Lokasabha ಚುನಾವಣೆಯಲ್ಲಿ ಕಾಂಗ್ರೆಸ್ (Congress) ಸೋತರೆ ಗ್ಯಾರಂಟಿ ಯೋಜನೆ ರದ್ದು ಆಗುತ್ತೆ ಎಂಬ ಶಾಸಕ ಬಾಲಕೃಷ್ಣ (Balakrishna) ಹೇಳಿಕೆ ವಿರುದ್ಧ ಚುನಾವಣೆ ಆಯೋಗಕ್ಕೆ ಜೆಡಿಎಸ್ ದೂರು ನೀಡಿದೆ.

ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ನೇತೃತ್ವದಲ್ಲಿ ಶಾಸಕರಾದ ಸ್ವರೂಪ್, ಸುರೇಶ್ ಬಾಬು, ಕರೆಮ್ಮ ನಾಯಕ್ ಒಳಗೊಂಡ ನಿಯೋಗ ಮುಖ್ಯ ಚುನಾವಣೆ ಆಯುಕ್ತರಿಗೆ ದೂರು ನೀಡಿದ್ದಾರೆ. ದೂರಿನ ಬಳಿಕ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಚುನಾವಣೆ ಮುಂಚೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ 5 ಗ್ಯಾರಂಟಿ ಘೋಷಣೆ ಮಾಡಿತ್ತು. ಗ್ಯಾರಂಟಿ ಹಿನ್ನಲೆ ಜನ ಕಾಂಗ್ರೆಸ್ ಅವರನ್ನ ಆಯ್ಕೆ ಮಾಡಿದ್ರು. ಇತ್ತೀಚೆಗೆ ಶಾಸಕ ಬಾಲಕೃಷ್ಣ ಹೇಳಿಕೆ ಬಹಿರಂಗವಾಗಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲದೇ ಹೋದರೆ ಗ್ಯಾರಂಟಿ ರದ್ದು ಮಾಡೋ ಬಗ್ಗೆ ಮಾತಾಡಿದ್ದಾರೆ. ಲೋಕಸಭೆ ಚುನಾವಣೆ ದೃಷ್ಟಿಯಿಂದ ಹಲವಾರು ಸಮಯದಲ್ಲಿ ಗ್ಯಾರಂಟಿ ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಸಂಸ್ಕೃತಿ ಪ್ರಾರಂಭ ಮಾಡಿದ್ದಾರೆ. ಇದು ಖಂಡನೀಯ. ಹೀಗಾಗಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದೇವೆ. ಕೂಡಲೇ ಶಾಸಕರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದೇವೆ ಎಂದಿದ್ದಾರೆ.

#Lokasabha #Jds #bjp #Balakrishna #Nikhilkumaraswamy #Electioncommision