾಖೆಗಳಿಗೆ ಪತ್ರ ಬರೆಯುವುದಾಗಿ ತಿಳಿಸಿದ ಅವರು ಕೆಡಿಪಿ ಸಭೆಯಲ್ಲಿಯೂ ಜನಸ್ಪಂದನ ಅರ್ಜಿ ವಿಲೇವಾರಿ ಪ್ರಗತಿ ಪರಿಶೀಲನೆ ನಡೆಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಜನಸ್ಪಂದನಕ್ಕೆ ಆಗಮಿಸುವ ಜನರ ಅನುಕೂಲಕ್ಕಾಗಿ ಮೆಜೆಸ್ಟಿಕ್‌ ಬಸ್‌ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣಕ್ಕೆ ಉಚಿತ ಬಸ್‌ ವ್ಯವಸ್ಥೆ ಮಾಡಲು ಸೂಚಿಸಿದರು.

ವಿವಿಧ ಇಲಾಖೆಗಳ ಅರ್ಜಿ ಸ್ವೀಕಾರಕ್ಕೆ ಪ್ರತ್ಯೇಕ ಕೌಂಟರುಗಳನ್ನು ಸ್ಥಾಪಿಸಿ, ಅದಕ್ಕೆ ಅಗತ್ಯವಿರುವ ಎಲ್ಲ ಉಪಕರಣಗಳನ್ನೂ ಒದಗಿಸಲು ಹಾಗೂ ಸಿಬ್ಬಂದಿಯನ್ನೂ ನಿಯೋಜಿಸಲು ಇ-ಆಡಳಿತ ಇಲಾಖೆಗೆ ಸೂಚಿಸಿದರು.

ಮನವಿದಾರರ ದೂರುಗಳನ್ನು ಪರಿಶೀಲಿಸಿ, ನಿಗದಿತ ಕೌಂಟರುಗಳಿಗೆ ತೆರಳಲು ಸೂಕ್ತ ಮಾರ್ಗದರ್ಶನ ನೀಡಲು ಪ್ರವೇಶ ದ್ವಾರದಲ್ಲಿಯೇ ಅಧಿಕಾರಿ, ಸಿಬ್ಬಂದಿಗಳ ಫೆಸಿಲಿಟೇಷನ್‌ ತಂಡವನ್ನು ನಿಯೋಜಿಸುವಂತೆ ನಿರ್ದೇಶನ ನೀಡಿದರು.

ಅಂದಿನ ದಿನ ವಿಧಾನಸೌಧದಲ್ಲಿ ಸೂಕ್ತ ಬಂದೋಬಸ್ತ್‌ ವ್ಯವಸ್ಥೆ ಮಾಡಲು ಹಾಗೂ ಸಂಚಾರ ನಿರ್ವಹಣೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಲು ಪೊಲೀಸ್‌ ಇಲಾಖೆಗೆ ತಿಳಿಸಿದರು.

ಸಭೆಯಲ್ಲಿ ಮುಖ್ಯಮಂತ್ರಿಯವರ ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕಚಂದ್ರ, ಇ-ಆಡಳಿತ ಇಲಾಖೆ ಕಾರ್ಯದರ್ಶಿ ಉಜ್ವಲ್‌ ಕುಮಾರ್‌ ಘೋಷ್‌, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಾರ್ಯದರ್ಶಿ ಅಜಯ್‌ ನಾಗಭೂಷಣ್‌ ಮತ್ತು ವಿವಿಧ ಇಲಾಖೆಗಳ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Previous Post

ಭಾರತ ಐಕ್ಯತಾ ಯಾತ್ರೆಯಲ್ಲಿ ಭದ್ರತಾ ವೈಫಲ್ಯ : ಸಚಿವ ಮಹದೇವಪ್ಪ ಆಕ್ರೋಶ

Next Post

ತಿಂಗಳ ಅಂತ್ಯಕ್ಕೆ ಸರ್ಕಾರಕ್ಕೆ ಜಾತಿ ಜನಗಣತಿ ಸಲ್ಲಿಕೆ : ಜಯಪ್ರಕಾಶ್ ಹೆಗ್ಡೆ

Related Posts

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?
Top Story

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

by ಪ್ರತಿಧ್ವನಿ
May 17, 2026
0

ಬೆಂಗಳೂರು : ದೇಶಾದ್ಯಂತ ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ 3 ರೂಪಾಯಿ ಬೆಲೆ ಏರಿಕೆಯಾಗಿರುವುದಕ್ಕೆ ಕೇಂದ್ರದ ವಿರುದ್ಧ ವಿಪಕ್ಷಗಳು ತೀವ್ರ ವಾಗ್ದಾಳಿ ನಡೆಸುತ್ತಿವೆ. ಅಲ್ಲದೆ ಇದರಿಂದ ಜನಸಾಮಾನ್ಯರ ಜೀವನದ ಮೇಲೆ...

Read moreDetails
KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

May 17, 2026
ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

May 17, 2026
ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

May 17, 2026
ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

May 16, 2026
Next Post
ತಿಂಗಳ ಅಂತ್ಯಕ್ಕೆ ಸರ್ಕಾರಕ್ಕೆ ಜಾತಿ ಜನಗಣತಿ ಸಲ್ಲಿಕೆ : ಜಯಪ್ರಕಾಶ್ ಹೆಗ್ಡೆ

ತಿಂಗಳ ಅಂತ್ಯಕ್ಕೆ ಸರ್ಕಾರಕ್ಕೆ ಜಾತಿ ಜನಗಣತಿ ಸಲ್ಲಿಕೆ : ಜಯಪ್ರಕಾಶ್ ಹೆಗ್ಡೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada