AICC ಅಧ್ಯಕ್ಷ Mallikarjun Kharge ನೀಡಿದ ಹೇಳಿಕೆಯೊಂದಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಇಡೀ ಸಂಸತ್ತೇ ಒಂದು ಬಾರಿ ನಗೆಗಡಲಲ್ಲಿ ತೇಲಿದ ಪ್ರಸಂಗವೊಂದು ಇಂದು ನಡೆದಿದೆ.

ಸಂಸತ್ತಿನಲ್ಲಿ ಬಜೆಟ್ ಅಧಿವೇಶನದಲ್ಲಿ ಮಾತನಾಡುತ್ತಾ ಪ್ರಧಾನಿ ಮೋದಿಯವರತ್ತ ನೋಡಿ, ನಿಮಗೆ ಬಹುಮತ ಇದೆ. ಈ ಹಿಂದೆ 330-340 ಅವರು ಸ್ಥಾನಗಳನ್ನು ಹೊಂದಿದ್ರಿ. ಈ ಬಾರಿ ಅದು 400 ದಾಟುತ್ತಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಇದನ್ನು ಕೇಳಿ ಬಿಜೆಪಿ ನಾಯಕರು ಜೋರಾಗಿ ಚಪ್ಪಾಳೆ ತಟ್ಟಿದ್ದು, ಸಂಸತ್ ಭವನ ನಗೆಗಡಲಲ್ಲಿ ಮುಳುಗಿತು. ಸ್ವತಃ ಪ್ರಧಾನಿ ಮೋದಿಯವರು ಕೂಡ ಜೋರಾಗಿ ನಗತೊಡಗಿದರು. ಇದರ ವೀಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಖರ್ಗೆ ಹೇಳಿಕೆ ಕಾಂಗ್ರೆಸ್ ಪಕ್ಷದಲ್ಲೆ ಚರ್ಚೆಗೆ ಗ್ರಾಸವಾಗಿದೆ.

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದು, ನರೇಂದ್ರ ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿಯಾಗಲಿದ್ದಾರೆ ಎಂಬುದನ್ನು ರಾಜ್ಯಸಭೆಯಲ್ಲಿ ಸ್ವತಃ ಕಾಂಗ್ರೆಸ್ ಅಧ್ಯಕ್ಷರೇ ಭವಿಷ್ಯ ನುಡಿದಿದ್ದಾರೆ ಎಂದು ಖರ್ಗೆಯವರ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಇತ್ತ ಬಿಜೆಪಿಯವರು ಕೂಡ ಈ ವೀಡಿಯೋವನ್ನು ಶೇರ್ ಮಾಡಿಕೊಂಡು ಕಾಂಗ್ರೆಸ್ ಗೆ ಟಾಂಗ್ ಕೊಟ್ಟಿದ್ದಾರೆ.
#Congress #bjp #Lokasabhaelection #Mallikharjunkharge #modi