Mandya ಕೆರಗೋಡು ಧ್ವಜ ವಿವಾದಕ್ಕೆ ಸಂಬಂಧಿಸಿದ ಹೋರಾಟದಲ್ಲಿ ಭಾಗಿಯಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕೇಸರಿ ಶಾಲು ಧರಿಸಬಾರದಿತ್ತು, ನಾನು ಯಾವುದೇ ಕಾರಣಕ್ಕೂ ಕೇಸರಿ ಶಾಲು ಧರಿಸುವುದಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ (HD Deve Gowda) ಅವರು ಹೇಳಿದ್ದಾರೆ.

ನವದೆಹಲಿಯಲ್ಲಿ ಮಾತನಾಡಿದ ಅವರು, HD Kumaraswamy ಅವರು ಕೇಸರಿ ಶಾಲು ಧರಿಸಿದ್ದು ಹೆಚ್ಚು ಚರ್ಚೆಯಾಗುತ್ತಿದೆ. ಆದ್ರೆ ಅಕಸ್ಮಾತ್ ಆಗಿ ನಡೆದಿರುವ ಘಟನೆ. ಕಾಂಗ್ರೆಸ್ ವಿರುದ್ಧ ಹೋರಾಟ ಮಾಡಲು ನಾವು ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದೇವೆ, ಜೊತೆಯಾಗಿ ಹೋರಾಟ ಮಾಡುತ್ತಿದ್ದೇವೆ ಎಂದಿದ್ದಾರೆ.

ಕೆರಗೋಡು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವೇಳೆ ಯಾರೋ ಬಂದು ಕೇಸರಿ ಶಾಲು ಹಾಕಿರುತ್ತಾರೆ, ಆಯಾ ಸಂದರ್ಭಕ್ಕೆ ಹಾಕಿರ್ತಾರೆ, ಅದಕ್ಕೇನು ದೊಡ್ಡ ವ್ಯಾಖ್ಯಾನ ಮಾಡುವ ಅಗತ್ಯ ಇಲ್ಲ, ಕೇಸರಿ ಶಾಲು ಹಾಕಬಾರದಿತ್ತು. ನಮ್ಮ ಪಕ್ಷದ ಶಾಲು ಹಾಕಬಹುದಿತ್ತು, ನಾಳೆ ನಾನು ಮೋದಿ (Narendra Modi) ಅವರ ಜೊತೆಗೆ ಹೋದಾಗಲೂ ನನ್ನ ಪಕ್ಷದ ಶಾಲನ್ನೇ ಹಾಕುತ್ತೇನೆ. ನಾನು ಖಂಡಿತಾವಾಗಿ ಕೇಸರಿ ಶಾಲು ಹಾಕುವುದಿಲ್ಲ ಎಂದು ದೇವೇಗೌಡರು ಹೇಳಿದ್ದಾರೆ.
#HDdevegowda #Hdkumaraswamy #siddaramiah #modi #amithsha #mandya